ಆಲಪ್ಪುಳ (ಕೇರಳ): ಕೇರಳದ ಆಲಪ್ಪುಳ ಜಿಲ್ಲೆಯಲ್ಲಿ ನಡೆದ ಆರ್‌ಎಸ್‌ಎಸ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಜನ ಎಸ್‌ಡಿಪಿಐ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.
ಕಳೆದ ರಾತ್ರಿ ಚೆರ್ತಲಾ ಬಳಿಯ ನಾಗಮಕುಲಂಗರದಲ್ಲಿ ಆರ್‌ಎಸ್‌ಎಸ್ ಮತ್ತು ಎಸ್‌ಡಿಪಿಐ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿತ್ತು. ಈ ವೇಳೆ ನಂದು ಕೃಷ್ಣ(22) ಎಂಬ ಆರ್‌ಎಸ್‌ಎಸ್ ಕಾರ್ಯಕರ್ತನ ಹತ್ಯೆ ಕೂಡ ಆಗಿತ್ತು. ಈತ ನಾಗಮಕುಲಂಗರ ಆರ್‌ಎಸ್‌ಎಸ್ ಘಟಕದ ಮುಖ್ಯಸ್ಥನಾಗಿದ್ದಾನೆ ಎಂದು ತಿಳಿದು ಬಂದಿದೆ.
ಇನ್ನು ಘಟನೆಯಲ್ಲಿ ಮತ್ತೊಬ್ಬ ಆರ್‌ಎಸ್‌ಎಸ್ ಕಾರ್ಯಕರ್ತ ಕೆ.ಎಸ್. ನಂದು (23) ಎಂಬುವವನ ಕೈ ಕತ್ತರಿಸಲಾಗಿದ್ದು, ತೀವ್ರವಾಗಿ ಗಾಯಗೊಂಡಿದ್ದನು. ಹಾಗಾಗಿ ಆತನನ್ನು ಚಿಕಿತ್ಸೆಗಾಗಿ ಎರ್ನಾಕುಲಂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಓದಿ: ಕೇರಳದ ಆಲಪ್ಪುಳದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ: ಆರ್‌ಎಸ್‌ಎಸ್ ಕಾರ್ಯಕರ್ತ ಸಾವು
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಇಂದು ಆರು ಜನ ಎಸ್‌ಡಿಪಿಐ ಕಾರ್ಯಕರ್ತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.