ಶ್ರೀನಗರ, ಜಮ್ಮು ಕಾಶ್ಮೀರ: ಕಳೆದ ಕೆಲವು ವಾರಗಳಿಂದ ಜಮ್ಮು ಕಾಶ್ಮೀರದಲ್ಲಿ ನಾಗರಿಕರನ್ನು ಗುರಿಯಾಗಿಸಿ ದಾಳಿಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಜಮ್ಮು ಕಾಶ್ಮೀರಕ್ಕೆ ಶೀಘ್ರದಲ್ಲೇ ಭೇಟಿ ನೀಡಲಿದ್ದಾರೆ.
ಶ್ರೀನಗರಕ್ಕೆ ಅಮಿತ್ ಶಾ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಶ್ರೀನಗರಕ್ಕೆ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ.
ಈಗಾಗಲೇ ಶ್ರೀನಗರದ ಹಲವು ಸ್ಥಳಗಳನ್ನು ಪರಿಶೀಲನೆ ಮಾಡಲಾಗಿದೆ. ಶ್ರೀನಗರದಲ್ಲಿ ಸಂಚರಿಸುವ ವಾಹನಗಳು ಮತ್ತು ವಾಹನ ಸವಾರರ ಗುರುತಿನ ಚೀಟಿಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.
ಇತ್ತೀಚೆಗೆ ಭಯೋತ್ಪಾದಕರ ದಾಳಿಯಲ್ಲಿ ಸ್ಥಳೀಯರಲ್ಲದ ನಾಲ್ಕು ಮಂದಿ ಸೇರಿದಂತೆ 9 ನಾಗರಿಕರು ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟಿದ್ದು, ಈ ವಿಚಾರವಾಗಿ ಅಮಿತ್ ಶಾ ಚರ್ಚೆ ನಡೆಸಲಿದ್ದಾರೆ.