ನವದೆಹಲಿ : ಉತ್ತರಪ್ರದೇಶದ ರಾಯ್‌ಬರೇಲಿಯ ಮತದಾನಕ್ಕೂ ಮುನ್ನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಯೋಗಿ ಸರ್ಕಾರವನ್ನು ಗುರಿಯಾಗಿಸಿ ಮಾತನಾಡಿದರು. ಯುವಕರ ನಿರುದ್ಯೋಗ ಸಮಸ್ಯೆ ಬಗ್ಗೆ ಯೋಗಿ ಸರ್ಕಾರ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದರು.
ಕೋವಿಡ್ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ಸೌಲಭ್ಯಗಳ ಕೊರತೆಯಿಂದಾಗಿ ಅನೇಕರು ತಮ್ಮ ಕುಟುಂಬವನ್ನು ಕಳೆದುಕೊಳ್ಳಬೇಕಾಯಿತು ಎಂದು ಸೋನಿಯಾ ಗಾಂಧಿ ದೂರಿದರು.
ಇದೇ ಸಂದರ್ಭದಲ್ಲಿ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಿಡಿಕಾರಿದ ಅವರು, ಸಾರ್ವಜನಿಕರ ಹೊರೆಯನ್ನು ಕಡಿಮೆ ಮಾಡುವ ಬದಲು ಜನರ ಶ್ರಮದಿಂದ ಮಾಡಿದ ಸಾರ್ವಜನಿಕ ಸಂಸ್ಥೆಗಳನ್ನು ಕಾಸಿನ ಬೆಲೆಗೆ ಮಾರಾಟ ಮಾಡಿದೆ ಎಂದರು. ರಾಯ್ ಬರೇಲಿಯನ್ನು ನನ್ನ ಎರಡನೇ ತವರು ಮನೆ ಎಂದು ಸೋನಿಯಾ ಗಾಂಧಿ ಹೇಳಿದರು.
ಇದನ್ನೂ ಓದಿ: ಕಾಂಗ್ರೆಸ್ ಇಲ್ಲದೆ ಯಾವುದೇ ರಂಗದ ರಚನೆ ಇಲ್ಲ : ಸಂಜಯ್ ರಾವತ್