ETV Bharat / bharat

ಶಿರಡಿ ಸಾಯಿಬಾಬಾ ಸಂಸ್ಥಾನ ಮಂಡಳಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್‌

author img

By

Published : Sep 13, 2022, 7:16 PM IST

ಮಹಾ ವಿಕಾಸ್ ಅಘಾಡಿ ಸರ್ಕಾರ ನೇಮಿಸಿದ್ದ ಸಾಯಿಬಾಬಾ ಸಂಸ್ಥಾನದ ಟ್ರಸ್ಟಿಗಳ ಮಂಡಳಿಯನ್ನು ಮುಂಬೈ ಹೈಕೋರ್ಟ್‌ನ ಔರಂಗಾಬಾದ್ ಪೀಠ ರದ್ದುಗೊಳಿಸಿದೆ

shirdi-saibaba-sansthan-board-dismissed-by-aurangabad-bench-of-the-bombay-high-court
ಶಿರಡಿ ಸಾಯಿಬಾಬಾ ಸಂಸ್ಥಾನ ಮಂಡಳಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್‌

ಔರಂಗಬಾದ್ (ಮಹಾರಾಷ್ಟ್ರ) : ಶಿವಸೇನಾ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರ ನೇಮಿಸಿದ್ದ ಸಾಯಿಬಾಬಾ ಸಂಸ್ಥಾನದ ಟ್ರಸ್ಟಿಗಳ ಮಂಡಳಿಯನ್ನು ಮುಂಬೈ ಹೈಕೋರ್ಟ್‌ನ ಔರಂಗಾಬಾದ್ ಪೀಠ ರದ್ದುಗೊಳಿಸಿದೆ. ಇನ್ನೆರಡು ತಿಂಗಳಲ್ಲಿ ನೂತನ ಆಡಳಿತ ಮಂಡಳಿಯನ್ನು ನೇಮಿಸುವಂತೆ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ.

ಮಹಾವಿಕಾಸ್ ಅಘಾಡಿ ಸರ್ಕಾರವು ಕಳೆದ ವರ್ಷ ಸೆಪ್ಟೆಂಬರ್ 16 ರಂದು ಸಾಯಿ ಸಂಸ್ಥಾನಕ್ಕೆ ಹನ್ನೊಂದು ಟ್ರಸ್ಟಿಗಳನ್ನು ನೇಮಿಸಿತ್ತು. ಅದರಲ್ಲಿ ಅಧ್ಯಕ್ಷ ಸ್ಥಾನವನ್ನು ಎನ್‌ಸಿಪಿ ಮತ್ತು ಉಪಾಧ್ಯಕ್ಷ ಸ್ಥಾನವನ್ನು ಶಿವಸೇನೆ ಹಂಚಿಕೊಂಡಿತ್ತು. ಕೋಪರಗಾಂವ್‌ನ ಎನ್‌ಸಿಪಿ ಶಾಸಕ ಅಶುತೋಷ್ ಕಾಳೆ ಅವರನ್ನು ಸಾಯಿ ಸಂಸ್ಥಾನದ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.

ಈ ಬಗ್ಗೆ ಮಂಡಳಿಯ ನೇಮಕ ಕಾನೂನುಬದ್ಧವಾಗಿ ನಡೆದಿಲ್ಲ ಎಂದು ಸಾಮಾಜಿಕ ಕಾರ್ಯಕರ್ತ ಸಂಜಯ್ ಕಾಳೆ ಅವರು ಔರಂಗಾಬಾದ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯವು ಮಂಡಳಿಯನ್ನು ರದ್ದುಗೊಳಿಸಿ ತೀರ್ಪು ನೀಡಿದೆ. ಶಿರಡಿ ಸಾಯಿಬಾಬಾ ಸಂಸ್ಥಾನವು ದೇಶದ ಎರಡನೇ ಅತ್ಯಂತ ಶ್ರೀಮಂತ ದೇವಾಲಯ ಎಂದು ಹೆಸರುವಾಸಿಯಾಗಿದೆ ಮತ್ತು ಸಾಯಿ ಸಂಸ್ಥಾನವು ವಾರ್ಷಿಕ ಐದು ನೂರು ಕೋಟಿಗೂ ಹೆಚ್ಚು ವಹಿವಾಟು ಹೊಂದಿದೆ.

ಇದನ್ನೂ ಓದಿ : ಹೈಕೋರ್ಟ್​ ಅಂಗಳಕ್ಕೆ ಜ್ಞಾನವಾಪಿ ಕೇಸ್: ಹಿಂದೂ, ಮುಸ್ಲಿಂ ಪಕ್ಷಗಾರರಿಂದ ಅರ್ಜಿ ಸಲ್ಲಿಕೆ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.