ಜಮ್ಮು( ಜಮ್ಮು ಕಾಶ್ಮೀರ) : ಹೊಸ ವರ್ಷದ ಮೊದಲ ದಿನದಂದೇ ಜಮ್ಮುವಿನ ಕತ್ರಾದಲ್ಲಿರುವ ಮಾತಾ ವೈಷ್ಣೋದೇವಿ ಮಂದಿರದ ಕಟ್ಟಡದ ಬಳಿಯಿರುವ ಮಾತಾ ವೈಷ್ಣೋದೇವಿ ಭವನದಲ್ಲಿ ಕಾಲ್ತುಳಿತ ಸಂಭವಿಸಿದೆ. ಈ ಘಟನೆಯಲ್ಲಿ ಇದುವರೆಗೆ 12 ಮಂದಿ ಸಾವನ್ನಪ್ಪಿರುವುದು ದೃಢಪಟ್ಟಿದೆ.
ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿಯಾದ ಡಾ.ಗೋಪಾಲ್ ದತ್ ಪ್ರಕಾರ, ಸಾವಿನ ನಿಖರವಾದ ಅಂಕಿಅಂಶಗಳ ಬಗ್ಗೆ ಸರಿಯಾದ ಮಾಹಿತಿ ಇನ್ನೂ ಬಂದಿಲ್ಲ. ಮೃತ ದೇಹಗಳ ಮರಣೋತ್ತರ ಪರೀಕ್ಷೆ ನಡೆಯಲಿದೆ. ಸುಮಾರು 20 ಮಂದಿ ಗಾಯಾಳುಗಳನ್ನು ಕತ್ರಾದ ಕಮ್ಯುನಿಟಿ ಹೆಲ್ತ್ ಸೆಂಟರ್ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
ಈ ದುರಂತದಲ್ಲಿ ಎಷ್ಟು ಮಂದಿ ಗಾಯಗೊಂಡಿದ್ದಾರೆ ಎಂಬ ನಿಖರ ಅಂಕಿ ಅಂಶ ಬಹಿರಂಗವಾಗಿಲ್ಲ. ಕಾಲ್ತುಳಿತ ಹೇಗೆ ಸಂಭವಿಸಿತು ಎಂಬ ಬಗ್ಗೆ ಇನ್ನೂ ಸ್ಪಷ್ಟವಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಪ್ರಧಾನಿ ಸಂತಾಪ
ದುರ್ಘಟನೆ ಬಗ್ಗೆ ಪ್ರಧಾನಿ ಸಂತಾಪ ವ್ಯಕ್ತಪಡಿಸಿದ್ದು, ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ ಘಟನೆಯಲ್ಲಿ ಮಡಿದವರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ.
ಇದೇ ವೇಳೆ ಘಟನೆಯಲ್ಲಿ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರವನ್ನು ಪ್ರಕಟಿಸಲಾಗಿದೆ.
ಇದನ್ನೂ ಓದಿ: ಹೊಸ ವರ್ಷಾಚರಣೆಗೆ ಬಾಂಬ್ ಸ್ಫೋಟಿಸುವ ಸಂಚು ಬಹಿರಂಗ: ಹಿಮಾಚಲ ಪ್ರದೇಶದಲ್ಲಿ ಹೈ ಅಲರ್ಟ್