ಚೆನ್ನೈ(ತಮಿಳುನಾಡು): ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಆರೋಪಿಯೋರ್ವನನ್ನು ದುಷ್ಕರ್ಮಿಗಳ ತಂಡವೊಂದು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಿದೆ.
ಚೆನ್ನೈನ ವಿಲ್ಲಿವಕ್ಕಂ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ರಂಜಿತ್ ಎಂಬ ವ್ಯಕ್ತಿ ದುಷ್ಕರ್ಮಿಗಳ ದಾಳಿಗೆ ಬಲಿಯಾಗಿದ್ದಾನೆ.
ಪೊಲೀಸರು ತಿಳಿಸಿರುವ ಮಾಹಿತಿ ಪ್ರಕಾರ, ರಂಜನ್ ತನ್ನ ಗ್ಯಾಂಗ್ನೊಂದಿಗೆ ಕಳೆದ ವರ್ಷ ರೌಡಿ ಅಲೆಕ್ಸ್ ಎಂಬಾತನ ಕೊಲೆ ಮಾಡಿದ್ದ. ಈ ವೇಳೆ ರಂಜಿತ್ ಮತ್ತು ಆತನ ತಂಡವನ್ನು ಪೊಲೀಸರು ಬಂಧಿಸಿದ್ದರು. ಆದರೆ, ಕಳೆದ ಕೆಲ ತಿಂಗಳ ಹಿಂದೆ ಆರೋಪಿಗಳು ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದರು.
ಇದನ್ನೂ ಓದಿ: ಕೇಜ್ರಿವಾಲ್ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಪಂಜಾಬ್ ನಿಯೋಜಿತ ಸಿಎಂ ಭಗವಂತ್ ಮನ್!
ನಿನ್ನೆ ಚೆನ್ನೈನ ವಿಲ್ಲಿವಕ್ಕಂ ಪ್ರದೇಶದಲ್ಲಿ ನಿಂತುಕೊಂಡಿದ್ದ ವೇಳೆ ಮತ್ತೊಂದು ಗ್ಯಾಂಗ್ ಆತನ ಮೇಲೆ ದಾಳಿ ನಡೆಸಿ, ನಡುರಸ್ತೆಯಲ್ಲೇ ಕೊಚ್ಚಿ ಕೊಲೆ ಮಾಡಿದೆ. ಸಿಸಿಟಿವಿ ದೃಶ್ಯಾವಳಿಯ ಆಧಾರದ ಮೇಲೆ ಆರೋಪಿಗಳಿಗಾಗಿ ಶೋಧಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.