ETV Bharat / bharat

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಉಸಿರಾಟದ ಸಮಸ್ಯೆ : ಮುಂದುವರಿದ ಚಿಕಿತ್ಸೆ! - ಸೋನಿಯಾ ಗಾಂಧಿ ಚಿಕಿತ್ಸೆ

ಗಂಗಾರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋನಿಯಾ ಗಾಂಧಿ ಅವರಿಗೆ ಉಸಿರಾಟ ಸಂಬಂಧಿತ ಸೋಂಕು ಕಾಣಿಸಿಕೊಂಡಿದೆ..

Sonia Gandhi breathing issues
ಸೋನಿಯಾ ಗಾಂಧಿ ಉಸಿರಾಟದ ಸಮಸ್ಯೆ
author img

By

Published : Jun 17, 2022, 2:55 PM IST

ನವದೆಹಲಿ : ಕೋವಿಡ್ ಸಂಬಂಧಿತ ಸಮಸ್ಯೆಗಳಿಂದಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದರು. ಗಂಗಾರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋನಿಯಾ ಗಾಂಧಿ ಅವರಿಗೆ ಉಸಿರಾಟ ಸಂಬಂಧ ಸೋಂಕು ಕಾಣಿಸಿಕೊಂಡಿದ್ದು, ಅವರನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಮತ್ತು ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕಾಂಗ್ರೆಸ್ ಪಕ್ಷ ಇಂದು ತಿಳಿಸಿದೆ.

ಪ್ರಸ್ತುತ, ಕೋವಿಡ್ ನಂತರದ ರೋಗಲಕ್ಷಣಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೊತೆಗೆ ಉಸಿರಾಟದ ಸಮಸ್ಯೆಯೂ ಎದುರಾಗಿದೆ. ಚಿಕಿತ್ಸೆ ಮುಂದುವರಿದಿದ್ದು, ವೈದ್ಯರು ನಿಗಾ ಇರಿಸಿದ್ದಾರೆಂದು ಕಾಂಗ್ರೆಸ್​ ತಿಳಿಸಿದೆ.

ಇನ್ನೂ ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣದಲ್ಲಿ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಜೂನ್ 23ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. ಪುತ್ರ ಮತ್ತು ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ಅವರನ್ನು ಈಗಾಗಲೇ ತನಿಖಾ ಸಂಸ್ಥೆ ವಿಚಾರಣೆ ನಡೆಸುತ್ತಿದ್ದು, ಸೋಮವಾರ ಇಡಿ ಮುಂದೆ ಮತ್ತೆ ಅವರು ಹಾಜರಾಗಲಿದ್ದಾರೆ.

ಇದನ್ನೂ ಓದಿ: ಅರ್ಧ ಹಾವನ್ನು ನುಂಗಿ ಹೊರ ಹಾಕಿದ ನಾಗ! ವಿಡಿಯೋ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.