ನವದೆಹಲಿ: ಅಗ್ನಿ ಅವಘಡ ಸಂಭವಿಸಿ ಒಂದೇ ಕುಟುಂಬದ ಆರು ಜನ ಸಾವನ್ನಪ್ಪಿರುವ ಘಟನೆ ಇಲ್ಲಿನ ಬಿಜ್ವಾಸನ್ ನಗರದಲ್ಲಿ ನಡೆದಿದೆ.
ಇಲ್ಲಿನ ಟ್ರಾನ್ಸ್ಫಾರ್ಮರ್ ಬಳಿಯ ಎರಡು ಕೊಳೆಗೇರಿ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯಿಂದಾಗಿ ಕೊಳೆಗೇರಿ ಪ್ರದೇಶ ಸಂಪೂರ್ಣ ಭಸ್ಮವಾಗಿದ್ದು, ಈ ಅವಘಡದಲ್ಲಿ ಒಂದೇ ಕುಟುಂಬದ ಆರು ಜನ ಬೆಂಕಿಗಾಹುತಿಯಾಗಿದ್ದಾರೆ.
ಇನ್ನು ಈ ಘಟನೆ ಸಿಲಿಂಡರ್ ಬ್ಲಾಸ್ಟ್ ಆಗಿರುವುದರಿಂದ ಸಂಭವಿಸಿತ್ತು. ಸುದ್ದಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ಕೈಗೊಂಡಿದ್ದಾರೆ. ಆದ್ರೂ ಸಹ ನಾವು ಅವರನ್ನು ಬದುಕಿಸಲು ಸಾಧ್ಯವಾಗಲಿಲ್ಲ ಎಂದು ಡಿಸಿಪಿ ಇಂಗಿತ್ ಪ್ರತಾಪ್ ಸಿಂಗ್ ತಿಳಿಸಿದ್ದಾರೆ.