ಶ್ರೀನಗರ(ಜಮ್ಮು ಕಾಶ್ಮೀರ): ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬುಧವಾರ ರಾತ್ರಿಯಿಂದ ನಡೆದ ಎನ್‌ಕೌಂಟರ್ ಅಂತ್ಯಗೊಂಡಿದ್ದು, ಭದ್ರತಾ ಪಡೆಗಳು ಪ್ರದೇಶದಲ್ಲಿ 13 ಗಂಟೆಗಳ ಶೋಧ ಕಾರ್ಯಾಚರಣೆ ನಡೆಸಿದರೂ, ಉಗ್ರರು ಸ್ಥಳದಿಂದ ತಪ್ಪಿಸಿಕೊಂಡಿದ್ದಾರೆ ಎಂಬ ಮಾಹಿತಿ ದೊರಕಿದೆ.
ಶೋಪಿಯಾನ್ ಜಿಲ್ಲೆಯ ನೌಗಾಮ್ ಪ್ರದೇಶದ ಚೆಕ್ ಗ್ರಾಮದಲ್ಲಿ ಬುಧವಾರ ಸಂಜೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಕನಿಷ್ಠ ಇಬ್ಬರು ಸೇನಾ ಸಿಬ್ಬಂದಿ ಗಾಯಗೊಂಡಿದ್ದು, ಉಗ್ರರು ಪರಾರಿಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಪೊಲೀಸರು ಮತ್ತು ಸೇನೆ ಜಂಟಿ ಕಾರ್ಯಾಚರಣೆ ನಡೆಸಿದ್ದು, ಭದ್ರತಾ ಪಡೆಗಳು ಸ್ಥಳದ ಕಡೆಗೆ ಪ್ರವೇಶಿಸುತ್ತಿದ್ದಂತೆ ಉಗ್ರರು ಗುಂಡಿನ ದಾಳಿ ನಡೆಸಿದರು. ಈ ವೇಳೆ, ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಲು ಮುಂದಾದಾಗ ಉಗ್ರರು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ