ETV Bharat / bharat

ಸಿದ್ದರಾಮಯ್ಯಗೆ ಸಿಎಂ ಪಟ್ಟ, ಡಿಸಿಎಂ ಆಗಿ ಡಿ.ಕೆ.ಶಿವಕುಮಾರ್; 20ಕ್ಕೆ ಪ್ರಮಾಣ ವಚನ - ಕರ್ನಾಟಕ ರಾಜ್ಯದ ನೂತನ ಸಿಎಂ

ಮುಖ್ಯಮಂತ್ರಿ ಸ್ಥಾನಕ್ಕಾಗಿ ಕಾಂಗ್ರೆಸ್‌ನಲ್ಲಿ ನಡೆಯುತ್ತಿದ್ದ ಜಂಗಿ ಕುಸ್ತಿ ಅಂತ್ಯವಾಗಿದ್ದು ಸಿದ್ದರಾಮಯ್ಯ ಮತ್ತೊಮ್ಮೆ ಕರ್ನಾಟಕದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಈ ಬಗ್ಗೆ ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯುವ ಶಾಸಕಾಂಗ ಪಕ್ಷದ ಸಭೆಯ ನಂತರ ಅಧಿಕೃತ ಘೋಷಣೆ ಆಗಲಿದೆ.

Siddaramaiah
ಸಿದ್ದರಾಮಯ್ಯ
author img

By

Published : May 18, 2023, 6:27 AM IST

Updated : May 18, 2023, 11:36 AM IST

ನವದೆಹಲಿ : ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕರ್ನಾಟಕ ರಾಜ್ಯದ ನೂತನ ಸಿಎಂ ಆಯ್ಕೆಯ ಕಸರತ್ತು ಅಂತಿಮ ಹಂತಕ್ಕೆ ಬಂದಿದೆ. ಸಿದ್ದರಾಮಯ್ಯ ಮತ್ತೊಮ್ಮೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ. ಮೇ 20 ರಂದು ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಶಾಸಕಂಗ ಪಕ್ಷದ ನಾಯಕನ ಆಯ್ಕೆ ಮಾಡುವ ಸಂಬಂಧ ಗುರುವಾರ (ಇಂದು) ಸಂಜೆ 7 ಗಂಟೆಗೆ ಇಂದಿರಾ ಗಾಂಧಿ ಭವನದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಅಧಿಕೃತವಾಗಿ ಮುಖ್ಯಮಂತ್ರಿ ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡಲಾಗುತ್ತದೆ. ಶಾಸಕಾಂಗ ಪಕ್ಷ ನಾಯಕನ ಆಯ್ಕೆ ಜವಾಬ್ದಾರಿಯನ್ನು ಮೊನ್ನೆ ನಡೆದ ಶಾಸಕರ ಸಭೆಯಲ್ಲಿ ಹೈಕಮಾಂಡ್​ಗೆ ನೀಡುವ ನಿರ್ಣಯ ತಗೆದುಕೊಳ್ಳಲಾಗಿತ್ತು. ಅದರಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಜೊತೆ ಸುದೀರ್ಘ ಚರ್ಚೆ ನಡೆಸಿ ಕೈಗೊಂಡ ತೀರ್ಮಾನವನ್ನು ಸಂಜೆ ನಡೆಯುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರಕಟಿಸಲಾಗುತ್ತದೆ.

  • Siddaramaiah to be the next chief minister of Karnataka and DK Shivakumar to take oath as deputy chief minister. Congress President Mallikarjun Kharge arrived at a consensus for Karnataka government formation. The oath ceremony will be held in Bengaluru on 20th May. pic.twitter.com/CJ4K7hWsKM

    — ANI (@ANI) May 17, 2023 " class="align-text-top noRightClick twitterSection" data=" ">

ಸಭೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಪ್ರತಿನಿಧಿಗಳು ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾದ ರಣದೀಪ್ ಸಿಂಗ್ ಸುರ್ಜೇವಾಲ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸೇರಿದಂತೆ ಹಿರಿಯ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡಿದ ಬಳಿಕ ಶುಕ್ರವಾರದಂದು ನೂತನ ಮುಖ್ಯಮಂತ್ರಿಯ ಹಾಗು ಸಚಿವರುಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಹೇಳಲಾಗಿದೆ.

ನಿನ್ನೆ (ಬುಧವಾರ) ಮಾಧ್ಯಮಗಳೊಂದಿಗೆ ಮಾತನಾಡಿದ್ದ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸುರ್ಜೇವಾಲಾ, "ಮುಂದಿನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಇಂದು/ ನಾಳೆ ನಿರ್ಧಾರ ಪ್ರಕಟಿಸಲಾಗುವುದು. ಮುಂದಿನ 72 ಗಂಟೆಯೊಳಗೆ ಹೊಸ ಸಚಿವ ಸಂಪುಟ ಅಸ್ತಿತ್ವಕ್ಕೆ ಬರಲಿದೆ" ಎಂದು ಹೇಳಿದ್ದರು.

ಇದನ್ನೂ ಓದಿ : ಮುಂದುವರೆದ ಸಿಎಂ ಆಯ್ಕೆ ಕಸರತ್ತು: ವೇಣುಗೋಪಾಲ್​ ಭೇಟಿಯಾದ ಸಿದ್ದರಾಮಯ್ಯ

ಇದನ್ನೂ ಓದಿ : ಸಿದ್ದರಾಮಯ್ಯಗೆ ಸಿಎಂ ಸ್ಥಾನ ಬಹುತೇಕ ಖಚಿತ.. ಅಭಿಮಾನಿಗಳು, ಬೆಂಬಲಿಗರಿಂದ ಸಂಭ್ರಮಾಚರಣೆ

ಅಭಿಮಾನಿಗಳ ಸಂಭ್ರಮ: ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮರು ಆಯ್ಕೆ ಆಗಲಿದ್ದಾರೆ ಎಂದು ಅವರ ಬೆಂಬಲಿಗರು, ಅಭಿಮಾನಿಗಳು ಬುಧವಾರ ಬೆಂಗಳೂರಿನಲ್ಲಿ ಸಂಭ್ರಮಾಚರಣೆ ನಡೆಸಿದರು. ಬೆಂಗಳೂರಿನಲ್ಲಿರುವ ಸಿದ್ದರಾಮಯ್ಯನವರ ನಿವಾಸದ ಮುಂದೆ ಜಮಾಯಿಸಿದ ​ಕಾರ್ಯಕರ್ತರು, 'ಬಡವರ ಬಂಧು ಸಿದ್ದರಾಮಯ್ಯ, ಅನ್ನರಾಮಯ್ಯಗೆ ಜೈ' ಎಂದು ಘೋಷಣೆ ಕೂಗುವ ಮೂಲಕ ಹರ್ಷ ವ್ಯಕ್ತಪಡಿಸಿದ್ದರು. ಹಾಗೆಯೇ ಸಿದ್ದರಾಮಯ್ಯರ ಹುಟ್ಟೂರು ಸಿದ್ದರಾಮನಹುಂಡಿಯಲ್ಲಿಯೂ ಸಹ ಅಭಿಮಾನಿಗಳು, ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿತ್ತು. ಸಿದ್ದರಾಮಯ್ಯನವರ ಫ್ಲೆಕ್ಸ್​ಗೆ ಹಾಲಿನ ಅಭಿಷೇಕ ಮಾಡಿದ್ದರು. ಇನ್ನೊಂದೆಡೆ ಮೈಸೂರಿನ ಟಿ ಕೆ. ಲೇಔಟ್​ನಲ್ಲಿರುವ ಸಿದ್ದರಾಮಯ್ಯನವರ ಮನೆಗೆ ಅಭಿಮಾನಿಗಳು ಆಗಮಿಸಿ, ಮನೆಯ ಸುತ್ತ ಫ್ಲೆಕ್ಸ್​ ಅಳವಡಿಸಿದ್ದಾರೆ. ಜೊತೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ಬೈಕ್ ಜಾಥಾ ನಡೆಸಿ ಸಂಭ್ರಮಿಸಿದ್ದರು.

Last Updated : May 18, 2023, 11:36 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.