ಚಿತ್ರದುರ್ಗ: ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಕಳೆದ ರಾತ್ರಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.
ವಿವರ: ಗುರುವಾರ ತಡರಾತ್ರಿ ಪೊಲೀಸರು ಶ್ರೀಗಳನ್ನು ಬಂಧಿಸಿದ್ದು, ಕಾನೂನು ಪ್ರಕಾರ ವೈದ್ಯಕೀಯ ಪರೀಕ್ಷೆ ನಡೆಸಿದರು. ಇದಾದ ಬಳಿಕ ಚಿತ್ರದುರ್ಗ ಜಿಲ್ಲಾ ನ್ಯಾಯಾಧೀಶೆ ಕೋಮಲಾ ಅವರ ಮುಂದೆ ಹಾಜರುಪಡಿಸಲಾಗಿತ್ತು. ಕೋರ್ಟ್, ಶ್ರೀಗಳನ್ನು ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿತು. ಇದರ ಬೆನ್ನಲ್ಲೇ ಶ್ರೀಗಳನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಜಿಲ್ಲಾ ಕಾರಾಗೃಹದಲ್ಲಿ ಶ್ರೀಗಳು: ಇದಕ್ಕೂ ಮುನ್ನ ಶರಣರ ಪರ ವಕೀಲರು ಜಾಮೀನು ಕೋರಿ ಸ್ಥಳದಲ್ಲೇ ಅರ್ಜಿ ಸಲ್ಲಿಸಿದ್ದರು. ಅರ್ಜಿ ತಿರಸ್ಕರಿಸಿದ ನ್ಯಾಯಾಧೀಶರು ಶುಕ್ರವಾರ ನ್ಯಾಯಾಲಯದಲ್ಲಿ ಸಲ್ಲಿಸುವಂತೆ ಸೂಚಿಸಿದ್ದಾರೆ. ನಂತರ ಪೊಲೀಸರು ಶ್ರೀಗಳನ್ನು ಚಿತ್ರದುರ್ಗಾ ಜಿಲ್ಲಾ ಕಾರಾಗೃಹಕ್ಕೆ ಕರೆದೊಯ್ದರು.
-
#WATCH | Karnataka | Shivamurthy Murugha Sharanaru, the chief pontiff of Sri Murugha Mutt brought to Chitradurga district jail after he was sent to 14-day judicial custody in the case of sexual assault of minor girls. https://t.co/VyP6TtTkjf pic.twitter.com/X8eea7nrJj
— ANI (@ANI) September 1, 2022 " class="align-text-top noRightClick twitterSection" data="
">#WATCH | Karnataka | Shivamurthy Murugha Sharanaru, the chief pontiff of Sri Murugha Mutt brought to Chitradurga district jail after he was sent to 14-day judicial custody in the case of sexual assault of minor girls. https://t.co/VyP6TtTkjf pic.twitter.com/X8eea7nrJj
— ANI (@ANI) September 1, 2022#WATCH | Karnataka | Shivamurthy Murugha Sharanaru, the chief pontiff of Sri Murugha Mutt brought to Chitradurga district jail after he was sent to 14-day judicial custody in the case of sexual assault of minor girls. https://t.co/VyP6TtTkjf pic.twitter.com/X8eea7nrJj
— ANI (@ANI) September 1, 2022
ಇದನ್ನೂ ಓದಿ: ಪೋಕ್ಸೋ ಪ್ರಕರಣ ವಿಚಾರ: ಮುರುಘಾ ಶ್ರೀಗಳ ಬಂಧನ.. ಅಲೋಕ್ ಕುಮಾರ್
ಈ ಪ್ರಕರಣವನ್ನು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್) ಗಂಭೀರವಾಗಿ ಪರಿಗಣಿಸಿದ್ದು ಈಗಾಗಲೇ ಸ್ವಯಂಪ್ರೇರಿತವಾಗಿ ಪರಿಗಣಿಸಿ ದೂರು ದಾಖಲಿಸಿಕೊಂಡಿದೆ.