ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಭಯೋತ್ಪಾದನೆ ನಿಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕಾಶ್ಮೀರದ ವಿವಿಧ ಸ್ಥಳಗಳಲ್ಲಿ ಜಮ್ಮು ಮತ್ತು ಕಾಶ್ಮೀರ ಸರ್ಕಾರದ ರಾಜ್ಯ ತನಿಖಾ ಸಂಸ್ಥೆಯ (ಎಸ್‌ಐಎ) ಜೆ & ಕೆ ಪೊಲೀಸ್ ವಿಭಾಗದ ಅಧಿಕಾರಿಗಳು ದಾಳಿ ನಡೆಸಿದರು. ಭಯೋತ್ಪಾದಕ ನಿಧಿ ಪ್ರಕರಣದ ತನಿಖೆಯ ಭಾಗವಾಗಿ ಈ ದಾಳಿ ಮಾಡಲಾಗಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.
ಸ್ಥಳೀಯ ಮೂಲಗಳ ಪ್ರಕಾರ, ದಕ್ಷಿಣ ಕಾಶ್ಮೀರದ ಅನಂತನಾಗ್ ಮತ್ತು ಕುಲ್ಗಾಮ್ ಜಿಲ್ಲೆಗಳಲ್ಲಿ ಸುಮಾರು ಐದು ಸ್ಥಳಗಳಲ್ಲಿ ದಾಳಿಗಳು ನಡೆದಿವೆ. ಸ್ಥಳೀಯ ಪೊಲೀಸರು ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ನೆರವಿನೊಂದಿಗೆ ಎಸ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪೊಲೀಸ್ ಮತ್ತು ಸಿಆರ್‌ಪಿಎಫ್ ಸಿಬ್ಬಂದಿಯೊಂದಿಗೆ ಭದ್ರತೆಯಲ್ಲಿ ಎಸ್‌ಐಎ ಅಧಿಕಾರಿಗಳು ಸ್ಥಳಗಳಲ್ಲಿ ಕಡತಗಳ ಪರಿಶೀಲನೆ ಮುಂದುವರೆಸಿದ್ದಾರೆ. ಯಾರ ಮೇಲೆ ದಾಳಿ ಮಾಡಲಾಗಿದೆ ಎಂಬುದರ ಮಾಹಿತಿಯನ್ನು ಇನ್ನೂ ಬಹಿರಂಗವಾಗಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ಭಯೋತ್ಪಾದನೆ ನಿಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 5 ರಂದು ಕಾಶ್ಮೀರ ಕಣಿವೆಯಲ್ಲಿ ಕನಿಷ್ಠ ಏಳು ಮತ್ತು ಜಮ್ಮುವಿನ ಒಂದು ಸ್ಥಳಗಳಲ್ಲಿ ದಾಳಿ ನಡೆಸಲಾಗಿತ್ತು. ಕಾಶ್ಮೀರ, ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆ, ಉತ್ತರ ಕಾಶ್ಮೀರದ ಬಾರಾಮುಲ್ಲಾ ಹಾಗೂ ಇತರ ಸ್ಥಳಗಳಲ್ಲಿ ದಾಳಿಗಳನ್ನು ಮಾಡಲಾಗಿತ್ತು.
ಇದನ್ನೂ ಓದಿ: ಲಂಚ ಪಡೆದ ಆರೋಪ: ಇಡಿ ಅಧಿಕಾರಿಗೆ ಹೆಚ್ಚುವರಿ ಪೊಲೀಸ್ ಕಸ್ಟಡಿ ವಿಧಿಸಿದ ನ್ಯಾಯಾಲಯ