ವಾರ್ಧಾ, ಮಹಾರಾಷ್ಟ್ರ : ಖಾಸಗಿ ಆಸ್ಪತ್ರೆಯೊಂದರಲ್ಲಿ ಭ್ರೂಣದ 11 ತಲೆಬುರುಡೆಗಳು ಮತ್ತು 54 ಮೂಳೆಗಳು ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯ ಆರ್ವಿ ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಪತ್ತೆಯಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಅಕ್ರಮ ಗರ್ಭಪಾತದ ತನಿಖೆ ವೇಳೆ ಪೊಲೀಸರು ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ್ದು, ಈ ವೇಳೆ ಆಸ್ಪತ್ರೆಯ ಆವರಣದಲ್ಲಿರುವ ಬಯೋಗ್ಯಾಸ್ ಯುನಿಟ್‌ನಲ್ಲಿ ತಲೆ ಬುರುಡೆ ಮತ್ತು ಮೂಳೆಗಳು ಪತ್ತೆಯಾಗಿವೆ ಎಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಜ್ಯೋತ್ಸ್ನಾ ಗಿರಿ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಪ್ರಕರಣ ದಾಖಲು ಮಾಡಲಾಗಿದೆ. ಆಸ್ಪತ್ರೆಯ ನಿರ್ದೇಶಕಿ ರೇಖಾ ಕದಮ್ ಮತ್ತು ಇನ್ನೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈಗ ಸದ್ಯಕ್ಕೆ ಪತ್ತೆಯಾದ ಭ್ರೂಣದ ಅವಶೇಷಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.
ಇದನ್ನೂ ಓದಿ: China Covid: ಚೀನಾದಲ್ಲಿ ಲಕ್ಷಾಂತರ ಮಂದಿಯನ್ನು ಕ್ವಾರಂಟೈನ್ಗೆ ಹೀಗೆ ಮಾಡ್ತಾರೆ..!