ETV Bharat / bharat

ಒಂದೇ ಕುಟುಂಬದ ಇಬ್ಬರು ಮಕ್ಕಳು ಸೇರಿ ಆರು ಮಂದಿ ಸಮುದ್ರಪಾಲು.. - ಮಕ್ಕಳು ಮತ್ತು ಇತರ ಜನರು ನೀರಿನಲ್ಲಿ

ಒಂದೇ ಕುಟುಂಬದ ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ.

Etv Bharat
Etv Bharat
author img

By

Published : May 20, 2023, 7:28 PM IST

ಭರೂಚ್(ಗುಜರಾತ್​): ಜಿಲ್ಲೆಯ ವಾಗ್ರಾ ತಾಲೂಕಿನ ಮುಲ್ಲರ್ ಗ್ರಾಮದ ಗಂಧರ್ ಕರಾವಳಿಯಲ್ಲಿ ಒಂದೇ ಕುಟುಂಬದ ಇಬ್ಬರು ಪುಟ್ಟ ಮಕ್ಕಳು ಸೇರಿದಂತೆ ಆರು ಮಂದಿ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಮುದ್ರದ ನೀರು ಏಕಾಏಕಿ ಹೆಚ್ಚಾದ ಪರಿಣಾಮ ದಡದಲ್ಲಿ ಆಟವಾಡುತ್ತಿದ್ದ ಮಕ್ಕಳು ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ. ಈ ವೇಳೆ ಅವರನ್ನು ರಕ್ಷಿಸಲು ಯತ್ನಿಸಿದ ಕುಟುಂಬ ಸದಸ್ಯರು ನೀರಿನಲ್ಲಿ ಮುಳುಗಿದ್ದಾರೆ. ಒಟ್ಟು 8 ಮಂದಿ ನೀರಿನಲ್ಲಿ ಮುಳುಗಿದ್ದು, ಇಬ್ಬರನ್ನು ರಕ್ಷಿಸಲಾಗಿದೆ. ಇನ್ನುಳಿದ 6 ಮಂದಿ ನೀರು ಪಾಲಾಗಿದ್ದಾರೆ.

ಗಂಧರ್ ಕರಾವಳಿ ಪ್ರದೇಶದ ಸಮುದ್ರದ ಉಬ್ಬರವಿಳಿತದಲ್ಲಿ ಮುಳುಗಿದ ಎಲ್ಲ 8 ಜನರನ್ನು ಭರೂಚ್‌ನ ಬ್ರಾಡ್ ಹಾರ್ಟ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರು ಪರೀಕ್ಷಿಸಿ ಮಕ್ಕಳು ಸೇರಿದಂತೆ 6 ಮಂದಿ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ವಾಗ್ರಾದ ಮುಲ್ಲರ್ ಗ್ರಾಮದಲ್ಲಿ ವಾಸಿಸುತ್ತಿರುವ ಬಿಜೆಪಿ ಮುಖಂಡ ಬಲ್ವಂತ್ ಗೋಹಿಲ್ ಅವರ ಕುಟುಂಬದಲ್ಲಿ ಈ ದುರ್ಘಟನೆ ನಡೆದಿದೆ. ವಿಷಯ ತಿಳಿದ ವಾಗ್ರಾ ಶಾಸಕ ಅರುಣ್​​ ಸಿಂಗ್​ ರಾಣಾ ಆಸ್ಪತ್ರೆಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಈ ಬೀಚ್ ಭರೂಚ್ ಜಿಲ್ಲೆಯ ವಾಗ್ರಾ ತಾಲೂಕಿನ ಮುಲ್ಲರ್ ಗ್ರಾಮದ ಗಂಧರ್ ಭಾಗದಲ್ಲಿದೆ, ಅಲ್ಲಿ ಗೋಹಿಲ್ ಕುಟುಂಬವು ವಿಹಾರಕ್ಕೆ ಹೋಗಿದ್ದರು. ಸಮುದ್ರದ ರಭಸಕ್ಕೆ ದಡದಲ್ಲಿ ಆಟವಾಡುತ್ತಿದ್ದ ಮಕ್ಕಳು ಸಮುದ್ರದ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದರು. ಈ ದೃಶ್ಯವನ್ನು ನೋಡಿದ ಕುಟುಂಬಸ್ಥರು ಹಾಗೂ ಇತರರು ಮಕ್ಕಳನ್ನು ರಕ್ಷಿಸಲು ಯತ್ನಿಸಿದ್ದಾರೆ. ಆದರೆ, ಅಲೆಯ ನೀರು ವೇಗವಾಗಿ ಬಂದಿದ್ದರಿಂದ ನೀರಿನಲ್ಲಿ ಮುಳುಗಿ 6 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಘಟನೆ ಕುರಿತು ವಾಗ್ರಾ ಶಾಸಕ ಅರುಣ್ ಸಿಂಗ್ ರಾಣಾ ಮಾತನಾಡಿ, ಅಮಾಸ್ ಪ್ರವಾಹದಿಂದಾಗಿ ಮಕ್ಕಳು ಸೇರಿ 6 ಮಂದಿ ಸಾವನ್ನಪ್ಪಿದ್ದಾರೆ. ವಾಗ್ರಾ ಕ್ಷೇತ್ರದ ನನ್ನ ಕುಟುಂಬಕ್ಕೆ ನನ್ನ ಸಂತಾಪ ಮತ್ತು ನೋವು ಭರಿಸುವ ಶಕ್ತಿಯನ್ನು ದೇವರು ಈ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.

ಭರೂಚ್ ಎಸ್​ಪಿ ಡಾ.ಲೀನಾ ಪಾಟೀಲ್ ಮಾತನಾಡಿ, ವಾಗ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಗಂಧರ್ ಬೀಚ್‌ನಲ್ಲಿ ಈ ಘಟನೆ ನಡೆದಿದ್ದು, ಎಂಟು ಜನರು ನೀರಿನಲ್ಲಿ ಮುಳುಗಿದ್ದು, ಇಬ್ಬರು ಮಕ್ಕಳು ಬದುಕುಳಿದಿದ್ದಾರೆ, ಉಳಿದ ವಯಸ್ಕ ಮತ್ತು ಇಬ್ಬರು ಮಕ್ಕಳು ಸೇರಿದಂತೆ 6 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದರು.

ಮಕ್ಕಳು ಮತ್ತು ಇತರ ಜನರು ನೀರಿನಲ್ಲಿ ಮುಳುಗುತ್ತಿರುವುದನ್ನು ನೋಡಿದ ಸ್ಥಳೀಯರು ಅವರನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ. ಆದರೆ ಉಬ್ಬರವಿಳಿತದ ನೀರು ಸಾಕಷ್ಟು ಮಣ್ಣನ್ನು ಹೊಂದಿದ್ದರಿಂದ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ. ಗ್ರಾಮದ ಯುವಕರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಸಮುದ್ರದ ಉಬ್ಬರವಿಳಿತದ ನೀರಿನಲ್ಲಿ ಮುಳುಗಿದವರನ್ನು ಹುಡುಕಿದ್ದಾರೆ. ಬಹಳ ಪ್ರಯತ್ನದ ನಂತರ ಕೈಗೆ ಸಿಕ್ಕವರನ್ನು ರಕ್ಷಸಿ. ವಾಹನಗಳಲ್ಲಿ ಅವರನ್ನು ಭರೂಚ್‌ನ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಆದರೆ 6 ಮಂದಿ ಸಾವನ್ನಪ್ಪಿದ್ದು, ಉಳಿದ ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ:ಲೇಡಿ ಸಿಂಗಂ ಜುನ್ಮೋನಿ ರಾಭಾ ಸಾವು ಪ್ರಕರಣ: ಸಿಐಡಿಯಿಂದ ಸಿಬಿಐಗೆ ತನಿಖೆ ವರ್ಗಾವಣೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.