ನವದೆಹಲಿ: ಕರ್ನಾಟಕ ಸರ್ಕಾರ ರಚನೆ ಹಾಗೂ ಖಾತೆ ಹಂಚಿಕೆ ಹಿನ್ನೆಲೆಯಲ್ಲಿ ಮಾತುಕತೆ ನಡೆಸಲು ಕಾಂಗ್ರೆಸ್ ರಾಷ್ಟ್ರೀಯ ನಾಯಕರು, ಸಿದ್ದರಾಮಯ್ಯ ಮತ್ತು ಶಿವಕುಮಾರ್ ಇಬ್ಬರನ್ನೂ ರಾಷ್ಟ್ರ ರಾಜಧಾನಿ ದೆಹಲಿಗೆ ಕರೆಸಿಕೊಂಡಿದ್ದಾರೆ. ನಿನ್ನೆಯಷ್ಟೇ ಸರ್ಕಾರ ರಚನೆಗೆ ಬೇಕಾದ ಎಲ್ಲ ಪ್ರಕ್ರಿಯೆಗಳನ್ನು ಮುಗಿಸಿದ ರಾಜ್ಯ ಕಾಂಗ್ರೆಸ್ ನಾಯಕರು, ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡನೆ ಮಾಡಿದ್ದರು.
ಕಾಂಗ್ರೆಸ್ ನಾಯಕರು ರಾಜ್ಯಪಾಲರ ಬಳಿ ಹಕ್ಕು ಮಂಡನೆ ಮಾಡಿದ ಬಳಿಕ ಸರ್ಕಾರ ರಚನೆ ಮಾಡಲು ಥಾವರ್ ಚಂದ್ ಗೆಹ್ಲೋಟ್ ಆಹ್ವಾನ ನೀಡಿದ್ದಾರೆ. ನಾಳೆ ಮಧ್ಯಾಹ್ನ 3:30ಕ್ಕೆ ಸಿದ್ದರಾಮಯ್ಯ ನೂತನ ಸಿಎಂ ಆಗಿ ಎರಡನೇ ಬಾರಿ ಪದಗ್ರಹಣ ಮಾಡಲಿದ್ದಾರೆ.
ಇದನ್ನೂ ಓದಿ: ಸಿಎಂ ಪದಗ್ರಹಣ: ಯಾರೆಲ್ಲಾ ಭಾಗಿ? ಇಲ್ಲಿದೆ ಗಣ್ಯರ ಪಟ್ಟಿ
ಇನ್ನು ಕರ್ನಾಟಕದ ನಿಯೋಜಿತ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶುಕ್ರವಾರ ದೆಹಲಿಗೆ ಆಗಮಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು "ನಾವು ಇಲ್ಲಿಗೆ ಬಂದಿರುವ ಉದ್ದೇಶ ಎಂದರೆ, ನಾವು ನಮ್ಮ ನಾಯಕರನ್ನು ಭೇಟಿಯಾಗಿ ನಾಳಿನ ಪ್ರಮಾಣ ವಚನ ಸಮಾರಂಭಕ್ಕೆ ಬಂದು ನಮಗೆ ಮಾರ್ಗದರ್ಶನ ನೀಡುವಂತೆ ವೈಯಕ್ತಿಕವಾಗಿ ಹಾಗೂ ಸರ್ಕಾರದ ಪರ ಕೋರಿಕೆ ಸಲ್ಲಿಸುತ್ತೇನೆ. ಈ ಪ್ರಮಾಣ ವಚನ ಸಮಾರಂಭಕ್ಕೆ ರಾಹುಲ್, ಸೋನಿಯಾ, ಪ್ರಿಯಾಂಕಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಮ್ಮ ಎಲ್ಲಾ ಹಿರಿಯ ನಾಯಕರು (ಕರ್ನಾಟಕಕ್ಕೆ ಪ್ರಚಾರಕ್ಕಾಗಿ) ಬಂದಿದ್ದರಿಂದ ಅವರನ್ನು ಆಹ್ವಾನಿಸಲು ಬಯಸುತ್ತೇನೆ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ: ನಾಳೆ ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ: ಕಂಠೀರವ ಸ್ಟೇಡಿಯಂ ಸುತ್ತ ಬಿಗಿ ಭದ್ರತೆ
ಮೇ 20 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಪ್ರಮಾಣ ವಚನ ಸಮಾರಂಭ: ಕಾಂಗ್ರೆಸ್ ಹಿರಿಯ ನಾಯಕರ ಸಾಕಷ್ಟು ಶ್ರಮ ಮತ್ತು ಮಾರ್ಗದರ್ಶನ ನಮ್ಮ ಮೇಲೆ ಇದೆ. ಆದ್ದರಿಂದ, ನಾನು ಅವರನ್ನು ವೈಯಕ್ತಿಕವಾಗಿ ಆಹ್ವಾನಿಸಲು ಬಯಸುತ್ತೇನೆ. ನಂತರ ನಾವು ಸಂಪುಟ ರಚನೆಯ ಬಗ್ಗೆ ಚರ್ಚಿಸುತ್ತೇವೆ ಎಂದು ಅವರು ಇದೇ ವೇಳೆ ತಿಳಿಸಿದರು. ಯಾರಿಗೆ ಯಾವ ಖಾತೆ ನೀಡಬೇಕು, ಮುಂದಿನ ನಮ್ಮ ಸರ್ಕಾರದ ಯೋಜನೆಗಳು ಹೇಗಿರಬೇಕು ಎಂಬ ಬಗ್ಗೆ ಹಾಗೂ ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಹಿರಿಯ ನಾಯಕರ ಜೊತೆಗೆ ಚರ್ಚಿಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ಮಾಧ್ಯಮದವರಿಗೆ ಮಾಹಿತಿ ನೀಡಿದರು.
ಇದನ್ನೂ ಓದಿ: 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ: ಡಿಕೆಶಿ
ಕಾಂಗ್ರೆಸ್ನ ರಾಷ್ಟ್ರೀಯ ನಾಯಕರ ಜೊತೆಗೆ ಸುದೀರ್ಘ ಚರ್ಚೆ: ನಿಯೋಜಿತ ಸಿಎಂ ಸಿದ್ದರಾಮಯ್ಯ ಹಾಗೂ ನಿಯೋಜಿತ ಡಿಸಿಎಂ ಶಿವಕುಮಾರ್ ಅವರು ರಾಜಧಾನಿಗೆ ಭೇಟಿ ನೀಡಿ, ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ ನಂತರ, ಸರ್ಕಾರ ರಚನೆ ಮತ್ತು ಖಾತೆ ಹಂಚಿಕೆ ಕುರಿತು ಕಾಂಗ್ರೆಸ್ನ ರಾಷ್ಟ್ರೀಯ ನಾಯಕರ ಜೊತೆಗೆ ಸುದೀರ್ಘ ಚರ್ಚೆ ನಡೆಸಿದರು.
ಇದನ್ನೂ ಓದಿ: ಸಚಿವ ಸ್ಥಾನಕ್ಕೆ ಲಾಬಿ: ದೆಹಲಿಯತ್ತ ಹೊರಟ 30 ಕಾಂಗ್ರೆಸ್ ಶಾಸಕರು
ಇದನ್ನೂ ಓದಿ: ಸಿಎಂ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಘಟಾನುಘಟಿ ನಾಯಕರಿಗೆ ಆಹ್ವಾನಿಸಿದ ಕಾಂಗ್ರೆಸ್...