ಲಖನೌ(ಉತ್ತರಪ್ರದೇಶ): ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 403 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ನಿಲ್ಲಿಸುವುದಾಗಿ ಶಿವಸೇನೆ ಘೋಷಿಸಿದೆ. ಪಕ್ಷವು ಇನ್ನೂ ಯಾವುದೇ ರಾಜಕೀಯ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿಲ್ಲ. ಆದರೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯಿದೆ.
ಈ ಕುರಿತಂತೆ ಉತ್ತರ ಪ್ರದೇಶದಲ್ಲಿ ಶಿವಸೇನೆ ನಾಯಕರು ಶನಿವಾರ ಲಖನೌನಲ್ಲಿ ಸಭೆ ನಡೆಸಿದ್ದು, ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗ್ತಿದೆ. ಉತ್ತರಪ್ರದೇಶದ ಶಿವಸೇನಾ ಮುಖ್ಯಸ್ಥ, ಠಾಕೂರ್ ಅನಿಲ್ ಸಿಂಗ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಯೋಗಿ ಆದಿತ್ಯನಾಥ್ ಆಡಳಿತದಲ್ಲಿ 'ಜಂಗಲ್ ರಾಜ್' ಚಾಲ್ತಿಯಲ್ಲಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಸಭೆಯಲ್ಲಿ ಶಿಕ್ಷಣ, ಆರೋಗ್ಯ ವ್ಯವಸ್ಥೆ, ರೈತರ ಸಮಸ್ಯೆ ಸೇರಿ ಹಲವಾರು ವಿಚಾರಗಳ ಬಗ್ಗೆ ಚರ್ಚಿಸಲಾಗಿದೆ. ಭವಿಷ್ಯದಲ್ಲಿ ಕಾಂಗ್ರೆಸ್ ಜತೆಗಿನ ಮೈತ್ರಿಗೆ ಶಿವಸೇನೆ ಮುಕ್ತವಾಗಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ದಿಢೀರ್ ರಾಜಕೀಯ ಬೆಳವಣಿಗೆ: ವೀಕ್ಷಕರಾಗಿ ಜೋಶಿ, ತೋಮರ್ ಗುಜರಾತ್ಗೆ ಭೇಟಿ
ಯುಪಿಸಿಸಿ(ಉತ್ತರಪ್ರದೇಶ ಪ್ರಾದೇಶಿಕ ಕಾಂಗ್ರೆಸ್ ಕಮಿಟಿ) ಅಧ್ಯಕ್ಷ ಅಜಯ್ ಕುಮಾರ್ ಲಲ್ಲು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವು ಇತರೆ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಾಗಿ ಹೇಳಿದ್ರು. ಈ ಹಿಂದೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಮೈತ್ರಿ ಕಲ್ಪನೆಗೆ ನಮ್ಮ ಪಕ್ಷ ಬದ್ಧವಾಗಿದೆ ಎಂದಿದ್ದರು.