ಶ್ರೀನಗರ(ಜಮ್ಮು ಕಾಶ್ಮೀರ): ದಕ್ಷಿಣ ಮತ್ತು ಮಧ್ಯ ಕಾಶ್ಮೀರದ ಹಲವು ಸ್ಥಳಗಳಲ್ಲಿ ಜಮ್ಮುಕಾಶ್ಮೀರದ ರಾಜ್ಯ ತನಿಖಾ ಸಂಸ್ಥೆ (ಎಸ್‌ಐಎ) ಶನಿವಾರ ದಾಳಿ ನಡೆಸಿದೆ. ಸ್ಥಳೀಯ ಪೊಲೀಸರು ಮತ್ತು ಸಿಆರ್‌ಪಿಎಫ್ ನೆರವಿನೊಂದಿಗೆ ತನಿಖಾ ಸಂಸ್ಥೆಯ ಅಧಿಕಾರಿಗಳು ಬದ್ಗಾಮ್, ಪುಲ್ವಾಮಾ ಮತ್ತು ಇತರ ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೊಬೈಲ್ ಫೋನ್‌ಗಳು ಮತ್ತು ಸಿಮ್ ಕಾರ್ಡ್‌ಗಳ ಮಾರಾಟಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಪೊಲೀಸರು ಮಾಹಿತಿ ನೀಡಿದ್ದು, ದಕ್ಷಿಣ ಕಾಶ್ಮೀರದ ಲಸ್ಸಿಪೋರಾ ಮತ್ತು ಪುಲ್ವಾಮಾದ ಚಂದಗಾಮ್ ಪ್ರದೇಶ ಮತ್ತು ಅವಂತಿಪೋರಾದ ಬ್ರಬಂದಿನಾ ಮತ್ತು ಕುಲ್ಗಾಮ್‌ನ ಚಾವಲ್ಗಾಮ್ ಪ್ರದೇಶದಲ್ಲಿ ದಾಳಿ ನಡೆಸಲಾಗಿದೆ.
ಕೆಲವು ದಿನಗಳ ಹಿಂದೆ ಭಯೋತ್ಪಾದನೆಗೆ ಹಣಕಾಸು ಪೂರೈಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ತನಿಖಾ ಸಂಸ್ಥೆ ದೆಹಲಿಯ ಕನಿಷ್ಠ ಐದು ಸ್ಥಳಗಳಲ್ಲಿ ಹಾಗೂ ಫರಿದಾಬಾದ್, ಅನಂತನಾಗ್‌ನಲ್ಲಿಯೂ ಶೋಧ ಕಾರ್ಯ ನಡೆಸಿ, ಹಲವು ಮಹತ್ವದ ವಿಷಯಗಳನ್ನು ಕಲೆಹಾಕಿತ್ತು.
ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದಿಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ತನಿಖೆ ಮಾಡಲು ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ ಮತ್ತು ಇತರ ಏಜೆನ್ಸಿಗಳಿಗೆ ಸಹಕಾರ ನೀಡುವ ಸಲುವಾಗಿ ಕಳೆದ ವರ್ಷ ನವೆಂಬರ್‌ನಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜ್ಯ ತನಿಖಾ ಸಂಸ್ಥೆ (ಎಸ್‌ಐಎ) ರಚಿಸಲಾಗಿತ್ತು.
ಇದನ್ನೂ ಓದಿ: ಶಂಕಿತ ಉಗ್ರರಿಂದ ಗುಂಡಿನ ದಾಳಿ : ಪೊಲೀಸ್ನ ಸ್ಥಿತಿ ಗಂಭೀರ