ಕಾಮಾರೆಡ್ಡಿ, ತೆಲಂಗಾಣ : ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಆರು ಮಂದಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಕಾಮಾರೆಡ್ಡಿ ಜಿಲ್ಲೆಯ ಜಗನ್ನಾಥಪಲ್ಲಿ ಗೇಟ್ ಬಳಿ ನಡೆದಿದೆ. ಇದೇ ಅಪಘಾತದಲ್ಲಿ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಸ್ಥಳೀಯರು ಕೂಡಲೇ ಬಾನ್ಸವಾಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ಸ್ಪಷ್ಟನೆ ನೀಡಿದ್ದಾರೆ. ಕಾರು ಬಿಚ್ಕುಂದ ಪ್ರದೇಶದಿಂದ ಪಿಟ್ಲಂ ಕಡೆಗೆ ಹೊರಡುತ್ತಿದ್ದಾಗ ಅಪಘಾತ ಸಂಭವಿಸಿದೆ.
ಅತಿ ವೇಗವೇ ದುರ್ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತರಲ್ಲಿ ಇಬ್ಬರು ಮಕ್ಕಳಿದ್ದು, ದೂರು ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಮರಕ್ಕೆ ಡಿಕ್ಕಿ ಹೊಡೆದ ಕಾರು; ಇಬ್ಬರು ಕಿರಿಯ ಕಲಾವಿದರು ಸೇರಿ ಮೂವರು ಸಾವು