ರಾಜ್ಕೋಟ್(ಗುಜರಾತ್): ಇಲ್ಲಿನ ಉದಯ್ ಶಿವಾನಂದ್ ಕೋವಿಡ್ ಆಸ್ಪತ್ರೆಯ ಐಸಿಯು ವಾರ್ಡ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಅವಘಡ ಸಂಭವಿಸಿದ್ದು, ಆರು ಜನ ಕೋವಿಡ್ ರೋಗಿಗಳು ಸಾವನ್ನಪ್ಪಿದ್ದಾರೆ.
ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಈ ಆಸ್ಪತ್ರೆಯ ಐಸಿಯು ವಾರ್ಡ್ನಲ್ಲಿ 11 ಜನರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಪೈಕಿ ಬೆಂಕಿ ಅವಘಡದಿಂದ 6 ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ 33 ಜನ ಕೋವಿಡ್ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.