ನವ ದೆಹಲಿ: ಲಿವ್-ಇನ್ ರಿಲೇಷನ್ಶಿಪ್ನಲ್ಲಿದ್ದ ಯುವತಿ ಶ್ರದ್ಧಾ ವಾಲ್ಕರ್ ಕೊಲೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ದೆಹಲಿ ಸಮೀಪದ ಅರಣ್ಯದಲ್ಲಿ ಪತ್ತೆಯಾದ ಮೂಳೆಗಳ ಡಿಎನ್‌ಎ ಪರೀಕ್ಷೆ ಮಾಡಿಸಲಾಗಿದ್ದು, ಶ್ರದ್ಧಾ ತಂದೆಯ ಮಾದರಿಗಳೊಂದಿಗೆ ಹೊಂದಿಕೆಯಾಗಿದೆ.
ಶ್ರದ್ಧಾ ವಾಲ್ಕರ್ ಅವರನ್ನು ಆಕೆಯ ಗೆಳೆಯ ಅಫ್ತಾಬ್ ಪೂನಾವಾಲಾ ಕೊಂದು ಅನೇಕ ತುಂಡುಗಳಾಗಿ ಕತ್ತರಿಸಿ, ದೇಹದ ಭಾಗಗಳನ್ನು ಬೇರೆ ಬೇರೆ ಕಡೆಗಳಲ್ಲಿ ಎಸೆದಿದ್ದ. ಈ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಮೆಹ್ರೌಲಿ ಅರಣ್ಯ ಮತ್ತು ಗುರುಗ್ರಾಮ್‌ನಲ್ಲಿ ದೇಹದ ಭಾಗಗಳನ್ನು ಪತ್ತೆ ಹಚ್ಚಿದ್ದರು. ಮೆಹ್ರೌಲಿ ಅರಣ್ಯದಲ್ಲಿ ಒಟ್ಟು 13 ಮೂಳೆಗಳು ಸಿಕ್ಕಿದ್ದವು.
ಇದನ್ನೂ ಓದಿ: 'ಮಗಳ ಕೊಂದ ಹಂತಕ ಅಫ್ತಾಬ್ನನ್ನು ಗಲ್ಲಿಗೇರಿಸಿ': ಶ್ರದ್ಧಾ ತಂದೆ ವಿಕಾಸ್ ವಾಲ್ಕರ್ ಆಗ್ರಹ
ಈ ಮೂಳೆಗಳನ್ನು ಪೊಲೀಸರು ಶ್ರದ್ಧಾ ತಂದೆ ವಿಕಾಸ್ ವಾಲ್ಕರ್ ಅವರ ಮಾದರಿಗಳೊಂದಿಗೆ ಹೋಲಿಕೆ ಮಾಡಿ ಡಿಎನ್‌ಎ ಪರೀಕ್ಷೆ ನಡೆಸಿದ್ದಾರೆ. ಇದರಿಂದಾಗಿ ಈ ಮೂಳೆಗಳು ಶ್ರದ್ಧಾ ವಾಲ್ಕರ್ ಅವರದ್ದೇ ಎಂದು ಅಧಿಕೃತವಾಗಿ ದೃಢಪಟ್ಟಿದೆ. ಹತ್ಯೆ ಪ್ರಕರಣದ ತನಿಖೆಗೂ ಈ ಬೆಳವಣಿಗೆ ಸಹಕಾರಿಯಾಗಿದೆ.
ಇದನ್ನೂ ಓದಿ: ಶ್ರದ್ಧಾ ಶವದ ಪಕ್ಕ ಕುಳಿತು ಗಾಂಜಾ ಸೇದಿದ್ದ ಅಫ್ತಾಬ್: ಮತ್ತೊಂದು ಬ್ಯಾಗ್ ಪತ್ತೆ, ಸ್ನೇಹಿತರ ಚಾಟಿಂಗ್ ಪರಿಶೀಲನೆ