ETV Bharat / bharat

SSC Sub Inspector Recruitment: 1876 ಸಬ್​ ಇನ್ಸ್​ಪೆಕ್ಟರ್​ ಹುದ್ದೆಗೆ ಅರ್ಜಿ ಆಹ್ವಾನ

author img

By

Published : Jul 22, 2023, 12:12 PM IST

ಪೊಲೀಸ್​​ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಈ ಹುದ್ದೆ ನೇಮಕಾತಿ, ಅಧಿಸೂಚನೆ ಸೇರಿದಂತೆ ಇನ್ನಿತರ ಮಾಹಿತಿ ಇಲ್ಲಿದೆ.

SSC Recruitment Sub Inspector post in Delhi police and capf

ಸಿಬ್ಬಂದಿ ನೇಮಕಾತಿ ಆಯೋಗ (ಎಸ್​ಎಸ್​ಸಿ)ಯಿಂದ ಕೇಂದ್ರ ಪೊಲೀಸ್ ಇಲಾಖೆಯಲ್ಲಿ​ ಸಬ್​ ಇನ್ಸ್​ಪೆಕ್ಟರ್​ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ದೆಹಲಿ ಪೊಲೀಸ್​ ಇಲಾಖೆ ಸಬ್​ ಇನ್ಸ್​ಪೆಕ್ಟರ್​​ ಮತ್ತು ಸೆಂಟ್ರಲ್​ ಆರ್ಮಡ್​ ಪೊಲೀಸ್​ ಫೋರ್ಸ್​ (ಸಿಎಪಿಎಫ್​)ಗೆ ಈ ಹುದ್ದೆಗಳ ಭರ್ತಿಗೆ ನೇಮಕಾತಿ ನಡೆಸಲಾಗುವುದು. ಒಟ್ಟು 1876 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಹುದ್ದೆ ನೇಮಕಾತಿ ಭಾರತಾದ್ಯಂತ ನಡೆಯಲಿದೆ. ಪೊಲೀಸ್​​ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಈ ಹುದ್ದೆ ನೇಮಕಾತಿ, ಅಧಿಸೂಚನೆ ಸೇರಿದಂತೆ ಇನ್ನಿತರ ಮಾಹಿತಿ ಇಲ್ಲಿದೆ.

ಹುದ್ದೆ ವಿವರ: ದೆಹಲಿ ಪೊಲೀಸ್​ನಲ್ಲಿ ಸಬ್​ ಇನ್ಸ್​ಪೆಕ್ಟರ್​​ -162, ಸಿಎಪಿಎಫ್​ನಲ್ಲಿ ಸಬ್ ಇನ್ಸ್​ಪೆಕ್ಟರ್​​ಗೆ 1714 ಹುದ್ದೆಗಳ ನೇಮಕಾತಿ ಸೇರಿದಂತೆ ಒಟ್ಟು 1876 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಅಧಿಸೂಚನೆ
ಅಧಿಸೂಚನೆ

ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವ ವಿದ್ಯಾಲಯ ಅಥವಾ ಮಂಡಳಿಯಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 20 ವರ್ಷ ಆಗಿದ್ದು, ಗರಿಷ್ಠ ವಯೋಮಿತಿ 25 ವರ್ಷ ಆಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ. ಇತರೆ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕವನ್ನು ಆನ್​ಲೈನ್​ನಲ್ಲಿ ಭರ್ತಿ ಮಾಡಬೇಕಿದೆ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅಭ್ಯರ್ಥಿಗಳು ಕಂಪ್ಯೂಟರ್​ ಆಧಾರಿತ ಪರೀಕ್ಷೆ, ದೈಹಿಕ ಕಾರ್ಯಕ್ಷಮತೆ ಮತ್ತು ಸಂಪೂರ್ಣ ವೈದ್ಯಕೀಯ ಪರೀಕ್ಷೆ ಜೊತೆಗೆ ಸಂದರ್ಶನಕ್ಕೆ ಹಾಜರಾಗಬೇಕಿದೆ.

ಈ ಹುದ್ದೆಗೆ ಅಭ್ಯರ್ಥಿಗಳು ಜುಲೈ 22 ರಿಂದ(ಇಂದಿನಿಂದ) ಅರ್ಜಿ ಭರ್ತಿ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆ ಮಾಡಲು ಕಡೆಯ ದಿನಾಂಕ ಆಗಸ್ಟ್​​ 15 ಆಗಿದೆ. ಅರ್ಜಿ ಶುಲ್ಕ ಪಾವತಿಗೆ ಕಡೆಯ ದಿನಾಂಕ ಆಗಸ್ಟ್​ 16 ಆಗಿದೆ. ಅಭ್ಯರ್ಥಿಗಳಿಗೆ ಅಕ್ಟೋಬರ್​ನಲ್ಲಿ ಕಂಪ್ಯೂಟರ್​ ಆಧಾರಿತ ಪರೀಕ್ಷೆ ನಡೆಸುವ ಸಾಧ್ಯತೆ ಇದೆ.

ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡುವ ಮುನ್ನ ಅಧಿಕೃತ ಅಧಿಸೂಚನೆ ಮತ್ತು ಸಂಪೂರ್ಣ ವಿವರಗಳನ್ನು ಪರಿಶೀಲನೆ ಮಾಡಿ ಮುಂದುವರೆಯತಕ್ಕದ್ದು. ಅರ್ಜಿ ಭರ್ತಿ ವೇಳೆ ಅಭ್ಯರ್ಥಿಗಳು ಅಗತ್ಯ ಮತ್ತು ಸಂಪೂರ್ಣ ಮಾಹಿತಿಗಳನ್ನು ಭರ್ತಿ ಮಾಡುವುದು ಕಡ್ಡಾಯ.

ಈ ಹುದ್ದೆ ಕುರಿತು ಅಧಿಕೃತ ಅಧಿಸೂಚನೆ ಸೇರಿದಂತೆ ಸಂಪೂರ್ಣ ಮಾಹಿತಿ ಪರಿಶೀಲನೆಗೆ ಅಭ್ಯರ್ಥಿಗಳು ssc.nic.in ಈ ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: Job Alert: ಬೆಂಗಳೂರಿನ ನಿಮ್ಹಾನ್ಸ್‌ನಲ್ಲಿದೆ​ ಡಾಟಾ ಎಂಟ್ರಿ ಆಪರೇಟರ್​ ಹುದ್ದೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.