ನವದೆಹಲಿ: ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳಿಗೆ ಕೇಂದ್ರ ಕ್ರೀಡಾ ಸಚಿವಾಲಯ ಅರ್ಜಿ ಆಹ್ವಾನಿಸಿದ್ದು, ಅರ್ಹ ಕ್ರೀಡಾಪಟುಗಳು, ತರಬೇತುದಾರರು, ವಿಶ್ವವಿದ್ಯಾಲಯಗಳು, ಇತರ ಕ್ರೀಡಾ ಸಂಸ್ಥೆಗಳಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ.
ಕೋವಿಡ್ ಹಿನ್ನೆಲೆಯಲ್ಲಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದ್ದು, ಅರ್ಜಿಗಳನ್ನು ಸಲ್ಲಿಸುವ ಕೊನೆಯ ದಿನಾಂಕ ಜೂನ್ 21 ಆಗಿದೆ. ಕಳೆದ ವರ್ಷ ಕೋವಿಡ್ ಸಾಂಕ್ರಾಮಿಕದಿಂದಾಗಿ ಅರ್ಜಿದಾರರು ಪ್ರಶಸ್ತಿಗಾಗಿ ಸ್ವಯಂ ನಾಮ ನಿರ್ದೇಶನ ಮಾಡಿಕೊಳ್ಳಲು ಅವಕಾಶ ಮಾಡಕೊಳ್ಳಲು ಅವಕಾಶ ನೀಡಲಾಗಿತ್ತು. ಈಗಲೂ ಸ್ವಯಂ ನಾಮ ನಿರ್ದೇಶನ ಮಾಡಿಕೊಳ್ಳುವ ವ್ಯವಸ್ಥೆಯನ್ನು ಮುಂದುವರೆಸಲಾಗಿದೆ.
2019ರವರೆಗೆ, ಅರ್ಜಿದಾರರಿಗೆ ಅರ್ಜಿ ಸಲ್ಲಿಸಲು ಕೆಲವು ಸಂಸ್ಥೆಗಳ ಶಿಫಾರಸು ಬೇಕಾಗಿತ್ತು. ಕೋವಿಡ್ ಲಾಕ್ಡೌನ್ ಹಿನ್ನೆಲೆಯಲ್ಲಿ ಜನರ ಓಡಾಟವನ್ನು ಸರ್ಕಾರ ತಡೆದ ಕಾರಣದಿಂದ ಸ್ವಯಂ ನಾಮನಿರ್ದೇಶನಕ್ಕೆ ಅವಕಾಶ ನೀಡಲಾಯಿತು.
ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ಈವರೆಗೆ 21 ಕೋಟಿ ಕೋವಿಡ್ ವ್ಯಾಕ್ಸಿನ್ ವಿತರಣೆ
ಕಳೆದ ವರ್ಷ 74 ಮಂದಿ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ನೀಡಲಾಗಿತ್ತು. ಪ್ರಶಸ್ತಿಗಳ ವೇಳೆ ಕೊಡುವ ಬಹುಮಾನದ ಮೊತ್ತವನ್ನೂ ಏರಿಸಲಾಗಿತ್ತು. ಖೇಲ್ ರತ್ನ ಪುರಸ್ಕಾರಕ್ಕೆ 25 ಲಕ್ಷ, ಅರ್ಜುನ ಪ್ರಶಸ್ತಿ ಮತ್ತು ದ್ರೋಣಾಚಾರ್ಯ ಪ್ರಶಸ್ತಿ ಪುರಸ್ಕೃತರಿಗೆ 15 ಲಕ್ಷ ಮತ್ತು ಧ್ಯಾನ್ ಚಂದ್ ಪ್ರಶಸ್ತಿ ವಿಜೇತರಿಗೆ 10 ಲಕ್ಷ ರೂಪಾಯಿ ನೀಡಲಾಗಿತ್ತು.
ಕ್ರಿಕೆಟಿಗ ರೋಹಿತ್ ಶರ್ಮಾ, ಮಹಿಳಾ ಹಾಕಿ ತಂಡದ ನಾಯಕ ರಾಣಿ ರಾಂಪಾಲ್, ಕುಸ್ತಿಪಟು ವಿನೇಶ್ ಫೋಗಟ್, ಪ್ಯಾರಾಲಿಂಪಿಯನ್ ಮರಿಯಪ್ಪನ್ ತಂಗವೇಲು ಮತ್ತು ಟೇಬಲ್ ಟೆನ್ನಿಸ್ ಆಟಗಾರ್ತಿ ಮಣಿಕಾ ಬಾತ್ರಾ ಅವರಿಗೆ ಖೇಲ್ ರತ್ನ ಪ್ರಶಸ್ತಿ ನೀಡಲಾಗಿತ್ತು.