ETV Bharat / bharat

ಸುಳ್ಳು ಸುದ್ದಿ ಹಬ್ಬಿಸಿದವರು ದೇಶ ವಿರೋಧಿಗಳು ಎಂದ ಸ್ಟಾಲಿನ್: ಪತ್ರಿಕೆ ಸಂಪಾದಕ ಸೇರಿ ಮೂವರ ವಿರುದ್ಧ ಕೇಸ್​ - ಬಿಹಾರದ ಮುಖ್ಯಮಂತ್ರಿ ನಿತೀಶ್​ ಕುಮಾರ್

ಬಿಹಾರದ ವಲಸೆ ಕಾರ್ಮಿಕರ ಮೇಲೆ ಹಲ್ಲೆ ಕುರಿತ ಸುಳ್ಳು ಸುದ್ದಿ ಹಬ್ಬಿಸಿದವರು ದೇಶ ವಿರೋಧಿಗಳು. ತಪ್ಪು ವದಂತಿಯು ದೇಶದ ಏಕತೆ ಹಾಗೂ ಸಮಗ್ರತೆಯ ಧಕ್ಕೆ ತರುವ ಕೆಲಸ ಎಂದು ತಮಿಳುನಾಡು ಸಿಎಂ ಸ್ಟಾಲಿನ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

stalin-dials-nitish-cases-booked-against-dainik-bhaskar-and-tanveer-post
ಸುಳ್ಳು ಸುದ್ದಿ ಹಬ್ಬಿಸಿದವರು ದೇಶ ವಿರೋಧಿಗಳು ಎಂದ ಸ್ಟಾಲಿನ್: ಪತ್ರಿಕೆಯ ಸಂಪಾದಕ ಸೇರಿ ಮೂವರ ವಿರುದ್ಧ ಕೇಸ್​
author img

By

Published : Mar 4, 2023, 6:40 PM IST

ಚೆನ್ನೈ (ತಮಿಳುನಾಡು): ತಮಿಳುನಾಡಿನಲ್ಲಿ ಬಿಹಾರದ ವಲಸೆ ಕಾರ್ಮಿಕರ ಹಲ್ಲೆ ಮಾಡಲಾಗಿದೆ ಎಂಬ ವದಂತಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಸಂಬಂಧ ಖುದ್ದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಬಿಹಾರದ ಮುಖ್ಯಮಂತ್ರಿ ನಿತೀಶ್​ ಕುಮಾರ್​ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ರಾಜ್ಯದಲ್ಲಿ ವಲಸೆ ಕಾರ್ಮಿಕರ ಸುರಕ್ಷತೆ ಬಗ್ಗೆ ಖಾತರಿಪಡಿಸಿದ್ದಾರೆ. ಮತ್ತೊಂದೆಡೆ, ಸುಳ್ಳು ಸುದ್ದಿಯನ್ನು ಹಬ್ಬಿಸಿದ ಆರೋಪದ ಮೇಲೆ ಪತ್ರಿಕೆಯೊಂದರ ಸಂಪಾದಕ, ಇಬ್ಬರು ಸಾಮಾಜಿಕ ಜಾಲತಾಣ ಬಳಕೆದಾರರ ವಿರುದ್ಧ ಪೊಲೀಸರು​ ಕೇಸ್​ ದಾಖಲಿಸಿದ್ದಾರೆ.

ವಲಸೆ ಕಾರ್ಮಿಕರ ವಿಚಾರಗಾಗಿ ಬಿಹಾರ ಸಿಎಂ ಜೊತೆ ಮಾತನಾಡಿರುವ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸ್ಟಾಲಿನ್, ನಾನು ನನ್ನ ಸಹೋದರ ನಿತೀಶ್ ಕುಮಾರ್ ಅವರನ್ನು ದೂರವಾಣಿಯಲ್ಲಿ ಸಂಪರ್ಕಿಸಿ ಈ ವಿಷಯದ ಬಗ್ಗೆ ಮಾತನಾಡಿದೆ. ನಮ್ಮ ರಾಜ್ಯದ ಬೆಳವಣಿಗೆಗೆ ಎಲ್ಲ ಕಾರ್ಮಿಕರು ನೆರವಾಗುತ್ತಿದ್ದಾರೆ. ಅವರು ಇಲ್ಲಿ ಯಾವುದೇ ಸಮಸ್ಯೆಯನ್ನು ಎದುರಿಸುವುದಿಲ್ಲ ಎಂದು ಭರವಸೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ನಮ್ಮ ಸರ್ಕಾರ ಮತ್ತು ರಾಜ್ಯದ ಜನರು ಇತರ ರಾಜ್ಯಗಳ ಕಾರ್ಮಿಕರಿಗೆ ರಕ್ಷಣೆಯ ಗೋಡೆ ಕಟ್ಟುತ್ತಾರೆ ಎಂದು ಎಲ್ಲ ರಾಜ್ಯಗಳ ವಲಸೆ ಕಾರ್ಮಿಕರಿಗೆ ಅಭಯ ನೀಡುತ್ತೇವೆ. ಆದ್ದರಿಂದ ನೀವು ಸುಳ್ಳು ಸುದ್ದಿಗಳಿಂದ ಯಾವುದೇ ಆತಂಕವನ್ನು ಹೊಂದುವ ಅಗತ್ಯವಿಲ್ಲ ಎಂದು ನಾನು ಪುನರುಚ್ಚರಿಸುತ್ತೇನೆ ಎಂದು ಸಿಎಂ ಸ್ಟಾಲಿನ್ ಹೇಳಿದ್ದಾರೆ.

ಭಾರತದ ವಿರೋಧಿಗಳು - ಸಿಎಂ ಎಚ್ಚರಿಕೆ: ಒಂದು ವೇಳೆ, ಕೆಲ ಮಾಧ್ಯಮದವರು ಬೇರೆ ರಾಜ್ಯದಲ್ಲಿ ನಡೆದ ಘರ್ಷಣೆಯನ್ನು ತಮಿಳುನಾಡಿನಲ್ಲಿ ನಡೆದಿರುವಂತೆ ಬಿಂಬಿಸಿ ಪೋಸ್ಟ್ ಮಾಡಿದ್ದಾರೆ. ಇದರಿಂದ ಇದೆಲ್ಲವೂ ಪ್ರಾರಂಭವಾಗಿದೆ. ಹೀಗಾಗಿ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸುವವರು ತಮ್ಮ ಸಾಮಾಜಿಕ ಜವಾಬ್ದಾರಿ ಅರಿತು ಮಾಧ್ಯಮ ನೀತಿಗೆ ಅನುಗುಣವಾಗಿ ಯಾವುದೇ ಸುದ್ದಿಗಳನ್ನು ಪೋಸ್ಟ್ ಮಾಡಬೇಕು. ಸತ್ಯಾಸತ್ಯತೆ ದೃಢೀಕರಿಸದ ಸುದ್ದಿಗಳಿಂದ ದೂರ ಇರಬೇಕು ಎಂದು ಮನವಿ ಮಾಡಿದ್ದಾರೆ.

ಜನರಲ್ಲಿ ಭಯ ಮತ್ತು ಗಾಬರಿ ಮೂಡಿಸಲು ತಪ್ಪು ಮತ್ತು ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ, ದೇಶದ ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಇಂತಹ ಕೆಲಸ ಮಾಡುತ್ತಿರುವವರು ಭಾರತದ ವಿರೋಧಿಗಳು ಎಂದು ತಮಿಳುನಾಡು ಸಿಎಂ ಸ್ಟಾಲಿನ್​ ಟೀಕಿಸಿದ್ದಾರೆ. ಅನಾದಿ ಕಾಲದಿಂದಲೂ ತಮಿಳುನಾಡು ಆಶ್ರಯದ ತೊಟ್ಟಿಲು, ಮನುಕುಲಕ್ಕೆ ಅಪಾರ ಸೇವೆ ಸಲ್ಲಿಸುತ್ತಿದೆ. ಅದು ಮುಂದೆಯೂ ಶಾಶ್ವತವಾಗಿ ಉಳಿಯುತ್ತದೆ. ವ್ಯಾಪಾರ, ಆರೋಗ್ಯ, ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಇಲ್ಲಿಗೆ ಅನೇಕರು ಬಂದಿದ್ದಾರೆ. ತಮ್ಮನ್ನು ತಾವು ಸಬಲೀಕರಣಗೊಳಿಸುವುದರೊಂದಿಗೆ ತಮಿಳುನಾಡಿನ ಪ್ರಗತಿಯನ್ನೂ ಹೆಚ್ಚಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಮೂವರ ವಿರುದ್ಧ ಎಫ್​ಐಆರ್​: ಬಿಹಾರದ ಕಾರ್ಮಿಕರ ವಿಚಾರವಾಗಿ ಸುಳ್ಳು ಸುದ್ದಿ ಹಬ್ಬಿಸಿದ ಆರೋಪದಡಿ ದೈನಿಕ್ ಭಾಸ್ಕರ್ ಸಂಪಾದಕ ಮತ್ತು ತನ್ವೀರ್ ಪೋಸ್ಟ್ ಸಂಪಾದಕ ಮೊಹಮ್ಮದ್ ತನ್ವೀರ್ ಮತ್ತು ತೂತುಕುಡಿಯ ಪ್ರಶಾಂತ್ ಉಮಾ ರಾವ್ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ ಎಂದು ತಮಿಳುನಾಡು ಡಿಜಿಪಿ ಸಿ.ಸೈಲೇಂದ್ರ ಬಾಬು ತಿಳಿಸಿದ್ದಾರೆ.

ಅಲ್ಲದೇ, ಈ ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನಷ್ಟು ಮಂದಿಯನ್ನು ಪತ್ತೆ ಬಂಧಿಸಿ ಬಂಧಿಸಲಾಗುವುದು. ಸುಳ್ಳು ಸುದ್ದಿ ಹಬ್ಬಿಸುವವರು ಗರಿಷ್ಠ ಏಳು ವರ್ಷಗಳ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಡಿಜಿಪಿ ಎಚ್ಚರಿಕೆ ನೀಡಿದ್ದಾರೆ. ಮತ್ತೊಂದೆಡೆ, ಶುಕ್ರವಾರ ಸಂಜೆಯಿಂದ ಪೊಲೀಸರು, ಉತ್ತರ ಭಾರತದ ಕಾರ್ಮಿಕರಿಗೆ ಧೈರ್ಯ ತುಂಬುವ ನಿಟ್ಟಿನಲ್ಲಿ ಹಿಂದಿಯಲ್ಲಿ ಸಾರ್ವಜನಿಕ ಸೂಚನೆ ಪ್ರಕಟಿಸುತ್ತಿದ್ದಾರೆ. ಪೊಲೀಸರು ಟ್ವಿಟರ್​ನಲ್ಲಿ ಸರಣಿ ಪೋಸ್ಟ್​ಗಳನ್ನು ಮಾಡಿದರೆ, ವಲಸೆ ಕಾರ್ಮಿಕರ ಹೆಚ್ಚಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸಹ ಹಿಂದಿಯಲ್ಲಿ ಹೇಳಿಕೆಗಳನ್ನು ಬಿಡುಗಡೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ತಮಿಳುನಾಡಿನಲ್ಲಿ ಬಿಹಾರಿ ಕಾರ್ಮಿಕರ ಮೇಲೆ ಹಲ್ಲೆ ಆರೋಪ: ತನಿಖಾ ತಂಡ ಕಳುಹಿಸಲು ನಿರ್ಧಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.