ಬೆಂಗಳೂರು: ಸಿಬ್ಬಂದಿ ನೇಮಕಾತಿ ಆಯೋಗದಿಂದ(ಎಸ್ಎಸ್‌ಸಿ) ಒಟ್ಟು 26,146 ಕಾನ್ಸ್ಟೆಬಲ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಸೇನಾ ಇಲಾಖೆಯ ವಿವಿಧ ವಿಭಾಗಗಳಲ್ಲಿ ನೇಮಕಾತಿ ನಡೆಯಲಿದೆ. 10ನೇ ತರಗತಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ:
- ಬಿಎಸ್ಎಫ್ - 6,174
- ಸಿಐಎಸ್ಎಫ್ - 11,025
- ಸಿಆರ್ಪಿಎಫ್ - 3,337
- ಎಸ್ಎಸ್ಬಿ - 635
- ಐಟಿಬಿಪಿ - 3,189
- ಅಸ್ಸಾಂ ರೈಫೆಲ್ಸ್ - 1,490
- ಎಸ್ಎಸ್ಎಫ್ - 296
ವಿದ್ಯಾರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಗಳಿಂದ 10ನೇ ತರಗತಿ ಪೂರ್ಣಗೊಳಿಸಿರಬೇಕು.
ವಯೋಮಿತಿ: ಕನಿಷ್ಠ ವಯೋಮಿತಿ 18, ಗರಿಷ್ಠ 23 ವರ್ಷ. ಹಿಂದುಳಿದ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಸಲ್ಲಿಕೆ: ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಮಹಿಳಾ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಇತರೆ ಅಭ್ಯರ್ಥಿಗಳಿಗೆ 100 ರೂ ಅರ್ಜಿ ಶುಲ್ಕ ವಿಧಿಸಲಾಗಿದೆ.
ಆಯ್ಕೆ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಗುಣಮಟ್ಟ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಹಾಗು ಸಂದರ್ಶನದ ಮೂಲಕ ಆಯ್ಕೆ.
ನವೆಂಬರ್ 24ರಿಂದ ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 31 ಅರ್ಜಿ ಸಲ್ಲಿಕೆಗೆ ಕಡೇಯ ದಿನ. ಅರ್ಜಿ ಶುಲ್ಕ ಪಾವತಿಗೆ ಜನವರಿ 1 ಕಡೇಯ ದಿನವಾಗಿದೆ. ಈ ಹುದ್ದೆಗಳಿಗೆ ಫೆಬ್ರವರಿ/ಮಾರ್ಚ್ನಲ್ಲಿ ಕಂಪ್ಯೂಟರ್ ಪರೀಕ್ಷೆ ನಡೆಸುವ ಸಾಧ್ಯತೆ ಇದೆ.
ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು ssc.nic.in ಹಾಗು 080 25502520, 09483862020 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು.
ಇದನ್ನೂ ಓದಿ: ಮೈಸೂರು ಜಿಲ್ಲಾ ಪಂಚಾಯತ್ ನೇಮಕಾತಿ; ಕನ್ಸಲ್ಟಂಟ್ ಹುದ್ದೆಗೆ ಅರ್ಜಿ ಆಹ್ವಾನ