ನವದೆಹಲಿ: 102 ವರ್ಷದ ಹಳೆಯ ಕಾರ್ಖಾನೆಯಾದ ಶಿವಮೊಗ್ಗದ ಭದ್ರಾವತಿಯಲ್ಲಿರುವ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (ವಿಐಎಸ್ಪಿ) ಯನ್ನು ಮುಚ್ಚಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ. ಲೋಕಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಹಣಕಾಸು ಇಲಾಖೆ ರಾಜ್ಯ ಸಚಿವ ಭಾಗವತ್ ಕರದ್, ತೀರಾ ಹಳೆಯದಾದ ಕಾರ್ಖಾನೆಯ ಪುನರುಜ್ಜೀವನಕ್ಕೆ ಹಲವಾರು ಪ್ರಯತ್ನಗಳ ಹೊರತಾಗಿಯೂ ಫಲ ಕಾಣದ ಕಾರಣ ಅದನ್ನು ಮುಚ್ಚಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
-
ಇಂದು ರಾಜ್ಯಸಭೆಯಲ್ಲಿ ಸರ್ಕಾರ ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ & ಉಕ್ಕಿನ ಕಾರ್ಖಾನೆಯನ್ನು ಶಾಶ್ವತವಾಗಿ ಮುಚ್ಚಲಿದೆ ಎಂದು ಒಪ್ಪಿಕೊಂಡಿದೆ.
— Jairam Ramesh (@Jairam_Ramesh) February 13, 2023 " class="align-text-top noRightClick twitterSection" data="
ಕಾರ್ಖಾನೆಗೆ ಕಬ್ಬಿಣದ ಅದಿರಿನ ಮೂಲ ಇಲ್ಲಾ ಎಂಬ ಕಾರಣ ನೀಡಿ ಮುಚ್ಚಲಾಗುತ್ತಿದೆ. ರಾಜ್ಯದಲ್ಲಿ ಖಾಸಗಿ ಕಾರ್ಖಾನೆಗಳು ಗಣಿಗಳನ್ನು ಹೊಂದಿದ್ದರೂ SAILಗೆ ಗಣಿ ಇಲ್ಲಾ ಎಂಬುದು ಆಶ್ಚರ್ಯಕರ! 1/2
">ಇಂದು ರಾಜ್ಯಸಭೆಯಲ್ಲಿ ಸರ್ಕಾರ ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ & ಉಕ್ಕಿನ ಕಾರ್ಖಾನೆಯನ್ನು ಶಾಶ್ವತವಾಗಿ ಮುಚ್ಚಲಿದೆ ಎಂದು ಒಪ್ಪಿಕೊಂಡಿದೆ.
— Jairam Ramesh (@Jairam_Ramesh) February 13, 2023
ಕಾರ್ಖಾನೆಗೆ ಕಬ್ಬಿಣದ ಅದಿರಿನ ಮೂಲ ಇಲ್ಲಾ ಎಂಬ ಕಾರಣ ನೀಡಿ ಮುಚ್ಚಲಾಗುತ್ತಿದೆ. ರಾಜ್ಯದಲ್ಲಿ ಖಾಸಗಿ ಕಾರ್ಖಾನೆಗಳು ಗಣಿಗಳನ್ನು ಹೊಂದಿದ್ದರೂ SAILಗೆ ಗಣಿ ಇಲ್ಲಾ ಎಂಬುದು ಆಶ್ಚರ್ಯಕರ! 1/2ಇಂದು ರಾಜ್ಯಸಭೆಯಲ್ಲಿ ಸರ್ಕಾರ ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ & ಉಕ್ಕಿನ ಕಾರ್ಖಾನೆಯನ್ನು ಶಾಶ್ವತವಾಗಿ ಮುಚ್ಚಲಿದೆ ಎಂದು ಒಪ್ಪಿಕೊಂಡಿದೆ.
— Jairam Ramesh (@Jairam_Ramesh) February 13, 2023
ಕಾರ್ಖಾನೆಗೆ ಕಬ್ಬಿಣದ ಅದಿರಿನ ಮೂಲ ಇಲ್ಲಾ ಎಂಬ ಕಾರಣ ನೀಡಿ ಮುಚ್ಚಲಾಗುತ್ತಿದೆ. ರಾಜ್ಯದಲ್ಲಿ ಖಾಸಗಿ ಕಾರ್ಖಾನೆಗಳು ಗಣಿಗಳನ್ನು ಹೊಂದಿದ್ದರೂ SAILಗೆ ಗಣಿ ಇಲ್ಲಾ ಎಂಬುದು ಆಶ್ಚರ್ಯಕರ! 1/2
ನಷ್ಟದಲ್ಲಿರುವ ಕಾರ್ಖಾನೆಯನ್ನು ಸರ್ಕಾರ ಖಾಸಗೀಕರಣಗೊಳಿಸಲು ಯೋಜಿಸಿತ್ತು. ಅದರಂತೆ 2019 ರ ಜುಲೈನಲ್ಲಿ ಕಾರ್ಖಾನೆಯ ಎಲ್ಲ ಪಾಲನ್ನು ಮಾರಾಟ ಮಾಡಲು ಟೆಂಡರ್ ಕರೆಯಲಾಗಿತ್ತು. ಆದರೆ, ನಷ್ಟದಲ್ಲಿರುವ ಘಟಕವನ್ನು ಮುನ್ನಡೆಸಲು ಯಾರೂ ಮುಂದೆ ಬರಲಿಲ್ಲ. ಹೀಗಾಗಿ ಘಟಕವನ್ನು ಬಂದ್ ಮಾಡಲಾಗುವುದು ಎಂದು ತಿಳಿಸಿದರು. ಹಳೆಯ ಯಂತ್ರೋಪಕರಣಗಳು, ನಿರಂತರ ನಷ್ಟ, ದೀರ್ಘಕಾಲದವರೆಗೆ ಇಲ್ಲಿನ ಯಂತ್ರಗಳು ಸ್ಥಗಿತಗೊಂಡಿರುವ ಕಾರಣ, ಘಟಕ ಅನುತ್ಪಾದಿತವಾಗಿದೆ. ಮುಚ್ಚುವುದೊಂದೇ ಈಗಿರುವ ದಾರಿ ಎಂದು ಸಚಿವರು ತಿಳಿಸಿದರು.
-
ಭದ್ರಾವತಿಯು ಕಬ್ಬಿಣ ಅದಿರು ಸಂಪತ್ಭರಿತ ಬಳ್ಳಾರಿಯಿಂದ ಕೇವಲ 250 ಕಿಮೀ ನಷ್ಟು ಅಂತರದಲ್ಲಿದ್ದರೂ ಈ ಕಾರಣ ನೀಡಲಾಗಿದೆ.
— Jairam Ramesh (@Jairam_Ramesh) February 13, 2023 " class="align-text-top noRightClick twitterSection" data="
ಗಣಿ ಪರವಾನಗಿಯನ್ನು VISLಗೆ ಅಕ್ಟೋಬರ್ 2011ರಲ್ಲಿಯೇ ನೀಡಲಾಗಿದ್ದರೂ, ಈ ಮೋದಿ ಸರ್ಕಾರ ಈವರೆಗೂ ಏನನ್ನೂ ಮಾಡಿಲ್ಲಾ. 2/2
">ಭದ್ರಾವತಿಯು ಕಬ್ಬಿಣ ಅದಿರು ಸಂಪತ್ಭರಿತ ಬಳ್ಳಾರಿಯಿಂದ ಕೇವಲ 250 ಕಿಮೀ ನಷ್ಟು ಅಂತರದಲ್ಲಿದ್ದರೂ ಈ ಕಾರಣ ನೀಡಲಾಗಿದೆ.
— Jairam Ramesh (@Jairam_Ramesh) February 13, 2023
ಗಣಿ ಪರವಾನಗಿಯನ್ನು VISLಗೆ ಅಕ್ಟೋಬರ್ 2011ರಲ್ಲಿಯೇ ನೀಡಲಾಗಿದ್ದರೂ, ಈ ಮೋದಿ ಸರ್ಕಾರ ಈವರೆಗೂ ಏನನ್ನೂ ಮಾಡಿಲ್ಲಾ. 2/2ಭದ್ರಾವತಿಯು ಕಬ್ಬಿಣ ಅದಿರು ಸಂಪತ್ಭರಿತ ಬಳ್ಳಾರಿಯಿಂದ ಕೇವಲ 250 ಕಿಮೀ ನಷ್ಟು ಅಂತರದಲ್ಲಿದ್ದರೂ ಈ ಕಾರಣ ನೀಡಲಾಗಿದೆ.
— Jairam Ramesh (@Jairam_Ramesh) February 13, 2023
ಗಣಿ ಪರವಾನಗಿಯನ್ನು VISLಗೆ ಅಕ್ಟೋಬರ್ 2011ರಲ್ಲಿಯೇ ನೀಡಲಾಗಿದ್ದರೂ, ಈ ಮೋದಿ ಸರ್ಕಾರ ಈವರೆಗೂ ಏನನ್ನೂ ಮಾಡಿಲ್ಲಾ. 2/2
ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಟ್ವೀಟ್ ಮಾಡಿ ಟೀಕಿಸಿದ್ದು, ಶಿವಮೊಗ್ಗದ ಭದ್ರಾವತಿಯು ಕಬ್ಬಿಣ ಅದಿರು ಇರುವ ಸಂಪತ್ಭರಿತ ಬಳ್ಳಾರಿಯಿಂದ ಕೇವಲ 250 ಕಿಮೀ ನಷ್ಟು ಅಂತರದಲ್ಲಿದೆ. ಹೀಗಿದ್ದರೂ ಗಣಿ ಕೊರತೆಯ ಬಗ್ಗೆ ಕೇಂದ್ರ ಸರ್ಕಾರ ಹೇಳಿದೆ. ಗಣಿ ಪರವಾನಗಿಯನ್ನು ವಿಐಎಸ್ಎಲ್ಗೆ 2011ರ ಅಕ್ಟೋಬರ್ನಲ್ಲಿಯೇ ನೀಡಲಾಗಿದ್ದರೂ ಮೋದಿ ಸರ್ಕಾರ ಈವರೆಗೂ ಏನನ್ನೂ ಮಾಡಿಲ್ಲ ಎಂದು ಕಿಡಿಕಾರಿದ್ದಾರೆ.
ಮುಚ್ಚುವ ಪ್ರಸ್ತಾವನೆಗೆ ಅಂಗೀಕಾರ: ಇದಕ್ಕೂ ಮೊದಲು ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಸಭೆಯಲ್ಲಿ ಕಾರ್ಖಾನೆ ಮುಚ್ಚಲು ಸಲ್ಲಿಸಲಾದ ಪ್ರಸ್ತಾವನೆಯನ್ನು ಅಂಗೀಕರಿಸಲಾಗಿತ್ತು. ಕಾರ್ಮಿಕ ಸಂಘಟನೆಯಾದ ವಿಐಎಸ್ಎಲ್ಗೆ ಈ ಬಗ್ಗೆ ಅಧಿಕೃತ ಮಾಹಿತಿಯನ್ನೂ ನೀಡಲಾಗಿತ್ತು. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಕೂಡ ಕಾರ್ಖಾನೆ ಬಂದ್ ಬಗ್ಗೆ ವಿಚಾರ ನಮ್ಮ ಕೈ ಮೀರಿ ಹೋಗಿದೆ ಎಂದು ಹೇಳಿ ಅಸಹಾಯಕತೆ ತೋರಿದ್ದರು.
102 ವರ್ಷದ ಇತಿಹಾಸದ ಕಾರ್ಖಾನೆ: ಈ ಕಾರ್ಖಾನೆಯನ್ನು 1918- 1919 ರಲ್ಲಿ ಆರಂಭಿಸಲಾಗಿತ್ತು. ಆರಂಭದಲ್ಲಿ 19 ಸಾವಿರಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದರು. 102 ವರ್ಷದ ಇತಿಹಾಸ ಇರುವ ಕಾರ್ಖಾನೆಯನ್ನು ಉಳಿಸಿಕೊಳ್ಳಲು ಕಾರ್ಮಿಕರು ಸತತ 10 ವರ್ಷಗಳಿಂದ ಹೋರಾಟಗಳನ್ನು ನಡೆಸುತ್ತಾ ಬಂದಿದ್ದರು.
ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯಲ್ಲಿ ತಯಾರಾದ ಕಬ್ಬಿಣ ಮತ್ತು ಉಕ್ಕು ದೇಶದ ರಕ್ಷಣಾ ಇಲಾಖೆಗೆ ನೀಡಲಾಗುತ್ತಿತ್ತು. ಅಷ್ಟೊಂದು ಉತೃಷ್ಠವಾದ ಕಬ್ಬಿಣ ಮತ್ತು ಉಕ್ಕು ಇಲ್ಲಿ ತಯಾರಾಗುತ್ತಿತ್ತು. ಕಾರ್ಖಾನೆ ಮತ್ತಷ್ಠು ಅಭಿವೃದ್ಧಿ ಕಾಣಲಿ ಎಂದು ರಾಜ್ಯ ಸರ್ಕಾರ 1989-90 ರಲ್ಲಿ ಕೇಂದ್ರ ಸರ್ಕಾರ ಮತ್ತು ಭಾರತೀಯ ಉಕ್ಕು ಪ್ರಾಧಿಕಾರಕ್ಕೆ ಕೇವಲ 1 ರೂಪಾಯಿಗೆ ಕಾರ್ಖಾನೆ ಸೇರಿದಂತೆ ಅದರ ಎಲ್ಲಾ ಆಸ್ತಿಗಳನ್ನು ನೀಡಿತ್ತು. ಆದರೆ, ಈವರೆಗೂ ಯಾವುದೇ ಪ್ರಗತಿ ಕಾಣದೇ ಕಾರ್ಖಾನೆ ತುಕ್ಕು ಹಿಡಿಯುವಂತಾಗಿದೆ.
ಓದಿ: ಶ್ರದ್ಧಾ ವಾಕರ್ ಹತ್ಯೆ ಕೇಸ್: ಶೈಕ್ಷಣಿಕ ಪ್ರಮಾಣಪತ್ರ, ಸ್ಟೇಷನರಿ ಒದಗಿಸುವಂತೆ ಅಫ್ತಾಬ್ ಅರ್ಜಿ