ಸಿಬ್ಬಂದಿ ನೇಮಕಾತಿ ಆಯೋಗದಿಂದ (ಎಸ್ಎಸ್ಸಿ) ಕಾನ್ಸ್ಟೇಬಲ್ (ಎಕ್ಸಿಕ್ಯೂಟಿವ್) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 7547 ಹುದ್ದೆಗಳಿಗೆ ಭರ್ತಿ ಪ್ರಕ್ರಿಯೆ ನಡೆಯಲಿದೆ. ದೆಹಲಿ ಪೊಲೀಸ್ಗೆ ಈ ನೇಮಕಾತಿ ನಡೆಯಲಿದ್ದು, ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ದೇಶಾದ್ಯಂತ ಈ ನೇಮಕಾತಿ ಜರುಗಲಿದ್ದು, ನೇಮಕಾತಿ, ಅರ್ಜಿ ಸಲ್ಲಿಕೆ ಸೇರಿದಂತೆ ಇನ್ನಿತರ ಮಾಹಿತಿ ಇಲ್ಲಿದೆ. ಮತ್ತು ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್ 30 ಆಗಿದೆ.
ಹುದ್ದೆ ವಿವರ: ದೆಹಲಿ ಪೊಲೀಸ್ಗೆ 7547 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪುರುಷ ಅಭ್ಯರ್ಥಿಗಳಿಗೆ 5056 ಮತ್ತು ಮಹಿಳಾ ಅಭ್ಯರ್ಥಿಗಳಿಗೆ 2491 ಹುದ್ದೆಗಳನ್ನು ಮೀಸಲು ಇರಿಸಲಾಗಿದೆ.
ವಿದ್ಯಾರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಪಿಯುಸಿ ಅಥವಾ 12ನೇ ತರಗತಿ ಪೂರ್ಣಗೊಳಿಸಿರಬೇಕು.
ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ 21700-69100 ರೂ. ವೇತನ ನಿಗದಿಸಲಾಗಿದೆ.
ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಆಗಿದ್ದು, ಗರಿಷ್ಠ ವಯೋಮಿತಿ 25 ವರ್ಷ ಆಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಸಲ್ಲಿಕೆ ಪ್ರಕ್ರಿಯೆ: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದ್ದು, ಇತರೆ ಅಭ್ಯರ್ಥಿಗಳಿಗೆ 100 ರೂ. ನಿಗದಿಸಲಾಗಿದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ದೈಹಿಕ ಮಾನದಂಡ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ನಡೆಸಲಾಗುವುದು.
ಈ ಹುದ್ದೆಗೆ ಸೆಪ್ಟೆಂಬರ್ 1 ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್ 30 ಆಗಿದೆ. ಕೆಳಗೆ ನೀಡಲಾದ ಜಾಲತಾಣಕ್ಕೆ ಲಾಗಿನ್ಗೆ ಹೋಗಿ ರಿಜಿಸ್ಟ್ರೇಷನ್ ಮಾಡಿಕೊಳ್ಳಬಹುದು. ಇಲ್ಲಿ ಅಭ್ಯರ್ಥಿಗಳು ತಮ್ಮ ಅಗತ್ಯ ಮಾಹಿತಿ ಮತ್ತು ಸಂಪೂರ್ಣ ವಿವರ ತುಂಬಿ ಸಬ್ಮಿಟ್ ಮಾಡಬೇಕಿದೆ.
ಈ ಹುದ್ದೆ ಕುರಿತ ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು ssc.nic.in ಈ ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ: Job Alert! ಪವರ್ ಗ್ರೀಡ್ನಲ್ಲಿ ಡಿಪ್ಲೊಮಾ ಟ್ರೈನಿ ನೇಮಕಾತಿ; 425 ಹುದ್ದೆಗಳಿಗೆ ಅರ್ಜಿ ಆಹ್ವಾನ