ನವದೆಹಲಿ: ನವದೆಹಲಿಯಿಂದ ಜಮ್ಮುವಿಗೆ ತೆರಳುತ್ತಿದ್ದ ಸ್ಪೈಸ್ ಜೆಟ್ ವಿಮಾನದ ರೆಕ್ಕೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವ ಘಟನೆ ನವದೆಹಲಿ ವಿಮಾನ ನಿಲ್ದಾಣದಲ್ಲಿ ನಡೆಯಿತು. ಅದೃಷ್ಟವಶಾತ್ ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ. ತಕ್ಷಣವೇ ಎಲ್ಲ ಪ್ರಯಾಣಿಕರನ್ನು ಬೇರೊಂದು ವಿಮಾನಕ್ಕೆ ಸ್ಥಳಾಂತರಿಸಲಾಗಿದೆ.

ಸ್ಪೈಸ್ ಜೆಟ್ನ ಎಸ್ಜಿ-160 ಎಂಬ ವಿಮಾನ ಪ್ರಯಾಣಿಕರನ್ನು ಹೊತ್ತು ಜಮ್ಮುವಿಗೆ ಪ್ರಯಾಣಿಸಬೇಕಿತ್ತು. ದೆಹಲಿ ನಿಲ್ದಾಣದ ಟರ್ಮಿನಲ್ನಿಂದ ರನ್ವೇ ಕಡೆಗೆ ತೆರಳುತ್ತಿದ್ದಾಗ ಅಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ವಿಮಾನದ ಒಂದು ರೆಕ್ಕೆ ಹಾನಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ ಎಂದು ವಿಮಾನಯಾನ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ರಾಜಕೀಯ ವೈರತ್ವ ಮರೆತು ಪರಸ್ಪರ ಹಸ್ತಲಾಘವ ಮಾಡಿದ ಸಿಎಂ ಯೋಗಿ-ಅಖಿಲೇಶ್