ETV Bharat / bharat

ಶಿರಡಿ ಸಾಯಿ ಬಾಬಾ ದರ್ಶನಕ್ಕೆ ಹೊರಟಿದ್ದ ಭಕ್ತರ ಕಾರು ಅಪಘಾತ: ಕರ್ನಾಟಕದ ನಾಲ್ವರ ದುರ್ಮರಣ - ಶಿರಡಿ ಸಾಯಿಬಾಬಾ ದರ್ಶನ

ಸಾಯಿಬಾಬಾ ದರ್ಶನಕ್ಕೆ ಹೊರಟಿದ್ದ ಕರ್ನಾಟಕ ಭಕ್ತರ ಕಾರೊಂದು ಮಹಾರಾಷ್ಟ್ರದಲ್ಲಿ ಅಪಘಾತಕ್ಕೀಡಾಗಿದೆ. ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ.

ಭಕ್ತರ ಕಾರು ಅಪಘಾತ
ಭಕ್ತರ ಕಾರು ಅಪಘಾತ
author img

By ETV Bharat Karnataka Team

Published : Dec 27, 2023, 12:59 PM IST

ಸೊಲ್ಲಾಪುರ (ಮಹಾರಾಷ್ಟ್ರ) : ಶಿರಡಿ ಸಾಯಿಬಾಬಾ ದರ್ಶನಕ್ಕೆ ತೆರಳುತ್ತಿದ್ದ ಕರ್ನಾಟಕದ ಭಕ್ತರ ವಾಹನ ಭೀಕರ ಅಪಘಾತಕ್ಕೀಡಾಗಿ, ನಾಲ್ವರು ದುರ್ಮರಣ ಹೊಂದಿದ್ದಾರೆ. ಬುಧವಾರ ಮುಂಜಾನೆ ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರ ಜಿಲ್ಲೆಯ ಕರ್ಮಲಾ ತಾಲೂಕಿನ ಪಾಂಡೆ ಗ್ರಾಮದ ಬಳಿ ದುರಂತ ಈ ಅಪಘಾತ ಸಂಭವಿಸಿದೆ. ಮೃತರೆಲ್ಲರೂ ಕರ್ನಾಟಕ ರಾಜ್ಯದವರಾಗಿದ್ದಾರೆ. ಅದೃಷ್ಟವಶಾತ್​ ಅಪಘಾತದಲ್ಲಿ 8 ತಿಂಗಳ ಮಗು ಬದುಕುಳಿದಿದೆ.

ಕಲಬುರಗಿಯ ಶ್ರೀಶೈಲ ಚಂಡೇಶ ಕುಂಬಾರ (56) ಶಶಿಕಲಾ ಶ್ರೀಶೈಲ್ ಕುಂಬಾರ (50) ಬಾಗಲಕೋಟೆಯ ಜ್ಯೋತಿ ದೀಪಕ್​ ಹಿರೇಮಠ (38) ಸ್ಥಳದಲ್ಲೇ ಮೃತಪಟ್ಟರೆ, ಹುಬ್ಬಳ್ಳಿಯ ಶಾರದಾ ದೀಪಕ್​ ಹಿರೇಮಠ (70) ತೀವ್ರವಾಗಿ ಗಾಯಗೊಂಡು ಕರ್ಮಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಅಸುನೀಗಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಕರ್ನಾಟಕದ ಕಲಬುರಗಿಯಿಂದ 8 ಮಂದಿ ಭಕ್ತರು ಶಿರಡಿ ಸಾಯಿಬಾಬಾ ದರ್ಶನಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ, ಕರ್ಮಲ ತಾಲೂಕಿನ ಪಾಂಡೆ ಗ್ರಾಮದ ಬಳಿ ಕಾರು ತೆರಳುತ್ತಿದ್ದಾಗ ಎದುರಿಗೆ ಬಂದ ಕಂಟೈನರ್​ಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಅಪಘಾತ ಎಷ್ಟು ಭೀಕರವಾಗಿತ್ತು ಎಂದರೆ ಸ್ಥಳದಲ್ಲೇ ಮೂವರು ಸಾವಿಗೀಡಾಗಿದ್ದಾರೆ.

ಬೆಳ್ಳಂಬೆಳಗ್ಗೆ ನಡೆದ ಅಪಘಾತದ ದೊಡ್ಡ ಸದ್ದ ಕೇಳಿದ ಗ್ರಾಮದ ಕೆಲವರು ಸ್ಥಳಕ್ಕೆ ಬಂದು ಕಾರಿನಲ್ಲಿ ಸಿಕ್ಕಿದ್ದವರನ್ನು ಹೊರತೆಗೆದಿದ್ದಾರೆ. ತಕ್ಷಣವೇ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಢ ನಿದ್ದೆಯಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಈ ಪೈಕಿ ತೀವ್ರ ಗಾಯಗೊಂಡಿದ್ದ ಶಾರದಾ ದೀಪಕ್​ ಎಂಬುವರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡುವಾಗ ಮೃತಪಟ್ಟಿದ್ದಾರೆ.

8 ತಿಂಗಳ ಹಸುಗೂಸು ಬಚಾವ್​: 8 ಮಂದಿಯ ಪೈಕಿ ನಾಲ್ವರು ಸಾವಿಗೀಡಾದರೆ, 8 ತಿಂಗಳ ಹಸುಗೂಸು ಭೀಕರ ಅಪಘಾತದಲ್ಲಿ ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದೆ. ಎಲ್ಲ ಗಾಯಾಳುಗಳನ್ನು ಕರ್ಮಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪಘಾತದ ನಂತರ ಕಂಟೈನರ್ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನೆಲಮಂಗಲದಲ್ಲಿ ಅಪಘಾತ: ದಟ್ಟವಾದ ಮಂಜಿನಿಂದಾಗಿ ಗೋಚರತೆ ಇಲ್ಲದೆ ತುಮಕೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ಅಪಘಾತ ಸಂಭವಿಸಿದೆ. ರಸ್ತೆ ಕಾಣದೇ ನಿಂತಿದ್ದ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಬಸ್​ನಲ್ಲಿದ್ದ 30 ಪ್ರಯಾಣಿಕರಿಗೆ ಗಾಯಗಳಾಗಿವೆ. ಗಂಭೀರ ಗಾಯಗೊಂಡ 7 ಮಂದಿಯನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕಳುಹಿಸಲಾಗಿದೆ. ಅಪಘಾತದಿಂದ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿದೆ.

ಇದನ್ನೂ ಓದಿ: ದೆಹಲಿಯಲ್ಲಿ ದಟ್ಟ ಮಂಜಿಗೆ ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ: ಚಳಿಗೆ ಥರಗುಟ್ಟಿದ ಶ್ರೀನಗರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.