ETV Bharat / bharat

ಕೋಮು ಸೌಹಾರ್ದತೆ ಕದಡುವವರ ವಿರುದ್ಧ ತಕ್ಷಣವೇ ಕ್ರಮ: ತಮಿಳುನಾಡು ಸಿಎಂ - ಜಿಲ್ಲಾಧಿಕಾರಿಗಳು ಪೊಲೀಸ್ ಅಧಿಕಾರಿಗಳು ಮತ್ತು ಅರಣ್ಯಾಧಿಕಾರಿಗಳ ಮೂರು ದಿನಗಳ ಚಿಂತನ ಮಂಥನ ಕಾರ್ಯದಲ್ಲಿ ತಮಿಳುನಾಡು ಸಿಎಂ ಭಾಗಿ

‘ಕಟ್ಟಾ ಪಂಚಾಯಿತಿ’ (ಸಾಮಾಜಿಕ ಬಹಿಷ್ಕಾರದಂತಹ ಘಟನೆ) ಮತ್ತು ಭೂ ಕಬಳಿಕೆಯಲ್ಲಿ ತೊಡಗಿರುವವರಿಗೆ ಯಾವುದೇ ರೀತಿಯ ವಿನಾಯತಿ ನೀಡಬಾರದು ಮತ್ತು ರೌಡಿಗಳ ವಿರುದ್ಧ ಕಡಿವಾಣ ಹಾಕುವಂತೆ ಸಿಎಂ ಅಧಿಕಾರಿಗಳಿಗೆ ಕರೆ ನೀಡಿದರು.

ಕೋಮು ಸೌಹಾರ್ದತೆ  ಕದಡುವವರ ವಿರುದ್ಧ ತಕ್ಷಣವೇ ಕ್ರಮ ಎಂದ ತಮಿಳುನಾಡು ಸಿಎಂ

author img

By

Published : Mar 10, 2022, 10:21 PM IST

ಚೆನ್ನೈ: ರಾಜ್ಯದಲ್ಲಿ ಕೋಮು ಸೌಹಾರ್ದತೆ ಕದಡುವವರ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಅರಣ್ಯಾಧಿಕಾರಿಗಳ ಮೂರು ದಿನಗಳ ಚಿಂತನ ಮಂಥನ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ವಿಷಯದಲ್ಲಿ ತಮ್ಮ ಸರ್ಕಾರ ರಾಜಿ ಮಾಡಿಕೊಳ್ಳುವುದಿಲ್ಲ ಮತ್ತು ತಮಿಳುನಾಡಿನಲ್ಲಿ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಅಧಿಕಾರಿಗಳಿಗೆ ತಿಳಿಸಿದರು.

ಸೈಕೋಟ್ರೋಪಿಕ್ ಪದಾರ್ಥಗಳ ಪ್ರಭಾವದಿಂದ ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಅಪರಾಧಗಳನ್ನು ತಮ್ಮ ಸರ್ಕಾರ ಅನುಮತಿಸುವುದಿಲ್ಲ ಎಂದು ಇದೇ ವೇಳೆ ಹೇಳಿದರು.

‘ಕಟ್ಟಾ ಪಂಚಾಯಿತಿ’ ( ಸಾಮಾಜಿಕ ಬಹಿಷ್ಕಾರದಂತಹ ಘಟನೆ) ಮತ್ತು ಭೂ ಕಬಳಿಕೆಯಲ್ಲಿ ತೊಡಗಿರುವವರಿಗೆ ಯಾವುದೇ ರೀತಿಯ ವಿನಾಯತಿ ನೀಡಬಾರದು ಮತ್ತು ರೌಡಿಗಳ ವಿರುದ್ಧ ಕಡಿವಾಣ ಹಾಕುವಂತೆ ಅಧಿಕಾರಿಗಳಿಗೆ ಕರೆ ಕೊಟ್ಟರು.

ರಾಜ್ಯವನ್ನು ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಮಾಡುವ ಗುರಿ ಹೊಂದಿದ್ದು, ಅದಕ್ಕೆ ಸರಿಯಾದ ಕಾನೂನು ಮತ್ತು ಸುವ್ಯವಸ್ಥೆ ಅನಿವಾರ್ಯವಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ನಾನು ಭಯೋತ್ಪಾದಕನಲ್ಲ, ನಿಜವಾದ ‘ದೇಶಭಕ್ತ’ ಎಂಬುದನ್ನು ಜನ ತೋರಿಸಿದ್ದಾರೆ: ಕೇಜ್ರಿವಾಲ್​

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.