ಭುವನೇಶ್ವರ(ಒಡಿಶಾ): ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತಕ್ಕೆ ಕೆಲವು ಸಾಮಾಜಿಕ ಮಾಧ್ಯಮ ಖಾತೆಗಳು ಕೋಮು ಬಣ್ಣವನ್ನು ನೀಡುತ್ತಿವೆ ಎಂದು ರಾಜ್ಯ ಪೊಲೀಸರು ಕಳವಳ ವ್ಯಕ್ಯಪಡಿಸಿದ್ದಾರೆ.
"ಶುಕ್ರವಾರ ಸಂಜೆ 2 ಪ್ಯಾಸೆಂಜರ್ ರೈಲುಗಳು ಮತ್ತು ಒಂದು ಗೂಡ್ಸ್ ರೈಲು ನಡುವೆ ಭೀಕರ ಅಪಘಾತ ಸಂಭವಿಸಿತ್ತು. ಕೆಲವು ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಬಾಲಸೋರ್‌ನಲ್ಲಿ ಸಂಭವಿಸಿದ ಈ ರೈಲು ಅಪಘಾತಕ್ಕೆ ದುರುದ್ದೇಶಪೂರಿತವಾಗಿ ಕೋಮುವಾದದ ಬಣ್ಣವನ್ನು ನೀಡುತ್ತಿರುವುದು ಗಮನಕ್ಕೆ ಬಂದಿದೆ. ಇದು ಅತ್ಯಂತ ದುರದೃಷ್ಟಕರ" ಎಂದು ಒಡಿಶಾ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಬಾಲಸೋರ್ ಅಪಘಾತದ ಬಗ್ಗೆ ಇಂತಹ "ದುರುದ್ದೇಶಪೂರಿತ ಪೋಸ್ಟ್‌ಗಳನ್ನು" ಹಂಚಿಕೊಳ್ಳದಂತೆ ಅವರು ಮನವಿ ಮಾಡಿದ್ದಾರೆ.
-
#WATCH | Indian Railways has started running passenger trains on the tracks which were affected due to #TrainAccident in Odisha’s Balasore pic.twitter.com/E9NTCv1ieO
— ANI (@ANI) June 5, 2023 " class="align-text-top noRightClick twitterSection" data="
">#WATCH | Indian Railways has started running passenger trains on the tracks which were affected due to #TrainAccident in Odisha’s Balasore pic.twitter.com/E9NTCv1ieO
— ANI (@ANI) June 5, 2023#WATCH | Indian Railways has started running passenger trains on the tracks which were affected due to #TrainAccident in Odisha’s Balasore pic.twitter.com/E9NTCv1ieO
— ANI (@ANI) June 5, 2023
ಕಠಿಣ ಕಾನೂನು ಕ್ರಮ: ಸುಳ್ಳು ಮತ್ತು ದುರುದ್ದೇಶಪೂರಿತ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಮೂಲಕ ಸಮುದಾಯಗಳನ್ನು ಪರಸ್ಪರ ವಿರುದ್ಧವಾಗಿ ಪ್ರಚೋದಿಸಲು ಪ್ರಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ. "ಇಂತಹ ಸುಳ್ಳು ಮತ್ತು ದುರುದ್ದೇಶಪೂರಿತ ಪೋಸ್ಟ್‌ಗಳನ್ನು ಪ್ರಸಾರ ಮಾಡುವುದನ್ನು ನಿಲ್ಲಿಸುವಂತೆ ನಾವು ಸಂಬಂಧಪಟ್ಟ ಎಲ್ಲರಿಗೂ ಮನವಿ ಮಾಡುತ್ತೇವೆ. ವದಂತಿಗಳನ್ನು ಹರಡುವ ಮೂಲಕ ಕೋಮು ಗಲಭೆ ಸೃಷ್ಟಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕ್ರಮಕೈಗೊಳ್ಳಲಾಗುವುದು. ಅಪಘಾತದ ಕಾರಣ ಮತ್ತು ಇತರ ಎಲ್ಲ ಅಂಶಗಳ ಬಗ್ಗೆ ಒಡಿಶಾದ ಸರ್ಕಾರಿ ರೈಲ್ವೆ ಪೊಲೀಸ್ ಜಿಆರ್‌ಪಿಯಿಂದ ತನಿಖೆ ನಡೆಯುತ್ತಿದೆ " ಎಂದು ರಾಜ್ಯ ಪೊಲೀಸ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಇಂಟರ್‌ಲಾಕಿಂಗ್‌ನಲ್ಲಿನ ಬದಲಾವಣೆಯಿಂದ ಅಪಘಾತ: ಶುಕ್ರವಾರ ನಡೆದ ತ್ರಿವಳಿ ರೈಲು ಅಪಘಾತದಲ್ಲಿ ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ಬಾಲಸೋರ್‌ನ ಬಹನಾಗಾ ಬಜಾರ್ ನಿಲ್ದಾಣದಲ್ಲಿ ಮೂರು ಪ್ರತ್ಯೇಕ ಹಳಿಗಳಲ್ಲಿ ಅಪಘಾತಕ್ಕೀಡಾಗಿದ್ದವು. ಭಾನುವಾರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು "ಎಲೆಕ್ಟ್ರಾನಿಕ್ ಇಂಟರ್‌ಲಾಕಿಂಗ್‌ನಲ್ಲಿನ ಬದಲಾವಣೆಯಿಂದ" ಅಪಘಾತ ಸಂಭವಿಸಿದೆ ಎಂದು ಹೇಳಿದರು.
ಇಲೆಕ್ಟ್ರಾನಿಕ್ ಇಂಟರ್‌ಲಾಕಿಂಗ್ ಎನ್ನುವುದು ಸಿಗ್ನಲ್ ಉಪಕರಣದ ಒಂದು ವ್ಯವಸ್ಥೆಯಾಗಿದ್ದು ಅದು ಹಳಿಗಳ ಜೋಡಣೆಯ ಮೂಲಕ ರೈಲುಗಳ ನಡುವೆ ಸಂಘರ್ಷದ ಚಲನೆಯನ್ನು ತಡೆಯುತ್ತದೆ. ಅಸಮರ್ಪಕ ಅನುಕ್ರಮದಲ್ಲಿ ಸಂಕೇತಗಳನ್ನು ಬದಲಾಯಿಸುವುದನ್ನು ತಡೆಯಲು ಇದು ಮೂಲಭೂತವಾಗಿ ಸುರಕ್ಷತಾ ಕ್ರಮವಾಗಿದೆ. ಮಾರ್ಗವು ಸುರಕ್ಷಿತವೆಂದು ಸಾಬೀತುಪಡಿಸದ ಹೊರತು ಯಾವುದೇ ರೈಲು ಮುಂದುವರಿಯಲು ಸಂಕೇತವನ್ನು ಪಡೆಯುವುದಿಲ್ಲ ಎಂಬುದು ಈ ವ್ಯವಸ್ಥೆಯ ಗುರಿಯಾಗಿದೆ.
ಇದಕ್ಕೂ ಮುನ್ನ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯ ಅವರು ವೈಷ್ಣವ್ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಕಟಕ್‌ನ ಶ್ರೀರಾಮ ಚಂದ್ರ ಭಂಜಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.
-
#WATCH | Odisha: Latest visuals from the spot where the deadly #BalasoreTrainTragedy took place.
— ANI (@ANI) June 5, 2023 " class="align-text-top noRightClick twitterSection" data="
After the completion of restoration work, train movement was resumed yesterday night pic.twitter.com/Q6AytOaTo2
">#WATCH | Odisha: Latest visuals from the spot where the deadly #BalasoreTrainTragedy took place.
— ANI (@ANI) June 5, 2023
After the completion of restoration work, train movement was resumed yesterday night pic.twitter.com/Q6AytOaTo2#WATCH | Odisha: Latest visuals from the spot where the deadly #BalasoreTrainTragedy took place.
— ANI (@ANI) June 5, 2023
After the completion of restoration work, train movement was resumed yesterday night pic.twitter.com/Q6AytOaTo2
ಸಾವಿನ ಸಂಖ್ಯೆ ಪರಿಷ್ಕರಣೆ: ಕೆಲವು ಮೃತ ದೇಹಗಳನ್ನು ಎರಡು ಬಾರಿ ಎಣಿಸಲಾಗಿದೆ ಎಂದು ನಿರ್ಧರಿಸಿದ ನಂತರ ಸಾವನ್ನಪ್ಪಿದವರ ಸಂಖ್ಯೆಯನ್ನು 288 ರಿಂದ 275 ಕ್ಕೆ ಪರಿಷ್ಕರಿಸಲಾಗಿದೆ ಎಂದು ಒಡಿಶಾದ ಮುಖ್ಯ ಕಾರ್ಯದರ್ಶಿ ಪ್ರದೀಪ್ ಜೆನಾ ಸ್ಪಷ್ಟಪಡಿಸಿದ್ದಾರೆ. ಸಾವಿನ ಸಂಖ್ಯೆ 275 ಆಗಿದೆ. ಮೊದಲು ವರದಿ ಮಾಡಿದಂತೆ 288 ಅಲ್ಲ. ಟೋಲ್ ಅನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಮರು ಪರಿಶೀಲಿಸಿದರು ಮತ್ತು ಕೆಲವು ದೇಹಗಳನ್ನು ಎರಡು ಬಾರಿ ಎಣಿಸಲಾಗಿದೆ ಎಂದು ಕಂಡು ಬಂದಿದೆ. ಆದ್ದರಿಂದ ಮೃತರ ಸಂಖ್ಯೆಯನ್ನು 275 ಕ್ಕೆ ಪರಿಷ್ಕರಿಸಲಾಗಿದೆ. ಅದರಲ್ಲಿ 88 ಶವಗಳನ್ನು ಗುರುತಿಸಲಾಗಿದೆ. 1,175 ಗಾಯಗೊಂಡವರಲ್ಲಿ 793 ಮಂದಿ ಚಿಕಿತ್ಸೆ ಬಳಿಕ ಬಿಡುಗಡೆಗೊಂಡಿದ್ದಾರೆ ಎಂದು ಅವರು ತಿಳಿಸಿದರು.
ದುರಂತಕ್ಕೆ ಮಸೀದಿ ಕಾರಣ..ತುಮಕೂರು ಮೂಲದ ಮಹಿಳೆಯಿಂದ ಫೋಟೋ ಶೇರ್: ಒಡಿಶಾದ ಬಾಲಾಸೋರ್ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಸುಳ್ಳು ಸುದ್ದಿ ಹರಿದಾಡುತ್ತಿವೆ. ಈ ಬಗ್ಗೆ ಮಸೀದಿ ಫೋಟೋ ಹಂಚಿಕೊಂಡಿರುವ ತುಮಕೂರಿನ ಮಹಿಳೆಯ ಮಾಹಿತಿಯನ್ನು ಒಡಿಶಾ ಪೊಲೀಸರು ಸಂಗ್ರಹಿಸಿದ್ದಾರೆ. ಅಲ್ಲದೇ ಈ ಬಗ್ಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.
-
We appeal to all concerned to desist from circulating such false and ill-motivated posts. Severe legal action will be initiated against those who are trying to create communal disharmony by spreading rumours.
— Odisha Police (@odisha_police) June 4, 2023 " class="align-text-top noRightClick twitterSection" data="
">We appeal to all concerned to desist from circulating such false and ill-motivated posts. Severe legal action will be initiated against those who are trying to create communal disharmony by spreading rumours.
— Odisha Police (@odisha_police) June 4, 2023We appeal to all concerned to desist from circulating such false and ill-motivated posts. Severe legal action will be initiated against those who are trying to create communal disharmony by spreading rumours.
— Odisha Police (@odisha_police) June 4, 2023
ತುಮಕೂರಿನ ನಿವಾಸಿ ಹಾಗೂ ಬಿಜೆಪಿ ಕಾರ್ಯಕರ್ತೆಯೊಬ್ಬರು ವಿವಾದಿತ ಅಂಶವೊಂದನ್ನು ಹೈ ಲೈಟ್ ಮಾಡಿ ಟ್ವೀಟ್ ಹಂಚಿಕೊಂಡಿದ್ದರು. ನಿನ್ನೆ ಸಂಜೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದ್ದ ಈ ಫೋಟೋ ಸಾಕಷ್ಟು ಚರ್ಚೆಗೆ ಒಳಗಾಗಿತ್ತು. ಮತ್ತೊಂದು ಕಡೆ ಇದು ಸುಳ್ಳು ಸುದ್ದಿ ಎಂದು ಮರು ಟ್ವೀಟ್ ಮಾಡಿರುವ ಒಡಿಶಾ ಪೊಲೀಸರು, ಇದರ ಬೆನ್ನಲ್ಲೇ ಮಹಿಳೆ ಮಾಹಿತಿ ಕಲೆಹಾಕಿದ್ದಾರೆ ಎಂದು ತಿಳಿದು ಬಂದಿದೆ. ಪೊಲೀಸರು ಕಾನೂನು ಕ್ರಮಕ್ಕೆ ಮುಂದಾಗುತ್ತಿದ್ದಂತೆ ಟ್ವೀಟ್ ಮಾಡಿದ ಮಹಿಳೆ ತಮ್ಮ ಟ್ವೀಟ್ ಡಿಲೀಟ್ ಮಾಡಿದ್ದಾರೆ ಎಂದು ಗೊತ್ತಾಗಿದೆ.
ಇದನ್ನೂ ಓದಿ: ಕೋರಮಂಡಲ್ ಎಕ್ಸ್‌ಪ್ರೆಸ್‌ಗೆ ಗ್ರೀನ್ ಸಿಗ್ನಲ್ ಸಿಕ್ಕಿತ್ತು: ರೈಲ್ವೆ ಮಂಡಳಿ ಸದಸ್ಯೆಯ ವಿವರಣೆ ಹೀಗಿದೆ..