ಮುಂಬೈ, ಮಹಾರಾಷ್ಟ್ರ: ಶಿವಸೇನಾ ಶಾಸಕ ಮಂಗೇಶ್ ಕುಡಾಲ್ಕರ್ ಪತ್ನಿ ರಜನಿ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ.
ಹಿರಿಯ ಅಧಿಕಾರಿಗಳು ಘಟನೆ ನಡೆದ ಶಾಸಕರ ನಿವಾಸಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣ ಸ್ಪಷ್ಟವಾಗಿಲ್ಲ.