ETV Bharat / bharat

ಪಂಚರಾಜ್ಯ ಸೋಲಿಗೆ ತಲೆದಂಡ.. ಐದು ರಾಜ್ಯಗಳ ಕಾಂಗ್ರೆಸ್​ ಅಧ್ಯಕ್ಷರ ರಾಜೀನಾಮೆಗೆ ಸೋನಿಯಾ ಸೂಚನೆ.. - ಐದು ರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರ ರಾಜೀನಾಮೆ

ಉತ್ತರಪ್ರದೇಶ, ಉತ್ತರಾಖಂಡ, ಪಂಜಾಬ್​, ಗೋವಾ ಮತ್ತು ಮಣಿಪುರದಲ್ಲಿ ಕಾಂಗ್ರೆಸ್​​ ಅಧ್ಯಕ್ಷರು ರಾಜೀನಾಮೆ ನೀಡುವಂತೆ ಸೋನಿಯಾ ಗಾಂಧಿ ಸೂಚನೆ ನೀಡಿದ್ದಾರೆಂದು ಪಕ್ಷದ ಮುಖಂಡ ರಂದೀಪ್ ಸುರ್ಜೇವಾಲ್ ತಿಳಿಸಿದ್ದಾರೆ..

Congress President Sonia Gandhi
Congress President Sonia Gandhi
author img

By

Published : Mar 15, 2022, 7:33 PM IST

Updated : Mar 15, 2022, 7:46 PM IST

ನವದೆಹಲಿ : ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲು ಕಾಣುವ ಮೂಲಕ ತೀವ್ರ ಮುಖಭಂಗಕ್ಕೊಳಗಾಗಿದೆ. ಇದರ ಬೆನ್ನಲ್ಲೇ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

ಉತ್ತರಪ್ರದೇಶ, ಉತ್ತರಾಖಂಡ, ಪಂಜಾಬ್​, ಗೋವಾ ಮತ್ತು ಮಣಿಪುರದಲ್ಲಿ ಕಾಂಗ್ರೆಸ್​​ ಅಧ್ಯಕ್ಷರು ರಾಜೀನಾಮೆ ನೀಡುವಂತೆ ಸೋನಿಯಾ ಗಾಂಧಿ ಸೂಚನೆ ನೀಡಿದ್ದಾರೆಂದು ಪಕ್ಷದ ಮುಖಂಡ ರಂದೀಪ್ ಸುರ್ಜೇವಾಲ್ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.

  • Congress President, Smt. Sonia Gandhi has asked the PCC Presidents of Uttar Pradesh, Uttarakhand, Punjab, Goa & Manipur to put in their resignations in order to facilitate reorganisation of PCC’s.

    — Randeep Singh Surjewala (@rssurjewala) March 15, 2022 " class="align-text-top noRightClick twitterSection" data=" ">

ಇದನ್ನೂ ಓದಿರಿ: ಉಕ್ರೇನ್​​ನಿಂದ ವಾಪಸ್​​ ಆದ 740 ವೈದ್ಯಕೀಯ ವಿದ್ಯಾರ್ಥಿಗಳಿಗೆ ಶುಭ ಸುದ್ದಿ ಕೊಟ್ಟ ಸಿಎಂ ಕೆಸಿಆರ್​​!

ಪಂಚರಾಜ್ಯಗಳಲ್ಲಿ ಸೋಲಿನ ಕುರಿತು ಆತ್ಮಾವಲೋಕನ ಮಾಡಿಕೊಳ್ಳಲು ಕಳೆದ ಭಾನುವಾರ ಕಾಂಗ್ರೆಸ್​ ಕಾರ್ಯಕಾರಿಣಿ ಸಭೆ ನಡೆಸಲಾಗಿತ್ತು. ಈ ವೇಳೆ ಕೆಲ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇದರ ಬೆನ್ನಲ್ಲೇ ಸೋಲು ಕಂಡಿರುವ ಐದು ರಾಜ್ಯಗಳ ಕಾಂಗ್ರೆಸ್​ ಮುಖ್ಯಸ್ಥರನ್ನ ವಜಾಗೊಳಿಸಲು ನಿರ್ಧರಿಸಲಾಗಿದೆ.

ಪಂಜಾಬ್​​ನಲ್ಲಿ ಅಧಿಕಾರ ನಡೆಸುತ್ತಿದ್ದ ಕಾಂಗ್ರೆಸ್​ ಪಕ್ಷ ಆಮ್​ ಆದ್ಮಿ ವಿರುದ್ಧ ಹೀನಾಯ ಸೋಲು ಕಂಡಿದ್ದು, ಕೇವಲ 18 ಸ್ಥಾನಗಳಲ್ಲಿ ಗೆಲುವು ದಾಖಲು ಮಾಡಿದೆ. ಉಳಿದಂತೆ ಅತಿದೊಡ್ಡ ರಾಜ್ಯ ಉತ್ತರ ಪ್ರದೇಶದಲ್ಲಿ ಕೇವಲ 2 ಸ್ಥಾನ, ಗೋವಾದಲ್ಲಿ 11, ಉತ್ತರಾಖಂಡದಲ್ಲಿ 19, ಮಣಿಪುರದಲ್ಲಿ 5 ಸ್ಥಾನಗಳಲ್ಲಿ ಮಾತ್ರ ಗೆದ್ದಿದೆ.

Last Updated : Mar 15, 2022, 7:46 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.