ನವದೆಹಲಿ: ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಅನುಭವಿಸಿದ ನಂತರ ಪಕ್ಷದಲ್ಲಿ ಆಂತರಿಕ ಕಲಹ ಉಂಟಾಗಿದ್ದು, ಸೋಲಿನ ಬಗ್ಗೆ ವಿಮರ್ಶಿಸಲು ಸೋನಿಯಾ ಗಾಂಧಿ ಇಂದು ಸಲಹಾ ಸಮಿತಿ ಸಭೆ ಕರೆದಿದ್ದಾರೆ.
ಬಿಹಾರ ವಿಧಾನಸಭಾ ಚುನಾವಣೆಯ ಬಳಿಕ ಕಾಂಗ್ರೆಸ್ ದುರ್ಬಲ ಪ್ರತಿಪಕ್ಷವಾಗಿ ಹೊರಹೊಮ್ಮಿದೆ. ಕಾಂಗ್ರೆಸ್ 70 ಸ್ಥಾನಗಳಿಗೆ ಸ್ಪರ್ಧಿಸಿದ್ದು, ಆರ್‌ಜೆಡಿ 144 ಸ್ಥಾನಗಳಿಗೆ ಸ್ಪರ್ಧಿಸಿತ್ತು. ಇದರಲ್ಲಿ ಕೇವಲ 19 ಸ್ಥಾನಗಳನ್ನು ಮಾತ್ರ ಗೆದ್ದಿದೆ.
ಚುನಾವಣೆ ಸೋಲಿನ ಬಳಿಕ ಪಕ್ಷದೊಳಗೆ ಆಂತರಿಕ ಕಲಹ ಉಂಟಾಗಿದ್ದು, ಕಾಂಗ್ರೆಸ್ನ ಹಿರಿಯ ನಾಯಕ ಕಪಿಲ್ ಸಿಬಲ್ ಸಂದರ್ಶನವೊಂದರಲ್ಲಿ ಪಕ್ಷದ ನಾಯಕತ್ವ ಸರಿಯಾಗಿಲ್ಲ, ಬದಲಾವಣೆ ಮಾಡುವ ಅವಶ್ಯಕತೆ ಇದೆ ಎಂಬುದನ್ನು ಒಪ್ಪಿಕೊಂಡಿದ್ದರು. ಮತ್ತೊಂದೆಡೆ ಸಿಬಲ್ ಅವರ ಹೇಳಿಕೆಗೆ ಹಲವರು ಕಿಡಿಕಾರಿದ್ದಾರೆ.
ಕಪಿಲ್ ಸಿಬಲ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್, ಕಾಂಗ್ರೆಸ್ ಪಕ್ಷದ ಆಂತರಿಕ ವಿಷಯಗಳನ್ನು ಮಾಧ್ಯಮಗಳಲ್ಲಿ ವ್ಯಕ್ತಪಡಿಸುವ ಮೂಲಕ ಪಕ್ಷದ ಕಾರ್ಯಕರ್ತರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಟ್ವೀಟ್ ಮಾಡಿದ್ದರು.