ನವದೆಹಲಿ: ದೆಹಲಿಯಿಂದ ದುಬೈಗೆ ಹೊರಟಿದ್ದ ಸ್ಪೈಸ್‌ಜೆಟ್ ಎಸ್ಜಿ-11 ವಿಮಾನದಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷದಿಂದಾಗಿ ಪಾಕಿಸ್ತಾನದ ಕರಾಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಎಲ್ಲ ಪ್ರಯಾಣಿಕರು ಸುರಕ್ಷಿವಾಗಿದ್ದಾರೆ ಎಂದು ಸಂಸ್ಥೆ ತಿಳಿಸಿದೆ.
ಸ್ಪೈಸ್‌ಜೆಟ್ ಎಸ್ಜಿ 11 ವಿಮಾನ ಇಂದು ಬೆಳಗ್ಗೆ ದೆಹಲಿಯಿಂದ ದುಬೈ ತೆರಳುತ್ತಿತ್ತು. ಈ ವೇಳೆ ಇಂಡಿಕೇಟರ್ ಲೈಟಿಂಗ್ನಲ್ಲಿ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ವಿಮಾನವನ್ನು ಕರಾಚಿಗೆ ಮರಳಿಸಿ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ. ಯಾವುದೇ ಸಮಸ್ಯೆ ಉಂಟಾಗದಂತೆ ಪ್ರಯಾಣಿಕರನ್ನು ವಿಮಾನದಿಂದ ಇಳಿಸಲಾಗಿದೆ ಎಂದು ಸ್ಪೈಸ್‌ಜೆಟ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಿಮಾನದಲ್ಲಿ ಯಾವುದೇ ಅಪಾಯ ಇರಲಿಲ್ಲ. ಆದಾಗ್ಯೂ ಪ್ರಯಾಣಿಕರ ಹಿತದೃಷ್ಟಿಯಂದ ವಿಮಾನವನ್ನು ಕರಾಚಿಯಲ್ಲಿ ಭೂಸ್ಪರ್ಶ ಮಾಡಲಾಯಿತು. ವಿಮಾನದಲ್ಲಿ ಈ ಹಿಂದೆ ಯಾವುದೇ ದೋಷ ಕಂಡು ಬಂದ ಬಗ್ಗೆ ವರದಿಯಾಗಿಲ್ಲ. ಪ್ರಯಾಣಿಕರಿಗೆ ಊಟೋಪಚಾರದ ವ್ಯವಸ್ಥೆ ಮಾಡಲಾಗಿದೆ. ಅವರನ್ನು ದುಬೈಗೆ ಕರೆದೊಯ್ಯಲು ಬದಲಿ ವಿಮಾನದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಓದಿ: ತೆರಿಗೆ ವಂಚನೆ, ದೇಶದ ಗೌಪ್ಯ ಮಾಹಿತಿ ಸೋರಿಕೆ: 40 ಕಡೆ ಚೀನಿ ಕಂಪನಿಗಳ ಮೇಲೆ ಇಡಿ ದಾಳಿ