ನವದೆಹಲಿ: ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಪೋಷಕರನ್ನು ಕಳೆದುಕೊಂಡಿರುವ ಮಕ್ಕಳ ಭವಿಷ್ಯದ ಬಗ್ಗೆ ಯೋಚಿಸುವಂತೆ ಕೇಂದ್ರ, ರಾಜ್ಯ ಸರ್ಕಾರಗಳಿಗೆ ಬಾಲಿವುಡ್ ನಟ ಸೋನು ಸೂದ್ ಮನವಿ ಮಾಡಿದ್ದಾರೆ.
ಸೋನು ಸೂದ್ ಅವರು ಕೊರೊನಾ ಆರಂಭದಿಂದಲೂ ಬಡವರು, ವಲಸಿಗರಿಗೆ ಸಹಾಯಹಸ್ತ ಚಾಚುತ್ತಾ, ಲೋಕೋಪಕಾರಿ ಕಾರ್ಯಗಳನ್ನು ಮಾಡುತ್ತಿದ್ದು, ಇತ್ತೀಚೆಗಷ್ಟೇ ಸೋಂಕಿಗೆ ಒಳಗಾಗಿ ಚೇತರಿಸಿಕೊಂಡಿದ್ದಾರೆ.
ಇದೀಗ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ವಿಡಿಯೋ ಹಂಚಿಕೊಂಡಿರುವ ನಟ, "ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಪೋಷಕರನ್ನು ಕಳೆದುಕೊಂಡಿರುವ ಮಕ್ಕಳಿಗೆ ಸರ್ಕಾರಿ ಅಥವಾ ಖಾಸಗಿ ಶಾಲೆಗಳಲ್ಲಿ ಉಚಿತ ಶಿಕ್ಷಣ ನೀಡುವಂತೆ ರಾಜ್ಯ, ಕೇಂದ್ರ ಸರ್ಕಾರ, ದತ್ತಿ ಇಲಾಖೆ ಅಥವಾ ಸಹಾಯ ಮಾಡಲು ಮುಂದೆ ಬರುವ ಯಾರೇ ಆಗಿರಲಿ ಅವರಲ್ಲಿ ವಿನಂತಿಸಿಕೊಳ್ಳುತ್ತಿದ್ದೇನೆ" ಎಂದು ಕೋರಿದ್ದಾರೆ.
- " class="align-text-top noRightClick twitterSection" data="
">
"ಸಾಂಕ್ರಾಮಿಕದ ವೇಳೆ ಪ್ರೀತಿಪಾತ್ರರನ್ನು ಕಳೆದುಕೊಂಡ ಪ್ರತಿಯೊಬ್ಬ ವ್ಯಕ್ತಿಗಾಗಿ ಒಟ್ಟಾಗಿ ಕೈಜೋಡಿಸಿ" ಎಂದು ಬರೆದು ಪೋಸ್ಟ್ ಮಾಡಿರುವ ಈ ವಿಡಿಯೋ ಕೆಲವೇ ಗಂಟೆಗಳಲ್ಲಿ 1 ಮಿಲಿಯನ್‌ಗಿಂತಲೂ ಹೆಚ್ಚು ವೀಕ್ಷಣೆ ಗಳಿಸಿದೆ.