ಕೋಲ್ಕತ್ತಾ : ಕಳೆದ ವರ್ಷ ಪಶ್ಚಿಮ ಬಂಗಾಳದಲ್ಲಿ ನಡೆದ ವಿಧಾನಸಭಾ ಚುನಾವಣೆಯ ನಂತರ ಭುಗಿಲೆದ್ದ ಹಿಂಸಾಚಾರಕ್ಕೆ ತೃಣ ಮೂಲ ಕಾಂಗ್ರೆಸ್ ನಾಯಕ ಶೇಖ್ ಸೂಫಿಯಾನ್ ಕಾರಣ ಎಂದು ಭಾರತೀಯ ಜನತಾ ಪಕ್ಷದ ನಾಯಕ ಸುವೇಂದು ಅಧಿಕಾರಿ ಆರೋಪಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ನಾಗರಿಕ ಚುನಾವಣೆಯಲ್ಲಿ ಕುಶಲತೆ ಹಾಳು ಮಾಡಲು ಟಿಎಂಸಿ ಪ್ರಜಾಪ್ರಭುತ್ವದ ಪಾಲಿಗೆ ಗ್ಯಾಸ್ ಚೇಂಬರ್ ಅನ್ನು ರಚಿಸಿದೆ ಎಂದು ವಾಗ್ದಾಳಿ ನಡೆಸಿದರು.
ಪಶ್ಚಿಮ ಬಂಗಾಳದಲ್ಲಿ 'ಪ್ರಜಾಪ್ರಭುತ್ವದ ಪಾಲಿಗೆ ಗ್ಯಾಸ್ ಚೇಂಬರ್' (ಹಿಟ್ಲರ್ ಕಾಲದಲ್ಲಿ ಕೈದಿಗಳನ್ನು ಕೊಲ್ಲಲು ಬಳಸುತ್ತಿದ್ದ ಗುಪ್ತ ಬಂಕರ್‌ಗಳು) ರೀತಿಯ ಪರಿಸ್ಥಿತಿಯನ್ನು ಸೃಷ್ಟಿಸಿರುವ ಟಿಎಂಸಿಯು ಆಯೋಜಿಸಿರುವ ಚುನಾವಣೋತ್ತರ ಹಿಂಸಾಚಾರದ ದೃಷ್ಟಿಯಿಂದ ನಾವು ರಾಜ್ಯ ಚುನಾವಣಾ ಆಯೋಗವನ್ನು (ಎಸ್‌ಇಸಿ) ಭೇಟಿ ಮಾಡಿದ್ದೇವೆ. ರಾಜ್ಯದಲ್ಲಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳನ್ನು ನಿಯೋಜಿಸಲು ನಾವು ಎಸ್‌ಇಸಿಗೆ ಸಲಹೆ ನೀಡಿದ್ದೇವೆ ಎಂದು ಹೇಳಿದರು.
ಓದಿ: ಕ್ರೀಡಾ ಬದುಕಿಗೆ ನಿವೃತ್ತಿ ಘೋಷಿಸಿದ ಮಿಂಚಿನ ವೇಗದ ಓಟಗಾರ ಜಸ್ಟಿನ್ ಗ್ಯಾಟ್ಲಿನ್
ಚುನಾವಣೋತ್ತರ ಹಿಂಸಾಚಾರದಿಂದಾಗಿ ಒಂದು ಲಕ್ಷಕ್ಕೂ ಹೆಚ್ಚು ಹಿಂದೂಗಳು ರಾಜ್ಯವನ್ನು ತೊರೆದಿದ್ದಾರೆ. ಪಶ್ಚಿಮ ಬಂಗಾಳದ ಪರಿಸ್ಥಿತಿಯು ಜಮ್ಮು ಮತ್ತು ಕಾಶ್ಮೀರಕ್ಕಿಂತ ಕೆಟ್ಟದಾಗಿದೆ ಎಂದು ಅಧಿಕಾರಿ ಆರೋಪಿಸಿದ್ದಾರೆ.
ಮಹಿಳೆಯರ ಮೇಲೆ ನಡೆದ ದೌರ್ಜನ್ಯ ಸೇರಿದಂತೆ ಚುನಾವಣೋತ್ತರ ಹಿಂಸಾಚಾರಕ್ಕೆ ಟಿಎಂಸಿಯ ಶೇಖ್ ಸೂಫಿಯಾನ್ ಹೊಣೆಗಾರರಾಗಿದ್ದಾರೆ. ಬಂಗಾಳದಲ್ಲಿ ಪರಿಸ್ಥಿತಿ ಜಮ್ಮು ಮತ್ತು ಕಾಶ್ಮೀರಕ್ಕಿಂತ ಕೆಟ್ಟದಾಗಿದೆ. ಹಿಂದೂಗಳು ಅಪಾಯದಲ್ಲಿದ್ದಾರೆ. ಚುನಾವಣೋತ್ತರ ಹಿಂಸಾಚಾರದಿಂದಾಗಿ 1 ಲಕ್ಷಕ್ಕೂ ಹೆಚ್ಚು ಹಿಂದೂಗಳು ರಾಜ್ಯವನ್ನು ತೊರೆದಿದ್ದಾರೆ. ಒಳನುಗ್ಗುವವರ ಸಂಖ್ಯೆ ಹೆಚ್ಚಾಗುತ್ತಿವೆ ಎಂದು ಆರೋಪಿಸಿದರು.
ಕಳೆದ ವರ್ಷ ಮೇ 2ರಂದು ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶದ ಮೊದಲು ಪಶ್ಚಿಮ ಬಂಗಾಳದ ವಿವಿಧ ಸ್ಥಳಗಳಲ್ಲಿ ಹಲವಾರು ಹಿಂಸಾಚಾರದ ಘಟನೆಗಳು ವರದಿಯಾಗಿದ್ದವು.
ಮೇ 2021ರಲ್ಲಿ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಗೆದ್ದ ನಂತರ ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರದ ಸಂದರ್ಭದಲ್ಲಿ ನಡೆದ ನಂದಿಗ್ರಾಮ್ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತನ ಹತ್ಯೆಯನ್ನು ಸಿಬಿಐ ತನಿಖೆ ನಡೆಸುತ್ತಿದೆ. ಕೋಲ್ಕತ್ತಾ ಹೈಕೋರ್ಟ್ ರಾಜ್ಯದಲ್ಲಿ ನಡೆದ ವಿವಿಧ ಹತ್ಯೆಗಳು ಮತ್ತು ಲೈಂಗಿಕ ದೌರ್ಜನ್ಯಗಳ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಿದೆ.