ETV Bharat / bharat

'ಸೋನಿಯಾ ಗಾಂಧಿ ತೆಲಂಗಾಣದಿಂದ ಲೋಕಸಭೆಗೆ ಸ್ಪರ್ಧಿಸಲಿ': ಪಿಸಿಸಿ ನಿರ್ಣಯ ಅಂಗೀಕಾರ - PCC adopts resolution

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತೆಲಂಗಾಣದಿಂದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಸ್ಪರ್ಧಿಸಬೇಕು ಎಂದು ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (ಪಿಸಿಸಿ) ನಿರ್ಣಯ ಅಂಗೀಕರಿಸಿದೆ.

ಸೋನಿಯಾ ಗಾಂಧಿ
ಸೋನಿಯಾ ಗಾಂಧಿ
author img

By ETV Bharat Karnataka Team

Published : Jan 4, 2024, 4:52 PM IST

ಹೈದರಾಬಾದ್: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತೆಲಂಗಾಣದಿಂದ ಸ್ಪರ್ಧಿಸುವಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಒತ್ತಾಯಿಸುವ ನಿರ್ಣಯವನ್ನು ಪ್ರದೇಶ ಕಾಂಗ್ರೆಸ್ ಸಮಿತಿ (ಪಿಸಿಸಿ) ಬುಧವಾರ ಅಂಗೀಕರಿಸಿದೆ. ಇಲ್ಲಿನ ಇಂದಿರಾ ಭವನದಲ್ಲಿ ಪಿಸಿಸಿ ಅಧ್ಯಕ್ಷ ಹಾಗೂ ಮುಖ್ಯಮಂತ್ರಿಯಾದ ರೇವಂತ್ ರೆಡ್ಡಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಇಂಥದ್ದೊಂದು ನಿರ್ಧಾರ ಕೈಗೊಳ್ಳಲಾಗಿದೆ.

ಸಭೆಯಲ್ಲಿ ಪಕ್ಷದ ಮುಖಂಡ ಭಟ್ಟಿ ವಿಕ್ರಮಾರ್ಕ ಮಾತನಾಡಿ, ಲೋಕಸಭೆ ಚುನಾವಣೆಗೆ ಪಕ್ಷ ಸಜ್ಜಾಗಬೇಕಿದೆ. ಸದ್ಯ ರಾಜ್ಯದಲ್ಲಿ ಪಕ್ಷದ ಪರವಾಗಿ ಅಲೆ ಇದೆ. ಹೀಗಾಗಿ ಮುಂದಿನ ಚುನಾವಣೆಗಳಲ್ಲಿ ನಾಯಕರು, ಕಾರ್ಯಕರ್ತರು ಹೆಚ್ಚಿನ ಶ್ರಮ ವಹಿಸಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಹೇಳಿದರು.

ಪಕ್ಷಕ್ಕಾಗಿ ಶ್ರಮಿಸಿದವರಿಗೆ ಮನ್ನಣೆ: ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಬೇಕು. ಹಿಂದಿನ ಸರ್ಕಾರದ ಅರಾಜಕತೆಯಿಂದ ರಾಜ್ಯವು ಆರ್ಥಿಕವಾಗಿ ಸಂಕಷ್ಟದಲ್ಲಿದೆ. ಮತ್ತೊಂದೆಡೆ, ಜನತೆಗೆ ನೀಡಿದ ಭರವಸೆಗಳನ್ನು ಜಾರಿಗೊಳಿಸಬೇಕು. ರಾಜ್ಯದಲ್ಲಿ ನೆಮ್ಮದಿಯ ವಾತಾವರಣ ನಿರ್ಮಾಣವಾಗಿದೆ. ಜನರು ಸ್ವಾತಂತ್ರ್ಯ ಬಂದಿದೆ ಎಂದು ಭಾವಿಸಿದ್ದಾರೆ. ಪಕ್ಷಕ್ಕಾಗಿ ಶ್ರಮಿಸಿದವರಿಗೆ ಮನ್ನಣೆ ನೀಡಲಾಗುತ್ತದೆ ಎಂದು ಹೇಳಿದರು.

ಹಿರಿಯ ಕಾಂಗ್ರೆಸ್ ನಾಯಕಿ ದೀಪಾ ದಾಸ್​​ಮುನ್ಷಿ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರು ಹೆಚ್ಚು ಶ್ರಮಿಸಬೇಕು. ಹೈದರಾಬಾದ್‌ನಲ್ಲಿ ಅನೇಕ ಬೋಗಸ್ ಮತಗಳಿವೆ. ಈ ನಿಟ್ಟಿನಲ್ಲಿ ನಾಯಕರು ಎಚ್ಚರಿಕೆ ವಹಿಸಬೇಕು. ಪಕ್ಷದಲ್ಲಿ ಹೆಚ್ಚು ಟೀಂ ವರ್ಕ್ ಆಗಬೇಕು. ಮುಂದೆ ಹಲವು ಚುನಾವಣೆಗಳಿವೆ. ಸರ್ಕಾರ ಮತ್ತು ಪಕ್ಷದ ಸಮನ್ವಯದಿಂದ ಕೆಲಸ ಮಾಡಿದರೆ ಉತ್ತಮ ಫಲಿತಾಂಶ ಬರಲಿದೆ ಎಂದರು.

ಇಂಡಿಯಾ ಕೂಟ ಪ್ರಭಾವಿಯಾಗಿಲ್ಲ: ದೇಶದಲ್ಲಿ ಇಂಡಿಯಾ ಕೂಟ ಅಷ್ಟು ಪ್ರಭಾವಿಯಾಗಿಲ್ಲ. ಶ್ರಮಪಟ್ಟರೆ ಸಂಸತ್ ಚುನಾವಣೆಯಲ್ಲಿ ಪಕ್ಷಕ್ಕೆ ಉತ್ತಮ ಫಲಿತಾಂಶ ಸಿಗಲಿದೆ. ಸೋನಿಯಾ ಗಾಂಧಿ ಅವರಂತಹ ಹಿರಿಯ ನಾಯಕರು ರಾಜ್ಯದಿಂದ ಸ್ಪರ್ಧಿಸಿದರೆ, ಹೆಚ್ಚಿನ ಪ್ರಚಾರ ಸಿಗಲದೆ ಎಂದು ಸಚಿವ ಉತ್ತಮ್ ಕುಮಾರ್ ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.

ಮಹಾಲಕ್ಷ್ಮಿ ಯೋಜನೆಯಡಿ ನೀಡಲಾಗುತ್ತಿರುವ ಉಚಿತ ಬಸ್ ಸೌಲಭ್ಯ ಯಶಸ್ವಿಯಾಗಿದೆ ಎಂದು ಸಚಿವ ಪೊನ್ನಂ ಪ್ರಭಾಕರ್ ಹೇಳಿದರು. ಮಹಿಳೆಯರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯದ ವಿರುದ್ಧ ಬಿಆರ್‌ಎಸ್ ಕಾರ್ಯನಿರ್ವಹಿಸುತ್ತಿದೆ. ಇದನ್ನು ಎಲ್ಲಾ ಹಂತದ ಕಾಂಗ್ರೆಸ್‌ ಮುಖಂಡರು ಹಿಮ್ಮೆಟ್ಟಿಸಬೇಕು ಎಂದು ಸಲಹೆ ನೀಡಿದರು. ಸಭೆಯಲ್ಲಿ ಹಿರಿಯ ಉಪಾಧ್ಯಕ್ಷರಾದ ಮಲ್ಲು ರವಿ, ಚಾಮಲಾ ಕಿರಣ್‌ಕುಮಾರ್ ರೆಡ್ಡಿ, ಪಕ್ಷದ ಮಾಧ್ಯಮ ಉಸ್ತುವಾರಿ ಸುಜಾತಾ ಪೌಲ್ ಅವರು ಇದ್ದರು.

ಇದನ್ನೂ ಓದಿ: ರಾಹುಲ್​, ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದ ಆಂಧ್ರ ಸಿಎಂ ಜಗನ್​ ಸಹೋದರಿ ಶರ್ಮಿಳಾ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.