ಚಂಡೀಗಢ (ಪಂಜಾಬ್): ಆರು ಬಾರಿ ಕಾಂಗ್ರೆಸ್ ಸಂಸದರಾಗಿ, ಕೇಂದ್ರ ಸಚಿವರಾಗಿ ಮತ್ತು ಎರಡು ಬಾರಿ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದ ಆರ್.ಎಲ್.ಭಾಟಿಯಾ ಅವರು ತಮ್ಮ 100ನೇ ವರ್ಷಕ್ಕೆ ಇಹಲೋಕ ತ್ಯಜಿಸಿದ್ದಾರೆ. ಜುಲೈ 3ರಂದು ಇವರು 101ನೇ ವರ್ಷಕ್ಕೆ ಕಾಲಿಡಲಿದ್ದರು.
ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಭಾಟಿಯಾ ಅವರನ್ನು ಪಂಜಾಬ್ನ ಅಮೃತಸರದ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದಿದ್ದಾರೆ ಎಂದು ಭಾಟಿಯಾರ ಕುಟುಂಬ ಸದಸ್ಯರು ತಿಳಿಸಿದ್ದಾರೆ.
ಇದನ್ನೂ ಓದಿ: ಕೊರೊನಾಗೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಹೋದರ ಬಲಿ
ಭಾಟಿಯಾ ಅವರು 1972ರಿಂದ ಆರು ಬಾರಿ ಅಮೃತಸರ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ವಿದೇಶಾಂಗ ಖಾತೆ ರಾಜ್ಯ ಸಚಿವರಾಗಿ, ಕೇರಳ ಹಾಗೂ ಬಿಹಾರ ರಾಜ್ಯಗಳ ಗವರ್ನರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಇವರ ಸಾವಿಗೆ ಕಾಂಗ್ರೆಸ್ ನಾಯಕರು ಸೇರಿದಂತೆ ಗಣ್ಯರು ಕಂಬನಿ ಮಿಡಿದಿದ್ದಾರೆ.