ETV Bharat / bharat

ಒಂದೇ ಕುಟುಂಬದ ನಾಲ್ವರಿಗೆ ಕಚ್ಚಿದ ಹಾವು... ತಾಯಿ ಸಾವು, ಮೂವರು ಮಕ್ಕಳ ಸ್ಥಿತಿ ಗಂಭೀರ - ಹಾವು ಕಚ್ಚಿ ಮಹಿಳೆ ಸಾವು

ರಾತ್ರಿ ನಿದ್ರೆಗೆ ಜಾರಿದ್ದ ಸಂದರ್ಭದಲ್ಲಿ ಒಂದೇ ಕುಟುಂಬದ ನಾಲ್ವರಿಗೆ ಹಾವು ಕಚ್ಚಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದ್ದು, ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.

snake
snake
author img

By

Published : Aug 12, 2021, 3:29 PM IST

ಬುಂಡಿ(ರಾಜಸ್ಥಾನ): ವಿಷಪೂರಿತ ಹಾವೊಂದು ಒಂದೇ ಕುಟುಂಬದ ನಾಲ್ವರಿಗೆ ಕಚ್ಚಿರುವ ಪರಿಣಾಮ ಮಹಿಳೆ ಸಾವನ್ನಪ್ಪಿದ್ದು, ಮೂವರು ಮಕ್ಕಳ ಸ್ಥಿತಿ ಗಂಭೀರವಾಗಿದೆ. ಈ ಘಟನೆ ರಾಜಸ್ಥಾನದ ಬುಂಡಿಯಲ್ಲಿ ನಡೆದಿದ್ದು, ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

Snake bite
ಹಾವು ಕಡಿತಕ್ಕೊಳಗಾಗಿರುವ ಸಮೀಕ್ಷಾ

ಕಳೆದ ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದ್ದು, ತಾಯಿ ತನ್ನ ಮೂವರು ಮಕ್ಕಳೊಂದಿಗೆ ಒಂದೇ ರೂಂನಲ್ಲಿ ಮಲಗಿದ್ದಳು. ಈ ವೇಳೆ ಎಲ್ಲರಿಗೂ ಹಾವು ಕಚ್ಚಿದೆ. ಹಾವು ಕಚ್ಚಿದೆ ಎಂಬುದು ಯಾರಿಗೂ ಗೊತ್ತಾಗಿಲ್ಲ. ಆದರೆ ಕೆಲ ನಿಮಿಷಗಳ ಬಳಿಕ ವಾಂತಿ ಮಾಡಿಕೊಳ್ಳಲು ಶುರು ಮಾಡಿದ್ದು, ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಈ ವೇಳೆ Food Poisoning ಆಗಿರಬಹುದು ಎಂದು ಶಂಕಿಸಿ, ಚಿಕಿತ್ಸೆ ನೀಡಿದ್ದಾರೆ. ಆದರೆ, ಅದರಿಂದ ಯಾವುದೇ ಪ್ರಯೋಜನವಾಗಿಲ್ಲ. ಈ ವೇಳೆ ಹಾವು ಕಡಿತದ ಬಗ್ಗೆ ಅವರಿಗೆ ಪರೀಕ್ಷೆ ನಡೆಸಲಾಗಿದ್ದು, ಅದು ದೃಢಗೊಂಡಿದೆ.

Snake bite
ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಪ್ರದೀಪ್​

ಇದನ್ನೂ ಓದಿರಿ: ರಾಜ್ಯಸಭೆಯಲ್ಲಿ ಪ್ರತಿಪಕ್ಷ ಸಂಸದರು - ಮಾರ್ಷಲ್​ಗಳ ನಡುವೆ ಫೈಟ್​.. ಸಿಸಿಟಿವಿ ವಿಡಿಯೋ

ಹಾವು ಕಡಿತದಿಂದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಆಕೆಯನ್ನ ನಿರ್ಮಲಾ ಎಂದು ಗುರುತಿಸಲಾಗಿದೆ. ಉಳಿದಂತೆ ಮಕ್ಕಳಾದ ಪ್ರದೀಪ್​, ಸಮೀಕ್ಷಾ ಹಾಗೂ ಯಶ್​​ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಸಾವು - ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಸದ್ಯ ಅವರನ್ನ ಬುಂಡಿಯಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.