ಜಮ್ಮು ಮತ್ತು ಕಾಶ್ಮೀರ : ಇಲ್ಲಿನ ಬಾರಾಮುಲ್ಲಾ ಜಿಲ್ಲೆಯ ಸೊಪೋರ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಾಮಕಿ ನಡೆಸಿ ಮೃತಪಟ್ಟ ಮೂವರು ಭಯೋತ್ಪಾದಕರಲ್ಲಿ ಮುದಾಸೀರ್ ಪಂಡಿತ್ ಕೂಡ ಸೇರಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಉತ್ತರ ಕಾಶ್ಮೀರ ಜಿಲ್ಲೆಯ ಸೊಪೋರ್ನ ಗುಂಡ್ ಬ್ರಾತ್ ಪ್ರದೇಶದಲ್ಲಿ ಎನ್ಕೌಂಟರ್ ನಡೆದಿದೆ ಎಂದು ಕಾಶ್ಮೀರ ಪೊಲೀಸ್ ಇನ್ಸ್ಪೆಕ್ಟರ್ ಜನರಲ್ ವಿಜಯ್ ಕುಮಾರ್ ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಪಂಡಿತ್ ಸೇರಿದಂತೆ ಕನಿಷ್ಠ ಮೂವರು ಉಗ್ರರು ಇದ್ದಾರೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿದ್ದರಿಂದ ಭಾನುವಾರ ತಡರಾತ್ರಿ ಎನ್ಕೌಂಟರ್ ಆರಂಭವಾಗಿತ್ತು.
ಓದಿ: ಜಮ್ಮುಕಾಶ್ಮೀರಕ್ಕೆ ಪುನಃ ರಾಜ್ಯದ ಸ್ಥಾನಮಾನ ನೀಡಿ : ಪಿ.ಚಿದಂಬರಂ