ETV Bharat / bharat

ಸ್ಪುಟ್ನಿಕ್ ವಿ ಅನುಮೋದನೆ ಹಿಂದಿನ ರಹಸ್ಯ ತಿಳಿಸಿದ ಕೇಂದ್ರ ಆರೋಗ್ಯ ಸಚಿವಾಲಯ - ಸ್ಪುಟ್ನಿಕ್ ವಿ ಶಿಫಾರಸು

ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಏಪ್ರಿಲ್ 13ರಂದು ತುರ್ತು ಬಳಸಲು ಸ್ಪುಟ್ನಿಕ್ V ಲಸಿಕೆಗೆ ಅನುಮೋದಿಸಿದೆ. ಆಕ್ಸ್‌ಫರ್ಡ್ ಯೂನಿವರ್ಸಿಟಿ - ಅಸ್ಟ್ರಾಜೆನೆಕಾ ಅಭಿವೃದ್ಧಿಪಡಿಸಿದ ಹಾಗೂ ದೇಶೀಯವಾಗಿ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಉತ್ಪಾದಿಸುತ್ತಿರುವ ಕೋವಿಶೀಲ್ಡ್ ಮತ್ತು ಭಾರತ್ ಬಯೋಟೆಕ್‌ನ ಕೊವಾಕ್ಸಿನ್ ನಂತರ ದೇಶದಲ್ಲಿ ತುರ್ತು ಬಳಕೆಗೆ ಅನುಮೋದನೆ ಪಡೆದ ಮೂರನೇ ಲಸಿಕೆ ಇದಾಗಿದೆ.

Sputnik V
Sputnik V
author img

By

Published : Apr 13, 2021, 1:44 PM IST

ನವದೆಹಲಿ: 18 ವರ್ಷ ವಯೋಮಿತ ಮೇಲ್ಪಟ್ಟವರಲ್ಲಿ ಸಕ್ರಿಯ ರೋಗನಿರೋಧಕ ಶಕ್ತಿ ವೃದ್ಧಿಸಲು ಸ್ಪುಟ್ನಿಕ್ V ಲಸಿಕೆ ಶಿಫಾರಸು ಮಾಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

21 ದಿನಗಳ ಮಧ್ಯಂತರದೊಂದಿಗೆ 0.5 ಮಿಲಿ ತಲಾ 2 ಡೋಸ್‌ಗಳಲ್ಲಿ ಇಂಟ್ರಾಮಸ್ಕುಲರ್ ಮೂಲಕ ಪಡೆಇಯಬೇಕು. ಲಸಿಕೆಯನ್ನು ಮೈನಸ್ 18 ಡಿಗ್ರಿ ತಾಪಮಾನದಲ್ಲಿ ಸಂಗ್ರಹಿಸಬೇಕಾಗಿದೆ. ಪರಸ್ಪರ ಬದಲಾಯಿಸಲಾಗದ I ಮತ್ತು II ಕಾಂಪೊನೆಂಟ್​ ಒಳಗೊಂಡಿದೆ ಎಂದು ಹೇಳಿದೆ.

ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಏಪ್ರಿಲ್ 13ರಂದು ತುರ್ತು ಬಳಸಲು ಸ್ಪುಟ್ನಿಕ್ V ಲಸಿಕೆಗೆ ಅನುಮೋದಿಸಿದೆ. ಆಕ್ಸ್‌ಫರ್ಡ್ ಯೂನಿವರ್ಸಿಟಿ - ಅಸ್ಟ್ರಾಜೆನೆಕಾ ಅಭಿವೃದ್ಧಿಪಡಿಸಿದ ಹಾಗೂ ದೇಶೀಯವಾಗಿ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಉತ್ಪಾದಿಸುತ್ತಿರುವ ಕೋವಿಶೀಲ್ಡ್ ಮತ್ತು ಭಾರತ್ ಬಯೋಟೆಕ್‌ನ ಕೊವಾಕ್ಸಿನ್ ನಂತರ ದೇಶದಲ್ಲಿ ತುರ್ತು ಬಳಕೆಗೆ ಅನುಮೋದನೆ ಪಡೆದ ಮೂರನೇ ಲಸಿಕೆ ಇದಾಗಿದೆ.

ಭಾರತದಲ್ಲಿ ಸ್ಪುಟ್ನಿಕ್ Vಯ ಕ್ಲಿನಿಕಲ್ ಪ್ರಯೋಗ ನಡೆಸಲು ಭಾರತೀಯ ಔಷಧ ಕಂಪನಿ ಡಾ. ರೆಡ್ಡಿಸ್ ಲ್ಯಾಬೊರೇಟರೀಸ್ ರಷ್ಯಾದ ಸಾವರಿನ್​ ಫಂಡ್​ ನೇರ ಹೂಡಿಕೆ ನಿಧಿಯೊಂದಿಗೆ (ಆರ್‌ಡಿಐಎಫ್) ಒಪ್ಪಂದ ಮಾಡಿಕೊಂಡಿದೆ.

ಸ್ಪುಟ್ನಿಕ್​ ವಿ ಲಸಿಕೆ ಅನುಮೋದಿಸಿದ 60ನೇ ದೇಶ ಭಾರತವಾಗಿದೆ. ಆರ್​ಡಿಐಎಫ್ ಪ್ರಕಾರ, ಭಾರತದಲ್ಲಿ ಸ್ಪುಟ್ನಿಕ್ ವಿ ವಿತರಣೆ ಏಪ್ರಿಲ್ ಕೊನೆ ಅಥವಾ ಮೇ ಆರಂಭದಲ್ಲಿ ಪ್ರಾರಂಭವಾಗುತ್ತದೆ.

ಸ್ಪುಟ್ನಿಕ್ ವಿ ಲಸಿಕೆ ಕೋವಿಡ್ ರೋಗಕ್ಕೆ ಶೇ 92ರಷ್ಟು ಪರಿಣಾಮಕಾರಿ ಆಗಿದೆ ಎಂದು ರಷ್ಯಾದ ನೇರ ಹೂಡಿಕೆ ನಿಧಿ (ಆರ್‌ಡಿಐಎಫ್) ಗುರುವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿತ್ತು. ರಷ್ಯಾದ ಗಮಲೆಯಾ ನ್ಯಾಷನಲ್ ರಿಸರ್ಚ್ ಇನ್ಸಿಟ್ಯೂಟ್ ಆಫ್ ಎಪಿಡೆಮಿಯೊಲಜಿ ಆ್ಯಂಡ್ ಮೆಕ್ರೊಬಯಾಲಜಿಯಲ್ಲಿ ಸ್ಪುಟ್ನಿಕ್ ವಿ ಲಸಿಕೆ ಅಭಿವೃದ್ಧಿಪಡಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.