ETV Bharat / bharat

ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು: ಪ್ರತಿ ಪಕ್ಷಗಳಿಗೆ ಆಹ್ವಾನವಿತ್ತ ಅಧ್ಯಕ್ಷ - ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರು ಎಲ್ಲಾ ರಾಜಕೀಯ ಪಕ್ಷಗಳನ್ನು ಏಕತಾ ಕ್ಯಾಬಿನೆಟ್‌ಗೆ ಸೇರಲು ಆಹ್ವಾನಿಸಿದ್ದಾರೆ.

ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರು ಎಲ್ಲಾ ರಾಜಕೀಯ ಪಕ್ಷಗಳನ್ನು ಏಕತಾ ಕ್ಯಾಬಿನೆಟ್‌ಗೆ ಸೇರಲು ಆಹ್ವಾನಿಸಿದ್ದಾರೆ.

ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು: ಏಕತಾ ಸರ್ಕಾರಕ್ಕೆ ಸೇರಲು ವಿರೋಧ ಪಕ್ಷಗಳಿಗೆ ಆಹ್ವಾನವಿತ್ತ ಅಧ್ಯಕ್ಷ

author img

By

Published : Apr 4, 2022, 4:52 PM IST

ಕೊಲಂಬೊ: ದ್ವೀಪ ರಾಷ್ಟ್ರದ ಭೀಕರ ಆರ್ಥಿಕ ಬಿಕ್ಕಟ್ಟಿನ ವಿರುದ್ಧ ಕೆರಳಿದ ಸಾರ್ವಜನಿಕರ ಕೋಪವನ್ನು ನಿಭಾಯಿಸುವ ಸರ್ಕಾರದ ಪ್ರಯತ್ನದ ಭಾಗವಾಗಿ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರು ಏಕತಾ ಕ್ಯಾಬಿನೆಟ್‌ಗೆ ಸೇರಲು ಎಲ್ಲಾ ರಾಜಕೀಯ ಪಕ್ಷಗಳನ್ನು ಆಹ್ವಾನಿಸಿದ್ದಾರೆ. ಅಧಿಕೃತ ಹೇಳಿಕೆಯ ಪ್ರಕಾರ, ಹೊರಹೊಮ್ಮಿರುವ ರಾಷ್ಟ್ರೀಯ ಬಿಕ್ಕಟ್ಟಿಗೆ ಪರಿಹಾರಗಳನ್ನು ಹುಡುಕಲು ಅಧ್ಯಕ್ಷ ಗೊಟಬಯ ರಾಜಪಕ್ಸೆ ಎಲ್ಲಾ ರಾಜಕೀಯ ಪಕ್ಷಗಳನ್ನು ಆಹ್ವಾನಿಸಿದ್ದಾರೆ.

ಎಲ್ಲಾ 26 ಕ್ಯಾಬಿನೆಟ್ ಸಚಿವರು ರಾಜೀನಾಮೆ ಪತ್ರಗಳನ್ನು ಭಾನುವಾರ ರಾತ್ರಿ ಸಲ್ಲಿಕೆ ಮಾಡಿದ್ದು, ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ಮತ್ತು ಸಭಾನಾಯಕ ದಿನೇಶ್ ಗುಣವರ್ಧನ, ಸಚಿವರು ತಮ್ಮ ರಾಜೀನಾಮೆಯನ್ನು ಪ್ರಧಾನಿ ಮಹಿಂದಾ ರಾಜಪಕ್ಸೆ ಅವರಿಗೆ ನೀಡಿದ್ದಾರೆ. ಸಾಮೂಹಿಕ ರಾಜೀನಾಮೆಗೆ ಅವರು ಯಾವುದೇ ಕಾರಣವನ್ನು ನೀಡಿಲ್ಲ ಎಂದಿದ್ದಾರೆ. ವಿದೇಶಿ ವಿನಿಮಯ ಬಿಕ್ಕಟ್ಟು ಮತ್ತು ಪಾವತಿ ಬಾಕಿ ಸಮಸ್ಯೆಗಳಿಂದ ಉಂಟಾದ ಆರ್ಥಿಕ ಪರಿಸ್ಥಿತಿಯನ್ನು ತಪ್ಪಾಗಿ ನಿರ್ವಹಿಸಿದ್ದಕ್ಕಾಗಿ ಆಡಳಿತಾರೂಢ ರಾಜಪಕ್ಸೆ ಕುಟುಂಬದ ವಿರುದ್ಧ ಸಾಮೂಹಿಕ ಸಾರ್ವಜನಿಕ ಆಂದೋಲನಗಳು ನಡೆಯುತ್ತಿರುವ ಹಿನ್ನೆಲೆ ಎಲ್ಲಾ ಪ್ರತಿಪಕ್ಷಗಳಿಗೆ ಈಗ ಸರ್ಕಾರದ ಆಹ್ವಾನ ಬಂದಿದೆ.

ಇದನ್ನೂ ಓದಿ:ಗಾಂಜಾ ವ್ಯಸನಿಯಾಗಿದ್ದ ಮಗನ ಕಣ್ಣಿಗೆ ಖಾರದ ಪುಡಿ ಹಾಕಿ ಥಳಿಸಿದ ತಾಯಿ

ಅಧ್ಯಕ್ಷರು ರಾಜೀನಾಮೆ ನೀಡುವಂತೆ ಸಾರ್ವಜನಿಕರು ಬೀದಿಗಿಳಿದಿದ್ದರು. ಅಧ್ಯಕ್ಷರು ತುರ್ತು ಪರಿಸ್ಥಿತಿಯನ್ನು ಘೋಷಿಸಿದ ನಂತರ ಪ್ರತಿಭಟನೆಗಳು ಕರ್ಫ್ಯೂ ಹೇರುವಿಕೆಯಂತಹ ಬೆಳವಣಿಗೆಗಳು ನಡೆದವು. ಪ್ರತಿಭಟನೆಗಳು ತೀವ್ರಗೊಂಡಾಗ ಸರ್ಕಾರವು ಭಾನುವಾರ 15 ಗಂಟೆಗಳ ಕಾಲ ಸಾಮಾಜಿಕ ಮಾಧ್ಯಮವನ್ನೂ ನಿಷೇಧ ಮಾಡಿತ್ತು. ಇದೆಲ್ಲದರ ನಡುವೆ ಸೆಂಟ್ರಲ್ ಬ್ಯಾಂಕ್ ಗವರ್ನರ್ ಅಜಿತ್ ಶ್ರೀನಿವಾರ್ಡ್ ಕಬ್ರಾಲ್ ಕೂಡ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಈಗ ಎಲ್ಲಾ ಕ್ಯಾಬಿನೆಟ್ ಸಚಿವರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ನಾನು ಇಂದು ರಾಜ್ಯಪಾಲ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಕಬ್ರಾಲ್ ಹೇಳಿದ್ದಾರೆ.

1948 ರಲ್ಲಿ UK ಯಿಂದ ಸ್ವಾತಂತ್ರ್ಯ ಪಡೆದ ನಂತರದ ದಿನಗಳಲ್ಲಿ ದೇಶದ ಕೆಟ್ಟ ಆರ್ಥಿಕ ಬಿಕ್ಕಟ್ಟು ಇದು ಎಂದು ಹೇಳಲಾಗುತ್ತಿದೆ. ಇದು ಭಾಗಶಃ ವಿದೇಶಿ ಕರೆನ್ಸಿಯ ಕೊರತೆಯಿಂದ ಉಂಟಾಗಿದೆ ಎಂದು ತಿಳಿದುಬಂದಿದೆ. ಇದನ್ನು ಇಂಧನ ಆಮದುಗಳಿಗೆ ಪಾವತಿಸಲು ಬಳಸಲಾಗುತ್ತದೆ. ಶ್ರೀಲಂಕಾ ತನ್ನ ದೇಶದ ಇತಿಹಾಸದಲ್ಲೇ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ಅನುಭವಿಸುತ್ತಿದೆ. ಇಂಧನ, ಅಡುಗೆ ಅನಿಲ, ಅಗತ್ಯ ವಸ್ತುಗಳ ಕೊರತೆ ಹಾಗೂ ಹಲವು ಗಂಟೆಗಳ ಕಾಲ ವಿದ್ಯುತ್ ಕಡಿತದಿಂದ ಸಾರ್ವಜನಿಕರು ವಾರಗಟ್ಟಲೇ ಪರದಾಡುತ್ತಿದ್ದಾರೆ. ಆದರೂ ರಾಜಪಕ್ಸೆ ಅವರು ತಮ್ಮ ಸರ್ಕಾರದ ಕ್ರಮಗಳನ್ನು ಸಮರ್ಥಿಸಿಕೊಂಡಿದ್ದಾರೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.