ಸಿಬ್ಬಂದಿ ನೇಮಕಾತಿ ಆಯೋಗದಿಂದ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಜ್ಯೂನಿಯರ್ ಟ್ರಾನ್ಸ್ಲೇಟರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 307 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಸ್ನಾತಕೋತ್ತರ ಪದವಿ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ನೇಮಕಾತಿ, ಅರ್ಜಿ ಸಲ್ಲಿಕೆ ಮತ್ತು ವೇತನ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಹುದ್ದೆ ವಿವರ: ಜ್ಯೂನಿಯರ್ ಟ್ರಾನ್ಸ್ಲೇಷನ್ ಆಫೀಸರ್ 13, ಜ್ಯೂನಿಯರ್ ಹಿಂದಿ ಟ್ರಾನ್ಸ್ಲೇಟರ್ 21, ಜ್ಯೂನಿಯರ್ ಟ್ರಾನ್ಸ್ಲೇಟರ್ 263, ಸೀನಿಯರ್ ಟ್ರಾನ್ಸ್ಲೇಟರ್ 1, ಸೀನಿಯರ್ ಹಿಂದಿ ಟ್ರಾನ್ಸ್ಲೇಟರ್ 9 ಸೇರಿದಂತೆ ಒಟ್ಟು 307 ಹುದ್ದೆಗಳಿವೆ.
ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಸ್ನಾತಕೋತ್ತರ ಪದವಿಯನ್ನು ಪೂರೈಸಿರಬೇಕು.
ವೇತನ: ಜ್ಯೂನಿಯರ್ ಟ್ರಾನ್ಸ್ಲೇಷನ್ ಆಫೀಸರ್, ಜ್ಯೂನಿಯರ್ ಹಿಂದಿ ಟ್ರಾನ್ಸ್ಲೇಟರ್, ಜ್ಯೂನಿಯರ್ ಟ್ರಾನ್ಸ್ಲೇಟರ್ ಹುದ್ದೆಗೆ 35,400 -1,12,400 ರೂ. ಹಾಗೂ ಸೀನಿಯರ್ ಟ್ರಾನ್ಸ್ಲೇಟರ್ ಮತ್ತು ಸೀನಿಯರ್ ಹಿಂದಿ ಟ್ರಾನ್ಸ್ಲೇಟರ್ ಹುದ್ದೆಗೆ 44,900 ರೂನಿಂದ 1,42,400 ರೂ.ವರೆಗೆ ವೇತನ ನಿಗದಿಸಲಾಗಿದೆ.
ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 30 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ, ನಿವೃತ್ತ ಸೇನಾಧಿಕಾರಿ, ವಿಕಲಚೇತನ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ನಿಗದಿಸಿಲ್ಲ. ಇತರೆ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ.
ಆಯ್ಕೆ: ಈ ಹುದ್ದೆಗಳನ್ನು ಮೂರು ಹಂತದಲ್ಲಿ ಆಯ್ಕೆ ಮಾಡಲಾಗುವುದು. ಮೊದಲ ಹಂತ ಲಿಖಿತ ಪರೀಕ್ಷೆ, ಎರಡನೇ ಹಂತದಲ್ಲಿ ದಾಖಲಾತಿ ಪ್ರಮಾಣಪತ್ರ ಮತ್ತು ವೈದ್ಯಕೀಯ ತಪಾಸಣೆ, ಅಂತಿಮ ಹಂತದಲ್ಲಿ ಸಂದರ್ಶನ ಇರಲಿದೆ.
ಈ ಹುದ್ದೆಗಳಿಗೆ ಆಗಸ್ಟ್ 22 ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್ 12 ಆಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಅರ್ಜಿ ಸಲ್ಲಿಕೆಗೆ ಅಭ್ಯರ್ಥಿಗಳು ssc.nic.in ಈ ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ: Job Alert: ಸುರತ್ಕಲ್ನ ಎನ್ಐಟಿಕೆಯಲ್ಲಿ ಗ್ರೂಪ್ ಸಿ ಹುದ್ದೆ ನೇಮಕಾತಿ; ಡಿಗ್ರಿ, ಪಿಯುಸಿ ಆದವರಿಗೆ ಅವಕಾಶ