ETV Bharat / bharat

ಭಾರಿ ಹಿಮಪಾತ: ಜಮ್ಮು-ಶ್ರೀನಗರ ಹೆದ್ದಾರಿ ಬಂದ್​ - ಕಾಶ್ಮೀರ ಕಣಿವೆ

ಕಾಶ್ಮೀರ ಕಣಿವೆಯನ್ನು ದೇಶದ ಇತರ ಭಾಗಗಳೊಂದಿಗೆ ಸಂಪರ್ಕಿಸುವ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಿಗ್ಗೆ ಭಾರಿ ಹಿಮಪಾತವಾಗಿದ್ದು, ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

Srinagar Jammu Highway shut
ಜಮ್ಮು-ಶ್ರೀನಗರ ಹೆದ್ದಾರಿ ಬಂದ್​
author img

By

Published : Jan 14, 2023, 11:01 AM IST

ಶ್ರೀನಗರ: ಕಾಶ್ಮೀರದ ಹೆಚ್ಚಿನ ಭಾಗಗಳಲ್ಲಿ ಇಂದು ಭಾರಿ ಹಿಮಪಾತವಾಗಿದ್ದು, ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್​ ಮಾಡಲಾಗಿದೆ. ಅಲ್ಲದೇ ಪ್ರತಿಕೂಲ ಹವಾಮಾನ ವಿಮಾನಯಾನದ ಮೇಲೆ ಪರಿಣಾಮ ಬೀರಿದೆ. ಜಮ್ಮು ಮತ್ತು ಕಾಶ್ಮೀರದ ಎತ್ತರದ ಪ್ರದೇಶದಲ್ಲಿ ಭಾರಿ ಹಿಮಪಾತವಾದರೆ, ಬಯಲು ಪ್ರದೇಶದ ಅನೇಕ ಪ್ರದೇಶಗಳಲ್ಲಿ ಲಘು ಹಿಮಪಾತವಾಗಿದೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಮಾನ ಸಂಚಾರದಲ್ಲಿ ವ್ಯತ್ಯಯ: ಕಡಿಮೆ ಗೋಚರತೆಯಿಂದಾಗಿ ಹಲವು ವಿಮಾನಗಳ ಪ್ರಯಾಣ ವಿಳಂಬವಾಗಿದೆ. ಶ್ರೀನಗರದಲ್ಲಿ ಗುರುವಾರ ರಾತ್ರಿ ಕನಿಷ್ಠ 1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಹಿಂದಿನ ರಾತ್ರಿ ಮೈನಸ್ 0.2 ಡಿಗ್ರಿ ಇತ್ತು. ಖಾಜಿಗುಂಡ್, ಕಣಿವೆಯ ಹೆಬ್ಬಾಗಿಲು, ಕನಿಷ್ಠ ತಾಪಮಾನ 0.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮೂಲಗಳ ಪ್ರಕಾರ, ಆಡಳಿತ ಮಂಡಳಿ ಮುನ್ನೆಚ್ಚರಿಕೆ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿದ್ದರೂ ಕೆಲ ವಾಹನಗಳು ಸಂಚರಿಸುತ್ತಿದ್ದವು. ವಾಹನ ಸವಾರರು ರಸ್ತೆಯಿಂದ ಹಿಮವನ್ನು ತೆರವುಗೊಳಿಸುತ್ತಿರುವುದು ಕಂಡು ಬಂದಿದೆ.

"ನಾವು ಶ್ರೀನಗರ ಮತ್ತು ಖಾಜಿಗುಂಡ್ ನಡುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಯಾಣಿಸದಂತೆ ಮತ್ತು ಅವರು ಎಲ್ಲಿದ್ದರೂ ಅಲ್ಲಿಯೇ ಇರುವಂತೆ ನಾವು ಸಲಹೆ ನೀಡುತ್ತಿದ್ದೇವೆ" ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಗುಲ್ಮಾರ್ಗ್‌ನ ಪ್ರಸಿದ್ಧ ಸ್ಕೀ ರೆಸಾರ್ಟ್, ಪಹಲ್ಗಾಮ್ ಮತ್ತು ಸೋನಾಮಾರ್ಗ್‌ನ ಪ್ರವಾಸಿ ರೆಸಾರ್ಟ್‌ಗಳು ಮತ್ತು ಇತರ ಹಲವು ಸ್ಥಳಗಳಲ್ಲಿ ಹಿಮಪಾತವಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಕತ್ತಲೆ ಸೃಷ್ಟಿಸಿದ ದಟ್ಟ ಮಂಜು: ವಿಮಾನ, ರೈಲು ಸಂಚಾರ ವ್ಯತ್ಯಯ, ಇನ್ನೆರಡು ದಿನ ಇದೇ ಸ್ಥಿತಿ

ಬಯಲು ಪ್ರದೇಶಗಳಲ್ಲಿ ಮಳೆ: ಕಾಶ್ಮೀರ ಮತ್ತು ಜಮ್ಮು ವಿಭಾಗಗಳ ಬಯಲು ಸೀಮೆಗಳಲ್ಲಿ ತಕ್ಕಮಟ್ಟಿಗೆ ವ್ಯಾಪಕವಾದ ಲಘು ಮಳೆ ಮತ್ತು ಎತ್ತರದ ಪ್ರದೇಶಗಳಲ್ಲಿ ಲಘುವಾಗಿ ಹಿಮಪಾತವಾಗಿದೆ ಎಂದು ಹವಾಮಾನ ಕಚೇರಿ ತಿಳಿಸಿದೆ. ಇಂದಿನಿಂದ ಜನವರಿ 18 ರವರೆಗೆ ಹವಾಮಾನವು ಶುಷ್ಕವಾಗಿರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸರ್ವಋತು ರಸ್ತೆ: ಪ್ರತಿಕೂಲ ಹವಾಮಾನದಿಂದಾಗಿ ಜಮ್ಮು- ಶ್ರೀನಗರ ರಾಷ್ಟ್ರೀಯ ಹೆದ್ದಾರಿಯನ್ನು ಮುಚ್ಚಲಾಗಿದೆ. ಕಣಿವೆಯನ್ನು ದೇಶದ ಇತರ ಭಾಗಗಳೊಂದಿಗೆ ಸಂಪರ್ಕಿಸುವ ಏಕೈಕ ಸರ್ವಋತು ರಸ್ತೆಯಾಗಿದೆ. ರಸ್ತೆ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ನಿರಂತರ ಹಿಮಪಾತ ಮತ್ತು ಮಳೆ ಕೆಲಸವನ್ನು ಕಷ್ಟಕರವಾಗಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅನಂತನಾಗ್ ಜಿಲ್ಲೆಯ ಪಹಲ್ಗಾಮ್​ನಲ್ಲಿ ಮೈನಸ್ 2.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬಾರಾಮುಲ್ಲಾ ಜಿಲ್ಲೆಯ ಗುಲ್ಮಾರ್ಗ್‌ನಲ್ಲಿ ಕನಿಷ್ಠ ತಾಪಮಾನವು ಮೈನಸ್ 0.6 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾಗಿದೆ. ಇದು ಮೈನಸ್ 5.5 ಡಿಗ್ರಿ ಸೆಲ್ಸಿಯಸ್‌ನಿಂದ ಹೆಚ್ಚಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಹಿಮಪಾತದಿಂದ ಶ್ರೀನಗರದಲ್ಲಿ 25 ವಿಮಾನಗಳ ಹಾರಾಟ ರದ್ದು: ಹಿಮಾಚಲದಲ್ಲಿ ಹಿಮದ ಹೊದಿಕೆ

ಗರ್ಭಿಣಿ ರಕ್ಷಿಸಿದ್ದ ಸೇನಾ ಪಡೆ: ಹಿಮಪಾತದ ನಡುವೆ ಜಮ್ಮು ಮತ್ತು ಕಾಶ್ಮೀರದ ಉತ್ತರ ಜಿಲ್ಲೆಯ ಬಾರಾಮುಲ್ಲಾದ ಬನ್ಯಾರ ಪ್ರದೇಶದಲ್ಲಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭೀಣಿಯನ್ನು ಇತ್ತೀಚೆಗೆ ಭಾರತೀಯ ಸೇನಾ ಪಡೆ ್ಟ್ರೆಚರ್​ನಲ್ಲಿ ಹೊತ್ತುಕೊಂಡು ಆಸ್ಪತ್ರೆಗೆ ದಾಖಲಿಸಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.