ದಿಂಡಿಗಲ್(ತಮಿಳುನಾಡು) : ದಿಂಡಿಗಲ್ನ ವಾಥಲ್ಗುಂಡು ಚೆಕ್ ಪೋಸ್ಟ್ನಲ್ಲಿ ಪೊಲೀಸರನ್ನು ಥಳಿಸಿದ ಆರೋಪದಡಿ ಆರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
ಬೈಕ್ನಲ್ಲಿ ತೆರಳುತ್ತಿದ್ದ ಆರು ಯುವಕರ ತಂಡ ಬ್ಯಾರಿಕೇಡ್ಗೆ ಡಿಕ್ಕಿ ಹೊಡೆದಿದೆ. ಇದನ್ನು ಪ್ರಶ್ನಿಸಿದ ಪೊಲೀಸರು ಹಾಗೂ ಯುವಕರ ಮಧ್ಯೆ ವಾಗ್ವಾದ ನಡೆದಿದೆ. ವಾಗ್ವಾದ ತಾರಕಕ್ಕೇರಿದ್ದು, ಪೊಲೀಸರು ಮತ್ತು ಯುವಕರ ನಡುವೆ ಮಾರಾಮಾರಿ ನಡೆದಿದೆ. ಈ ವೇಳೆ ಯುವಕನೊಬ್ಬ ತೆಂಗಿನ ಮೊಟ್ಟೆ ತೆಗೆದುಕೊಂಡು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ.
ಇದನ್ನೂ ಓದಿ:ಮಹಿಳೆ ಜತೆ ಅಸಭ್ಯ ವರ್ತನೆ ಆರೋಪ : ಯುವಕನಿಗೆ ಥಳಿಸಿರುವ Video Viral
ಸದ್ಯ ಈ ಘಟನೆಯ ವಿಡಿಯೋ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.