ಮುಂಬೈ: ಕರ್ನಾಟಕದ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಮೊದಲು ಇತಿಹಾಸವನ್ನು ಅರ್ಥಮಾಡಿಕೊಳ್ಳಲಿ. ಮುಂಬೈನಲ್ಲಿ ಕನ್ನಡಿಗರಿಗೆ ಬೇಧ-ಭಾವ ಮಾಡಲಾಗುತ್ತಿಲ್ಲ ಎಂದು ಹೇಳುವ ಮೂಲಕ ಶಿವಸೇನೆ ಸಂಸದ ಸಂಜಯ್ ರಾವತ್ ಸವದಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಮುಂಬೈನಲ್ಲಿ ಕನ್ನಡ ಶಾಲೆ ಇದ್ದು, ಒಂದು ಸಂಸ್ಥೆ ಸಹ ಇದೆ. ಆದರೆ ಬೆಳಗಾವಿಯಲ್ಲಿ ಈ ಪರಿಸ್ಥಿತಿ ಇಲ್ಲ. ಈ ಹಿನ್ನೆಲೆ ಕರ್ನಾಟಕದ ಉಪಮುಖ್ಯಮಂತ್ರಿ ಮುಂಬೈಗೆ ಬಂದು ಇಲ್ಲಿನ ಕನ್ನಡಿಗರೊಂದಿಗೆ ಚರ್ಚಿಸಿದ್ದಾರೆ. ಮುಂಬೈನಲ್ಲಿರುವ ಕನ್ನಡಿಗರು ಬೆಳಗಾವಿಗೆ ಬರಬೇಕು ಎಂಬುದು ಅವರ ಅಭಿಲಾಷೆಯಾಗಿದೆ. ಕರ್ನಾಟಕ ಸರ್ಕಾರಕ್ಕೆ ನೆನಪಿರಲಿ, ಈಗ ಇಲ್ಲಿರುವುದು ಠಾಕ್ರೆ ಸರ್ಕಾರವೆಂಬುದು ಎಂದು ಟಾಂಗ್ ನೀಡಿದ್ದಾರೆ.
ಓದಿ: ನಾವು ಮುಂಬೈ ಕರ್ನಾಟಕದವರು, ಮುಂಬೈ ನಮ್ಮದು: ಮಹಾ ಸಿಎಂಗೆ ಡಿಸಿಎಂ ಸವದಿ ತಿರುಗೇಟು
ಲಕ್ಷ್ಮಣ್ ಸವದಿ ಹೇಳಿದ್ದೇನು ?
ಮುಂಬೈಯನ್ನು ಕರ್ನಾಟಕಕ್ಕೆ ಸೇರಿಸಬೇಕು. ಅದು ಆಗುವವರೆಗೂ, ಮುಂಬೈಯನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಬೇಕು. ನಾನು ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ಮನವಿ ಮಾಡಿಕೊಳ್ಳುತ್ತೇನೆ ಎಂದಿದ್ದರು.