ಪಲಾಮು(ಜಾರ್ಖಂಡ್) : ಪಿಕಪ್ ವ್ಯಾನ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿರುವ ಪರಿಣಾಮ ಐವರು ಮಹಿಳೆಯರು ಸೇರಿದಂತೆ 6 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಅಪಘಾತದಲ್ಲಿ ಅನೇಕ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರೆಲ್ಲರೂ ಬಿಹಾರದಿಂದ ಭತ್ತ ಕಟಾವು ಮಾಡಿ ವಾಪಸ್ ಆಗುತ್ತಿದ್ದರೆಂದು ತಿಳಿದು ಬಂದಿದೆ.
ಜಿಲ್ಲೆಯ ಹರಿಹರಗಂಜ್ನ ರಾಷ್ಟ್ರೀಯ ಹೆದ್ದಾರಿ 98ರಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಗಾಯಗೊಂಡವರನ್ನ ಮೇದಿನಿರೈ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿರಿ: Video: ಅದ್ಧೂರಿಯಾಗಿ 2022 ವೆಲ್ಕಮ್ ಮಾಡಿಕೊಂಡ ನ್ಯೂಜಿಲ್ಯಾಂಡ್, ಆಸ್ಟ್ರೇಲಿಯಾ
ಅಪಘಾತ ನಡೆದಿದ್ದು ಹೇಗೆ? : ಲಭ್ಯವಾಗಿರುವ ಮಾಹಿತಿ ಪ್ರಕಾರ ಬಿಹಾರದ ಔರಂಗಾಬಾದ್ ಜಿಲ್ಲೆಯ ಓಬ್ರಾ ಪೊಲೀಸ್ ಠಾಣಾ ಪ್ರದೇಶದಲ್ಲಿ ಎರಡು ಪಿಕಪ್ ವ್ಯಾನ್ಗಳು ಕಾರ್ಮಿಕರನ್ನ ಹೊತ್ತು ಒಂದರ ಹಿಂದೆ ಒಂದು ತೆರಳುತ್ತಿದ್ದವು. ಹರಿಹರಗಂಜ್ ಬಳಿ ನಿಯಂತ್ರಣ ತಪ್ಪಿದ ಟ್ರಕ್ವೊಂದು ಪಿಕಪ್ ವ್ಯಾನ್ಗೆ ಡಿಕ್ಕಿ ಹೊಡೆದು, ಪಲ್ಟಿಯಾಗಿದೆ.
ಘಟನೆಯಲ್ಲಿ ಕಲೋಕುಮಾರಿ, ರೀಟಾ, ಬಸಂತಿ, ನೀಲಂ, ಅಪರ್ಣಾ, ಕಮಲೇಶ್ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಮೃತದೇಹಗಳನ್ನ ಈಗಾಗಲೇ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ.