ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ವಿರುದ್ಧದ ಹೋರಾಟ ಮುಂದುವರೆದಿದ್ದು, ಇದರ ಬೆನ್ನಲ್ಲೇ ದೇಶದಲ್ಲಿ ಇದೀಗ ಮತ್ತೊಂದು ಆತಂಕ ಶುರುವಾಗಿದೆ. ಬ್ರಿಟನ್ ವೈರಸ್ ಬೆನ್ನಲ್ಲೇ ದೇಶದಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಬ್ರೇಜಿಲಿಯನ್ ರೂಪಾಂತರಿ ವೈರಸ್ ಕಾಣಿಸಿಕೊಂಡಿವೆ.
ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಾಹಿತಿ ನೀಡಿದ್ದು, ಕಳೆದ ಜನವರಿ ತಿಂಗಳಲ್ಲಿ ಆಫ್ರಿಕಾದಿಂದ ಭಾರತಕ್ಕೆ ಆಗಮಿಸಿದ್ದ ನಾಲ್ವರಲ್ಲಿ ರೂಪಾಂತರ ಕೊರೊನಾ ವೈರಸ್ ಕಾಣಿಸಿಕೊಂಡಿದ್ದು, ಈಗಾಗಲೇ ಅವರನ್ನ ಕ್ವಾರಂಟೈನ್ಗೊಳಪಡಿಸಲಾಗಿದೆ ಎಂದು ತಿಳಿಸಿದೆ. ಇದರ ಜತೆಗೆ ಅವರ ಸಂಪರ್ಕಕ್ಕೆ ಬಂದವರನ್ನ ಪತ್ತೆ ಹಚ್ಚಿ ಪ್ರತ್ಯೇಕಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದರ ಜತೆಗೆ ಓರ್ವ ವ್ಯಕ್ತಿಯಲ್ಲಿ ಬ್ರೆಜಿಲಿಯನ್ ರೂಪಾಂತರ ವೈರಸ್ ಕೂಡ ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿ ಡಾ. ಭಾರ್ಗವ್ ಹೇಳಿದ್ದಾರೆ.
ದೇಶದ ಒಬ್ಬ ವ್ಯಕ್ತಿಯಲ್ಲಿ ಬ್ರೆಜಿಲಿಯನ್ ರೂಪಾಂತರಿ ವೈರಸ್ ಸಹ ಪತ್ತೆಯಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR)ನ ಮಹಾ ನಿರ್ದೇಶಕ ಡಾ. ಬಲರಾಮ್ ಭಾರ್ಗವ್ ತಿಳಿಸಿದ್ದಾರೆ. ವೈರಸ್ ಪತ್ತೆಯಾದವರ ಪೈಕಿ ಓರ್ವ ಅಂಗೋಲಾ, ಟಾಂಜಾನಿಯಾ ಹಾಗೂ ಒಬ್ಬರು ದಕ್ಷಿಣ ಆಫ್ರಿಕಾದಿಂದ ಮರಳಿ ಬಂದಿದ್ದಾರೆ ಎಂದು ವರದಿಯಾಗಿದೆ.