ಪಾಟ್ನಾ: ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಮುಖ್ಯಮಂತ್ರಿ ನಿತೀಶ್ ಕುಮಾರ್ ಉಪಸ್ಥಿತಿಯೊಂದಿಗೆ ಜ್ಞಾನಭವನದಲ್ಲಿ ಪಂಚಾಯತಿ ಕಾರ್ಯದರ್ಶಿಗಳಿಗೆ 11,000 ಉದ್ಯೋಗ ಸೇರ್ಪಡೆ ಪತ್ರಗಳನ್ನು ವಿತರಿಸಿದರು. ಇದೇ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ನಿಮ್ಮ ಹುಟ್ಟುಹಬ್ಬಕ್ಕೆ ಬಿಜೆಪಿ ನಿಮಗೆ ಹುಟ್ಟುಹಬ್ಬದ ಉಡುಗೊರೆ ನೀಡಲು ಬಯಸಿದರೆ, ನೀವು ಏನನ್ನು ನಿರೀಕ್ಷಿಸುತ್ತೀರಿ ಎಂದು ಕೇಳಿದರು. ಇದಕ್ಕೆ ಉತ್ತರಿಸಿದ ತೇಜಸ್ವಿ ಯಾದವ್, ಅವರು ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡಿದರೆ ನಾನು ಬಹಳ ಸಂತಸಪಡುತ್ತೇನೆ ಎಂದು ಹೇಳಿದರು.
ಬಳಿಕ ಮಾತನಾಡುತ್ತಾ, ಯುವಕರ ದೊಡ್ಡ ಶತ್ರು ನಿರುದ್ಯೋಗ. ಆ ನಿಟ್ಟಿನಲ್ಲಿ ನಮ್ಮ ಸರ್ಕಾರವು ಕಾರ್ಯೋನ್ಮುಖವಾಗಿದೆ. ಈಗಾಗಲೇ ಉದ್ಯೋಗ ಸೇರ್ಪಡೆ ಪತ್ರಗಳನ್ನು ವಿತರಿಸುತ್ತಿದ್ದು, ಇನ್ನು ಕೆಲವೇ ತಿಂಗಳಲ್ಲಿ ಲಕ್ಷಗಟ್ಟಲೆ ಉದ್ಯೋಗ ನೀಡುತ್ತೇವೆ ಎಂದು ಹೇಳಿದರು. ಇದೇ ವೇಳೆ, ಕೇಂದ್ರ ಸರ್ಕಾರ ನಮ್ಮ ಮಾದರಿಯನ್ನೇ ಅಳವಡಿಸಿಕೊಳ್ಳುತ್ತಿದೆ ಎಂದರು. ನಂತರ ನಿತೀಶ್ ಕುಮಾರ್ ಅವರನ್ನು ತಬ್ಬಿಕೊಂಡು ಅವರ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದುಕೊಂಡರು.
ಇದನ್ನೂ ಓದಿ:9ನೇ ಕ್ಲಾಸ್ಗೆ ಪ್ಯೂನ್ ಕೆಲಸವೂ ಸಿಗಲ್ಲ, ಆದರೆ ತೇಜಸ್ವಿ ರಾಜ್ಯದ ಡಿಸಿಎಂ: ಪ್ರಶಾಂತ್ ಕಿಶೋರ್ ವಾಗ್ದಾಳಿ