ETV Bharat / bharat

ವಿರೋಧ ಪಕ್ಷದ ನಾಯಕರಿಗಾಗಿ 'ಭೋಜನಕೂಟ'ಆಯೋಜಿಸಲಿರುವ ಸೋನಿಯಾ ಗಾಂಧಿ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರತಿಪಕ್ಷದ ನಾಯಕರು ಮತ್ತು ರಾಜ್ಯ ಸರ್ಕಾರಗಳ ಮುಖ್ಯಮಂತ್ರಿಗಳಿಗೆ ಔತಣಕೂಟ ಆಯೋಜಿಸಲು ಯೋಜಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎನ್​​ಡಿಎ ಸರ್ಕಾರದ ವಿರುದ್ಧ ಪ್ರತಿಪಕ್ಷಗಳನ್ನು ಒಟ್ಟುಗೂಡಿಸುವ ನಿಟ್ಟಿನಲ್ಲಿ ಈ ಸಭೆ ಆಯೋಜಿಸಲಾಗಿದೆ ಎನ್ನಲಾಗಿದೆ.

Sonia Gandhi
ಸೋನಿಯಾ ಗಾಂಧಿ
author img

By

Published : Aug 12, 2021, 4:38 PM IST

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರತಿಪಕ್ಷದ ನಾಯಕರಿಗೆ ಮತ್ತು ರಾಜ್ಯ ಸರ್ಕಾರಗಳ ಮುಖ್ಯಮಂತ್ರಿಗಳಿಗೆ ಭೋಜನಕೂಟ ಆಯೋಜಿಸಲು ಯೋಜಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎನ್​​ಡಿಎ ಸರ್ಕಾರದ ವಿರುದ್ಧ ಪ್ರತಿಪಕ್ಷಗಳನ್ನು ಒಟ್ಟುಗೂಡಿಸುವ ನಿಟ್ಟಿನಲ್ಲಿ ಈ ಸಭೆ ಆಯೋಜಿಸಲಾಗಿದೆ ಎನ್ನಲಾಗಿದೆ.

ಯುಪಿಎ ಮತ್ತು ಡಿಎಂಕೆಯ ಎಂಕೆ ಸ್ಟಾಲಿನ್, ಟಿಎಂಸಿಯ ಮಮತಾ ಬ್ಯಾನರ್ಜಿ ಮತ್ತು ಶಿವಸೇನೆಯ ಉದ್ಧವ್ ಠಾಕ್ರೆಯಂತಹ ಸಮಾನ ಮನಸ್ಕ ಪಕ್ಷಗಳ ಮಂತ್ರಿಗಳನ್ನು ಡಿನ್ನರ್​ ಪಾರ್ಟಿಗೆ ಆಹ್ವಾನಿಸಲಿದ್ದಾರೆ ಎನ್ನಲಾಗಿದೆ. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮತ್ತು ಶಿವಸೇನೆಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಎನ್​ಸಿಪಿ ವರಿಷ್ಠ ಶರದ್ ಪವಾರ್ ಅವರನ್ನೂ ಆಹ್ವಾನಿಸಲಾಗುವುದು ಎಂದು ಹೇಳಲಾಗಿದೆ.

ಮಳೆಗಾಲದ ಅಧಿವೇಶನದಲ್ಲಿ ಪೆಗಾಸಸ್ ಸ್ಪೈವೇರ್ ಸಮಸ್ಯೆ ಮತ್ತು ರೈತರ ಪ್ರತಿಭಟನೆಗಳ ಕುರಿತು ಚರ್ಚೆಗೆ ಸರ್ಕಾರವು ಅವಕಾಶ ನೀಡದಿರುವ ಕಾರಣ ವಿರೋಧ ಪಕ್ಷಗಳು ಕಲಾಪಕ್ಕೆ ಅಡ್ಡಿಪಡಿಸಿ, ಪ್ರತಿಭಟನೆ ನಡೆಸಿವೆ. ಈ ಮಧ್ಯೆ, ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರ ನಿಯೋಗವು ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ಅವರನ್ನು ಗುರುವಾರ ಮಧ್ಯಾಹ್ನ ಅವರ ನಿವಾಸದಲ್ಲಿ ಭೇಟಿ ಮಾಡಲು ತೆರಳಿದೆ.

ಕೇಂದ್ರದ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಮತ್ತು ಸಂಸತ್ತಿನ ಮಳೆಗಾಲದ ಅಧಿವೇಶನ ಮುಂದೂಡುವಂತೆ ಒತ್ತಾಯಿಸಿ ಪ್ರತಿಪಕ್ಷ ನಾಯಕರು ಗುರುವಾರ ಸಂಸತ್ತಿನಿಂದ ವಿಜಯ ಚೌಕ್ ಕಡೆಗೆ ಪ್ರತಿಭಟನಾ ಮೆರವಣಿಗೆ ಕೈಗೊಂಡಿದ್ದರು.

ಪ್ರತಿಭಟನಾ ಮೆರವಣಿಗೆಯಲ್ಲಿ ಸುಮಾರು 15 ವಿರೋಧ ಪಕ್ಷಗಳು ಭಾಗವಹಿಸಿವೆ ಎಂದು ವರದಿಯಾಗಿದೆ. ಕಾಂಗ್ರೆಸ್, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ), ತೃಣಮೂಲ ಕಾಂಗ್ರೆಸ್ (ಟಿಎಂಸಿ), ಸಮಾಜವಾದಿ ಪಕ್ಷ (ಎಸ್​​ಪಿ), ಶಿವಸೇನೆ, ನ್ಯಾಷನಲ್ ಕಾನ್ಫರೆನ್ಸ್, ಸಿಪಿಎಂ, ಸಿಪಿಐ, ರಾಷ್ಟ್ರೀಯ ಜನತಾದಳ (ಆರ್ ಜೆಡಿ), ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) , ಆಮ್ ಆದ್ಮಿ ಪಕ್ಷ (ಎಎಪಿ), ಕ್ರಾಂತಿಕಾರಿ ಸಮಾಜವಾದಿ ಪಕ್ಷ (ಆರ್ ಎಸ್ ಪಿ), ವಿಸಿಕೆ, ಕೇರಳ ಕಾಂಗ್ರೆಸ್ (ಮಣಿ) ಮತ್ತು ಲೋಕತಾಂತ್ರಿಕ್ ಜನತಾದಳ (ಎಲ್ ಜೆಡಿ) ಭಾಗವಹಿಸಿದ್ದವು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.